No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರಿನ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ಮತ್ತೊಂದು ಅರ್ಥಪೂರ್ಣ ಸೇವಾಕಾರ್ಯ

ಉಪಾಕರ್ಮ ಆಚರಣೆಗೆ ಅವಶ್ಯಕ ಸಾಮಗ್ರಿಗಳ ಕಿಟ್ ವಿತರಣೆ: ಅಧ್ಯಕ್ಷ ಕೆ.ಆರ್. ಗಣೇಶ್

kalpa News by kalpa News
August 30, 2023
in ಮೈಸೂರು
0
ಮೈಸೂರಿನ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ಮತ್ತೊಂದು ಅರ್ಥಪೂರ್ಣ ಸೇವಾಕಾರ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಮೈಸೂರು |

ಶೃಂಗೇರಿ ಜಗದ್ಗುರುಗಳು ತಿಳಿಸಿದಂತೆ ಬ್ರಾಹ್ಮಣರಿಗೆ ಸಂಧ್ಯಾವಂದನೆಯೇ ಅತ್ಯಂತ ಪ್ರಮುಖವಾದುದಾಗಿದ್ದು, ಗುರುಗಳ ಅನುಗ್ರಹ ಸಂದೇಶವನ್ನು ಸ್ವೀಕರಿಸಿ ಚಾಮರಾಜನಗರದ ಕೂಡ್ಲೂರು ಗ್ರಾಮದ ಸ್ಥಳ ಪುರೋಹಿತರಾಗಿದ್ದ ಕೀರ್ತಿಶೇಷ ಗುಂಡಪ್ಪನವರ ಹೆಸರಿನಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ ಎಂದು ಸ್ಥಾಪಿಸಿ ಅದರ ಮೂಲಕ ಸಾಮಾಜಿಕ ಚಟುವಟಿಕೆ ಮಾಡಲು ಸಂಕಲ್ಪಿಸಿದೆ ಎಂದು ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಕೆ.ಆರ್. ಗಣೇಶ್ ಹೇಳಿದರು.

ಋಗ್ವೇದ ಹಾಗೂ ಯಜುರ್ವೇದ ಉಪಾಕರ್ಮ Upakarma ಅಂಗವಾಗಿ ಜಯನಗರದ ಪಟ್ಟಾಭಿ ರಾಮಮಂದಿರದಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ ದಿಂದ ನೆರೆದಿದ್ದ 80ಕ್ಕೂ ಹೆಚ್ಚು ಬ್ರಾಹ್ಮಣರಿಗೆ ಉಪಾಕರ್ಮಕ್ಕೆ ಯಜ್ಞೋಪವೀತ, ಶಂಕರಾಚಾರ್ಯರ ಭಾವಚಿತ್ರ, ಉಭಯ ಜಗದ್ಗುರುಗಳ ಭಾವಚಿತ್ರ ಹಾಗೂ ಶೃಂಗೇರಿ ಮಠ ಪ್ರಕಟಿಸಿರುವ ಸಂಧ್ಯಾವAದನೆಯ ಪುಸ್ತಕದ ಕಿಟ್ ವಿತರಿಸಿ ಅವರು ಮಾತನಾಡಿದರು.
ಚಾಮರಾಜನಗರ, ಮೈಸೂರು ಹಾಗೂ ಚಾಮರಾಜನಗರದಲ್ಲಿ ಮುಂಬರುವ ಋಗುಪಾಕರ್ಮ ಹಾಗೂ ಯಜುರ್ವೇದ ಉಪಾಕರ್ಮ ಪ್ರಯುಕ್ತ ಬ್ರಾಹ್ಮಣರಿಗೆ ಯಜ್ಞೋಪವೀತ, ಶೃಂಗೇರಿ ಮಠ ಪ್ರಕಟಿಸಿರುವ ಸಂಧ್ಯಾವಂದನೆಯ ಪುಸ್ತಕ, ಶಂಕರಾಚಾರ್ಯರ ಭಾವಚಿತ್ರ, ಉಭಯ ಜಗದ್ಗುರುಗಳ ಭಾವಚಿತ್ರ ಹಾಗೂ ಶಾರದಾ ಮಾತೆಯ ಭಾವಚಿತ್ರ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ವತಿಯಿಂದ ನೀಡಲಾಗಿದೆ ಎಂದರು.

