ಕಲ್ಪ ಮೀಡಿಯಾ ಹೌಸ್ | ಮೈಸೂರು |
ದಸರಾ ಸಮಯದಲ್ಲಿ ಬಲೂನು ಮಾರಲು ಬಂದಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ #Rape ಮಾಡಿ, ಆಕೆಯನ್ನು ಭೀಕರವಾಗಿ ಹತ್ಯೆ #Murder ಮಾಡಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಭೀಕರ ಕೃತ್ಯ ಎಸಗಿದ್ದ ಆರೋಪಿ ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31)ನನ್ನು ಪತ್ತೆ ಮಾಡಿ ಬಂಧಿಸಲು ಕೊಳ್ಳೆಗಾಲಕ್ಕೆ ತೆರಳಿದ್ದ ವೇಳೆ ಆತ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು #Firing ಹಾರಿಸಿದ್ದಾರೆ.
ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಆರೋಪಿ ಕೃತ್ಯ ಎಸಗಿದ ನಂತರ ಮೈಸೂರಿನ ಖಾಸಗಿ ಬಸ್ ನಿಲ್ದಾಣಕ್ಕೆ ತೆರಳಿ, ಅಲ್ಲಿಂದ ಬಸ್’ನಲ್ಲಿ ಕೊಳ್ಳೆಗಾಲಕ್ಕೆ ತೆರಳಿದ್ದ. ತನಿಖೆ ನಡೆಸುತ್ತಿದ್ದ ಪೊಲೀಸರು, ಸಿಸಿಟಿವಿ ದೃಶ್ಯವಾಳಿಗಳನ್ನು ಪರಿಶೀಲಿಸಿದ ವೇಳೆ ಈ ವಿಚಾರ ತಿಳಿದಿದೆ.ಇದನ್ನು ಆಧರಿಸಿ, ಆತನನ್ನು ಬಂಧಿಸಲು ಪೊಲೀಸರು ಕೊಳ್ಳೆಗಾಲಕ್ಕೆ ತೆರಳಿದ್ದರು. ಬಾಲಕಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ಮೈಸೂರಿಗೆ ಕರೆತರುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬಳಿಕ ಕರೆತಂದು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ದಸರಾ ಸಂದರ್ಭದಲ್ಲಿ 10 ವರ್ಷದ ಬಾಲಕಿಯೊಬ್ಬಳು ಬಲೂನು ಮಾರಲು ಬಂದಿದ್ದಳು. ಈವೇಳೆ ಈ ಕ್ರೂರ ರಾಕ್ಷಸ ಆಕೆಯನ್ನು ಹೊತ್ತೊಯ್ದು ಅತ್ಯಾಚಾರ ನಡೆಸಿ, ಆಕೆಯನ್ನು ಹತ್ಯೆ ಮಾಡಿದ್ದನು. ಬಾಲಕಿಯ ದೇಹದ ಮೇಲೆ ಬಟ್ಟೆಯು ಇಲ್ಲದೆ ಶವ ಬಿದ್ದಿರುವ ಹಿನ್ನೆಲೆಯಲ್ಲಿ ಆರಂಭಿಕವಾಗಿ ಇದನ್ನು ಪೊಲೀಸರು ರೇಪ್ ಅಂಡ್ ಮರ್ಡರ್ ಇರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದರು.ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50ಕ್ಕೂ ಹೆಚ್ಚು ಕುಟುಂಬ ಬಂದಿವೆ. ಅಂದು ರಾತ್ರಿ ಸುಮಾರು 2 ಗಂಟೆ ವೇಳೆಯಲ್ಲಿ ಅಪ್ರಾಪ್ತ ಬಾಲಕಿ ಮರ್ಡರ್ ಆಗಿತ್ತು.
ಇನ್ನು, ಆರೋಪಿ ಕಾರ್ತಿಕ್ 4 ತಿಂಗಳ ಹಿಂದಷ್ಟೇ ಈತ ಜೈಲಿನಿಂದ ಬಿಡುಗಡೆಯಾಗಿದ್ದ. ಮಂಡ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದ ಆರೋಪಿ, 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಈತ ಈಗ ಅದಕ್ಕೂ ಘೋರ ಕೃತ್ಯ ಎಸಗಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post