No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಧಾರ್ಮಿಕ–ಪ್ರಾಚೀನ ಮಾಹಿತಿಯನ್ನೊಳಗೊಂಡ 2026ರ ಕ್ಯಾಲೆಂಡರ್ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 22, 2025
in ಮೈಸೂರು
0
ಧಾರ್ಮಿಕ–ಪ್ರಾಚೀನ ಮಾಹಿತಿಯನ್ನೊಳಗೊಂಡ 2026ರ ಕ್ಯಾಲೆಂಡರ್ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೇಲುಕೋಟೆಯ ಭಗವದ್ ರಾಮಾನುಜ ರಾಷ್ಟ್ರೀಯ ಸಂಶೋಧನ ಸಂಸತ್ ವತಿಯಿಂದ ಪ್ರತಿ ವರ್ಷ ಪ್ರಕಟಿಸಲಾಗುವ ಧಾರ್ಮಿಕ ಹಾಗೂ ಪ್ರಾಚೀನ ಮಾಹಿತಿಯನ್ನೊಳಗೊಂಡ 2026ನೇ ಸಾಲಿನ ನೂತನ ಕ್ಯಾಲೆಂಡರ್ ಅನ್ನು ಭಾನುವಾರ ಲೋಕಾರ್ಪಣೆಗೊಳಿಸಲಾಯಿತು.

ಇಲ್ಲಿನ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ನಡೆದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಮೈಸೂರು ವಿಭಾಗದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ, ಶ್ರೀರಂಗಪಟ್ಟಣದ ಚಂದನವನ ಆಶ್ರಮದ ಶ್ರೀ ಕ್ಷೇತ್ರ ಬೇಬಿ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಕ್ಯಾಲೆಂಡರ್ ಅನಾವರಣಗೊಂಡಿತು.
ಮೇಲುಕೋಟೆ ಕ್ಷೇತ್ರವು ಐತಿಹಾಸಿಕ, ಪೌರಾಣಿಕ ಹಾಗೂ ಸಾಂಪ್ರದಾಯಿಕ ಮಹತ್ವ ಹೊಂದಿದ್ದು, ಜ್ಞಾನಮಂಟಪವೆಂದು ಪ್ರಸಿದ್ಧವಾಗಿದೆ. ಭಗವದ್ ರಾಮಾನುಜರ ತತ್ವ, ಸಿದ್ಧಾಂತ ಮತ್ತು ಸಂಪ್ರದಾಯಗಳನ್ನು ಸಮಾಜಕ್ಕೆ ಪರಿಚಯಿಸುವ ಉದ್ದೇಶದಿಂದ 1976ರಲ್ಲಿ ಸ್ಥಾಪಿತವಾದ ಈ ಸಂಸ್ಥೆ, ಪ್ರಸ್ತುತ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದೆ. 2026–27ರಲ್ಲಿ ಸಂಸ್ಥೆಯ ಸುವರ್ಣ ಮಹೋತ್ಸವ ಆಚರಿಸುವ ಕ್ರಿಯಾಯೋಜನೆಯೂ ರೂಪುಗೊಂಡಿದೆ.

ಸಂಸ್ಥೆಯಲ್ಲಿ ಸಂಗ್ರಹಿತವಾಗಿರುವ 10 ಸಾವಿರಕ್ಕೂ ಅಧಿಕ ತಾಳಪತ್ರ ಹಾಗೂ ಹಸ್ತಪ್ರತಿಗಳ ಸಂರಕ್ಷಣೆಗೆ ಡಿಜಿಟಲೀಕರಣ ಕಾರ್ಯ ಕೈಗೊಳ್ಳಲಾಗಿದ್ದು, ಈಗಾಗಲೇ 4 ಲಕ್ಷಕ್ಕೂ ಅಧಿಕ ತಾಳೆ ಎಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಈ ಸಂಗ್ರಹಗಳ ವಿವರಗಳನ್ನು 18 ಸಂಪುಟಗಳಾಗಿ ಪ್ರಕಟಿಸಲಾಗಿದೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಸ್. ಅಹಲ್ಯಾಶರ್ಮ ಅವರ ಮಾರ್ಗದರ್ಶನದಲ್ಲಿ, ಸಂಸ್ಥೆಯ ಕಾರ್ಯಚಟುವಟಿಕೆಗಳು, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೇಲುಕೋಟೆಯ ಪ್ರಾಚೀನ ಕೊಳಗಳ ಪರಿಚಯವನ್ನು ಒಳಗೊಂಡಂತೆ ಈ ಕ್ಯಾಲೆಂಡರ್ ರೂಪಿಸಲಾಗಿದೆ. ಡಾ. ಎ. ಪುಷ್ಪಅಯ್ಯಂಗಾರ್, ಡಾ. ಎ. ವೈದೇಹಿ ಅಯ್ಯಂಗಾರ್ ಹಾಗೂ ಮೆ. ಸತ್ಯವತಿ ವಿಜಯರಾಘವಾಚಾರ್ ಛಾರಿಟಬಲ್ ಟ್ರಸ್ಟ್ ಅವರ ಆರ್ಥಿಕ ಸಹಕಾರದಿಂದ ಕ್ಯಾಲೆಂಡರ್ ಪ್ರಕಟವಾಗಿದೆ.

ಕಾರ್ಯಕ್ರಮದಲ್ಲಿ ಭಗವದ್ ರಾಮಾನುಜ ರಾಷ್ಟ್ರೀಯ ಸಂಶೋಧನ ಸಂಸತ್‌ನ ಕುಲಸಚಿವ (ಆಡಳಿತ) ಎಸ್. ಕುಮಾರ್, ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್. ಶ್ರೀನಿವಾಸನ್, ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ಮಾರ್ಗದರ್ಶಕ ಕೆ. ಎಸ್. ಗೋಪಾಲಕೃಷ್ಣ, ಭಾರತೀ ಯೋಗಧಾಮದ ಸಂಸ್ಥಾಪಕ ಡಾ. ಕೆ. ಎಲ್. ಶಂಕರನಾರಾಯಣ ಜೋಯಿಸ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Vintage Car ರ‍್ಯಾಲಿ ಹಾಗೂ ವಾಕಾಥಾನ್ ಮೂಲಕ ಆಯುರ್ವೇದ ವಿಶ್ವ ಸಮ್ಮೇಳನದ ಜನಜಾಗೃತಿ

Next Post

ಭಾರತ ವಿಶ್ವಕ್ಕೆ ನೀಡಿದ ಮಹತ್ವದ ಕೊಡುಗೆ ಧ್ಯಾನ: ಸುರೇಶ್ ಋಗ್ವೇದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತ ವಿಶ್ವಕ್ಕೆ ನೀಡಿದ ಮಹತ್ವದ ಕೊಡುಗೆ ಧ್ಯಾನ: ಸುರೇಶ್ ಋಗ್ವೇದಿ

ಭಾರತ ವಿಶ್ವಕ್ಕೆ ನೀಡಿದ ಮಹತ್ವದ ಕೊಡುಗೆ ಧ್ಯಾನ: ಸುರೇಶ್ ಋಗ್ವೇದಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
South Western Railway Gears Up for Safe Monsoon Operations

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

June 22, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL