ಕಲ್ಪ ಮೀಡಿಯಾ ಹೌಸ್ | ಮೈಸೂರು |
ಕಳೆದ 10 ದಿನಗಳಿಂದ ವರ್ಣರಂಜಿತವಾಗಿ ನಡೆದ ನಾಡಹಬ್ಬ ಮೈಸೂರು ದಸರಾ #Dasara ಮಹೋತ್ಸವಕ್ಕ ಪಂಜಿನ ಕವಾಯತಿನ ಮೂಲಕ ಸಾಂಪ್ರದಾಯಿಕವಾಗಿ ತೆರೆ ಬಿದ್ದಿದೆ. ಆದರೆ ಈ ಮಧ್ಯೆ ಚಿನ್ನದ ಅಂಬಾರಿ #Ambari ಹಸ್ತಾಂತರ ಮಾಡುವುದು ತಡವಾಯಿತು ಎಂಬ ಆರೋಪ ಕೇಳಿಬಂದಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ವತಃ ಪ್ರಮೋದಾದೇವಿ ಒಡೆಯರ್ #Pramoda Devi Wadeyar ಸ್ಪಷ್ಟನೆ ನೀಡಿದ್ದು, ಇದು ಬೇಜವಾಬ್ದಾರಿ ಹೇಳಿಕೆ ಎಂದು ನಾನು ಹೇಳಲು ಬಯಸುತ್ತೇನೆ. ಅಂಬಾರಿಯನ್ನು ಮಧ್ಯಾಹ್ನ 2 ಗಂಟೆಗೆ ಹಸ್ತಾಂತರಿಸಲಾಗಿದೆ. ಈ ವಿಷಯ ನಮಗೂ ಆತಂಕ ಉಂಟು ಮಾಡಿತ್ತು ಎಂದು ಹೇಳಿದ್ದಾರೆ.
Also read: ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಸಾವು
ಎಲ್ಲಾ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ನಾವು ಪ್ರಯತ್ನಿಸಿದರೂ ಮತ್ತು ಅಂಬಾರಿ ಸಿದ್ಧವಾಗಿದ್ದರೂ ಸಂಬಂಧಿಸಿದ ಸಿಬ್ಬಂದಿಗಳು ಸರಿಯಾಗಿ ಜನಸಂದಣಿ ನಿರ್ವಹಣೆ ಮಾಡದ ಮತ್ತು ಕೆಲವು ಸರ್ಕಾರಿ ಕಾರುಗಳನ್ನು ಮಾರ್ಗ ಮಧ್ಯೆದಲ್ಲಿ ನಿಲ್ಲಿಸಿದ್ದರಿಂದ ಅಂಬಾರಿ ಸ್ಥಳಾಂತರಿಸಲು ತೊಂದರೆ ಆಯಿತು. ಅಂಬಾರಿ ಹಸ್ತಾಂತರದ ಸಮಯದ ಬಗ್ಗೆ ತಪ್ಪು ತಿಳುವಳಿಕೆಯನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ನಾನು ಈ ಹೇಳಿಕೆಯನ್ನು ನೀಡಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಸಂಬಂಧಪಟ್ಟ ಎಲ್ಲರಿಗೂ ಅನಗತ್ಯ ಆತಂಕವನ್ನು ತಪ್ಪಿಸುವ ಉದ್ದೇಶ ಹೊರತು ಬೇರೆ ಯಾವುದೇ ಉದ್ದೇಶದಿಂದಲ್ಲ. ಮುಂದೆ ಈ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post