ಕಲ್ಪ ಮೀಡಿಯಾ ಹೌಸ್ | ಮೈಸೂರು |
‘ಅಗ್ನಿಪಥ್ Agnipath ಆದರ್ಶಪ್ರಾಯ ಯೋಜನೆಯಾಗಿದ್ದು, ಅಮೆರಿಕಾ, ಬ್ರಿಟನ್ ಸೇರಿದಂತೆ ಹಲವು ದೇಶಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದೆ. 20 ವರ್ಷ ತುಂಬಿದ ಯುವಕರು ಎರಡು ವರ್ಷ ಸೈನಿಕ ಶಿಕ್ಷಣ ಕಲಿಯುವುದು ಕಡ್ಡಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ Former CM S M Krishna ತಿಳಿಸಿದರು.
ಸ್ವಗ್ರಾಮ ಮದ್ದೂರಿನ ಸೋಮನಹಳ್ಳಿಯಲ್ಲಿ ಸಹೋದರ ದಿವಂಗತ ಎಸ್.ಎಂ .ಶಂಕರ್ ಮೆಮೋರಿಯಲ್ ಟ್ರಸ್ಟ್ ಗೆ ಚಾಲನೆ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಗ್ನಿವೀರರು ನಾಲ್ಕು ವರ್ಷ ಸೈನ್ಯದಲ್ಲಿ ಕೆಲಸ ನಿರ್ವಹಿಸಿದ ಬಳಿಕ ಬೇರೆ ಕಡೆಗಳಲ್ಲಿ ಉದ್ಯೋಗಗಳನ್ನು ಅವಲಂಬಿಸುವುದಕ್ಕೆ ಅವಕಾಶವಿದೆ. ಮಿಲಿಟರಿಯ ವಿವಿಧ ವಿಭಾಗಗಳು, ಖಾಸಗಿ ಕಂಪನಿಗಳು, ಸರಕಾರಿ ಹುದ್ದೆಗಳಲ್ಲೂ ಮೀಸಲಾತಿ ನೀಡುತ್ತಿರುವುದರಿಂದ ಉದ್ಯೋಗಕ್ಕೆ ಅವಕಾಶಗಳಿವೆ ಎಂದು ಹೇಳಿದರು.
Also read: ಚಿರು ಅಭಿನಯದ ರಾಜಮಾರ್ತಾಂಡ ಸೆಪ್ಟೆಂಬರ್ 2ರಂದು ತೆರೆಗೆ…











Discussion about this post