ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮೈಸೂರು ವಿಶ್ವವಿದ್ಯಾನಿಲಯದ #Mysore University ಅಂಗ ಸಂಸ್ಥೆಯಾದ ಪ್ರಾಚ್ಯವಿದ್ಯಾ ಸಂಶೋಧನಾಲಯವು ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ ಶೃಂಗೇರಿ ಸಂಸ್ಥೆಯೊಂದಿಗೆ #Shringeri Shri Sharadapeeta ಅಪ್ರಕಟಿತ ಹಸ್ತಪ್ರತಿಗಳಲ್ಲಿರುವ ಕೃತಿಗಳ ಕುರಿತಾದ ಒಂಡು ಒಡಂಬಡಿಕೆ ಸಹಿ ಮಾಡಲಾಗಿದೆ.
ಇದರ ಅಡಿಯಲ್ಲಿ ವಿದ್ವಾಂಸರ ಮೂಲಕ ಅಪ್ರಕಟಿತದವಾದ ಅಂದಾಜು 13000 ಹಸ್ತಪ್ರತಿಗಳಲ್ಲಿರುವ ಕೃತಿಗಳ ವರ್ಣನಾತ್ಮಕ ಸೂಚಿಯನ್ನು (Manuscripts Descriptive Catalogue) ಮಾಡಲು, ಆಯ್ದ ಕೃತಿಗಳನ್ನು ಪುಸ್ತಕರೂಪದಲ್ಲಿ ಮುದ್ರಿಸಲು ಮತ್ತು Digitization of catalogues in the form of searchable database ಮಾಡಲು ನಿಶ್ಚಯಮಾಡಲಾಗಿದೆ.

ಈ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎನ್.ಕೆ. ಲೋಕನಾಥ್, ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿರ್ದೇಶಕರಾದ ಡಾ. ಡಿ.ಪಿ. ಮಧುಸೂಧನಾಚಾರ್ಯ ಹಾಗೂ ಉಭಯ ಸಂಸ್ಥೆಗಳ ವಿದ್ವಾಂಸರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post