ಕಲ್ಪ ಮೀಡಿಯಾ ಹೌಸ್ | ಮೈಸೂರು |
ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ಆಯೋಜಿಸಿದ್ದ ರಾಷ್ಟ್ರಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಮೈಸೂರಿನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಮೂವರು ವಿದ್ಯಾರ್ಥಿಗಳು ಹಲವು ಪದಕಗಳನ್ನು ಗೆದ್ದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ದೇಶಾದ್ಯಂತದ 22ಕ್ಕೂ ಹೆಚ್ಚು ವಿದ್ಯಾಪೀಠದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಸೆಣಸಿದ್ದರು.
ಸುಘೋಷ ಆಚಾರ್ಯ
ಪುರಾಣ- ಇತಿಹಾಸ ಭಾಷಣ ಸ್ಪರ್ಧೆಯಲ್ಲಿ ಸ್ವರ್ಣ ಪದಕ ಮತ್ತು ವೇದಾಂತ ಭಾಷಣ ಸ್ಪರ್ಧೆಯಲ್ಲಿ ರಜತ ಪದಕ ಗಳಿಸಿದ್ದಾನೆ.
ಸೌಮಿತ್ರಿ ಆಚಾರ್ಯ
ಶ್ಲೋಕ ಅಂತ್ಯಾತ್ಯಾರೀ ಸ್ಪರ್ಧೆಯಲ್ಲಿ ರಜತ ಪದಕ ಮತ್ತು ಸಾಂಖ್ಯ ಶಾಸ್ತ್ರ ಭಾಷಣ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತನಾಗಿದ್ದಾನೆ.
Also read: ದ್ವಿತೀಯ ಪಿಯು ಪರೀಕ್ಷೆ: ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾಲೇಜುಗಳಿಗೆ ಉತ್ತಮ ಫಲಿತಾಂಶ
ಶ್ರೀಶ ಆಚಾರ್ಯ
ಧರ್ಮಶಾಸ್ತ್ರ ಭಾಷಣ ಸ್ಪರ್ಧೆಯಲ್ಲಿ ರಜತ ಪದಕ ಪಡೆದು ವಿದ್ಯಾಪೀಠದ ಕೀರ್ತಿಯನ್ನು ಹೆಚ್ಚಿಸಿದ್ದಾನೆ.
ಮೂವರು ವಿದ್ಯಾರ್ಥಿಗಳೂ ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶರಾದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿಯವರಲ್ಲಿ ಶ್ರೀ ಮನ್ ನ್ಯಾಯಸುಧಾ ಮತ್ತು ಚಂದ್ರಿಕಾ ಗ್ರಂಥಗಳ ಅಧ್ಯಯನ ಮಾಡುತ್ತಿದ್ದಾರೆ. ರಾಷ್ಟ್ರಮಟ್ಟದಲ್ಲಿ ಮೈಸೂರಿನ ಕೀರ್ತಿಯನ್ನು ಹೆಚ್ಚಿಸಿರುವುದು ವಿಶೇಷ ಎಂದು ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ.ಪಿ. ಮಧುಸೂದನಾಚಾರ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















