ಕಲ್ಪ ಮೀಡಿಯಾ ಹೌಸ್ | ಮೈಸೂರು |
ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ನುಡಿದರು.
ಅವರು ಮೈಸೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ. ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ. ಪರಿಹಾರ ನೀಡುತ್ತೇವೆ ಎಂದರು.
Also read: ನಿಮ್ಮ ಭಾವನೆಗಳಿಗೆ ವಿರುದ್ಧವಾಗಿ ನಿರ್ಧಾರ ಮಾಡಲ್ಲ, ಚನ್ನಪಟ್ಟಣ ಕಾರ್ಯಕರ್ತರಿಗೆ ಹೆಚ್‌ಡಿಕೆ ಭರವಸೆ

ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ. ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ. ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post