ಪ್ರತಿಯೊಬ್ಬರು ಸಹ ಪ್ರತಿ ನಿತ್ಯ ಸಂಧ್ಯಾವಂದನೆ ಹಾಗೂ ಗಾಯತ್ರಿ ಜಪವನ್ನು ಮಾಡಬೇಕು. ಜಪ ತಪ ಧ್ಯಾನಗಳನ್ನು ಮಾಡುವುದರಿಂದ ಮನಸ್ಸನ್ನು ನಿಯಂತ್ರಣ ಮಾಡಬಹುದು ಇಂದಿನ ಕಾಲದ ಔದ್ಯೋಗಿಕ ಹಾಗೂ ಸಾಮಾಜಿಕ ಒತ್ತಡಗಳಿಂದ ಸುಲಭವಾಗಿ ಹೊರಬರಲು ದೇಹ ಮತ್ತು ಮನಸ್ಸನ್ನು ಪ್ರಶಾಂತತೆ ಇಂದ ಇಡಲು ಸಂಧ್ಯಾವಂದನೆ ಅತ್ಯಂತ ಸಹಕಾರಿ ಎಂದರು.
ಮನೆಯ ಮಕ್ಕಳಿಗೆ ನಾವೇ ಮಾದರಿ ನಾವು ಎಷ್ಟು ಧರ್ಮ ನಿಷ್ಠರಾಗಿ ಇರುತ್ತೇವೋ ಅದನ್ನೇ ಮಕ್ಕಳು ಕಲಿಯುತ್ತಾರೆ, ನಾವು ಪೂಜೆ ಪುನಸ್ಕಾರ ಸಂಸ್ಕಾರ ಸಂಸ್ಕೃತಿಗಳನ್ನು ಅಳವಡಿಸಿಕೊಂಡರೆ ಮನೆಯಲ್ಲಿ ಮಕ್ಕಳು ಸಹ ಕಲಿಯುತ್ತಾರೆ ನಮ್ಮ ಸಂಸ್ಕಾರಗಳು ಅವಿಚ್ಛಿನ್ನವಾಗಿ ಮುಂದುವರೆಯುತ್ತದೆ ಇಲ್ಲದಿದ್ದರೆ ಮುಂದಿನ ಪೀಳಿಗೆಗೆ ನಮ್ಮ ಆಚಾರ ವಿಚಾರಗಳ ಪರಿಚಯವೇ ಇಲ್ಲದಂತಾಗುತ್ತದೆ. ಧರ್ಮೋ ರಕ್ಷತಿ ರಕ್ಷಿತಾಃ ಎಂದು ಶಾಸ್ತ್ರ ಹೇಳುತ್ತದೆ ಅಂತಹ ಧರ್ಮವನ್ನು ನಾವು ದಿನನಿತ್ಯದ ಜೀವನದಲ್ಲಿ ಕಾಪಾಡಿಕೊಂಡರೆ ಆ ಧರ್ಮವೇ ನಮ್ಮನ್ನು ಕಾಪಾಡುತ್ತದೆ, ಇಲ್ಲಿ ಧರ್ಮವೆಂದರೆ ಉತ್ತಮ ಜೀವನ ಶೈಲಿ, ಉತ್ತಮವಾದ ಜೀವನ ಶೈಲಿ ರೂಢಿಸಿಕೊಂಡರೆ ಆ ಜೀವನ ಶೈಲಿಯೇ ನಮ್ಮನ್ನು ಕಾಪಾಡುತ್ತದೆ ಎಂಬುದೇ ಇದರ ಅರ್ಥ. ಅಗತ್ಯ ಉಪಾಕರ್ಮ ಸಾಮಾಗ್ರಿಗಳನ್ನು ಒಳಗೊಂಡ ಈ ಕಿಟ್ ಅನ್ನು ಬಳಸಿಕೊಂಡು ಉಪಾಕರ್ಮ ಆಚರಣೆ ಮಾಡಲು ತಿಳಿಸಿದರು.

Also read: ಮಡಿಕೇರಿ: ನೇಣು ಹಾಕಿಕೊಂಡು ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ

ವೇದ ಗುರುಗಳಾದ ಶಿವರಾಂ ಅವರು ಮಾತನಾಡಿ, ನಾವು ಬೆಳೆದ ಮೇಲೆ ಎಷ್ಟೋ ಸಣ್ಣ ವಿಚಾರಗಳನ್ನು ಮರೆಯುತ್ತೇವೆ. ಯಾವುದು ಸಣ್ಣ ವಿಚಾರವೆಂದು ಪರಿಗಣಿಸಿ ನಿರ್ಲರ್ಕ್ಷ್ಯ ಮಾಡುತ್ತೇವೊ ಅದೇ ನಮ್ಮ ಜೀವನದಲ್ಲಿ ದೊಡ್ಡ ಬದಲಾವಣೆ ತರುತ್ತದೆ ಪೂಜೆ, ಸಂಧ್ಯಾವಂದನೆ, ಧ್ಯಾನ ಹಾಗೂ ಜಪ ನಮ್ಮ ನಿತ್ಯ ಕಾಯಕವಾಗಬೇಕು ಎಂದು ತಿಳಿಸಿದರು.
ಪ್ರತಿಷ್ಠಾನದ ಸಂಚಾಲಕರಾದ ಪುನೀತ್ ಮಾತನಾಡಿ, ಯುವಕರು ತಮ್ಮ ಶಿಕ್ಷಣ, ಹವ್ಯಾಸ, ಉದ್ಯೋಗದ ಜೊತೆಗೆ ಆಧ್ಯಾತ್ಮಿಕ ವಿಚಾರಗಳನ್ನು ತಿಳಿದು ಕೊಳ್ಳಬೇಕು. ಸನಾತಾನ ಸಂಸ್ಕೃತಿಯ ವಾರಸುದಾರರು ನಾವು ಯುವಕರು, ಧರ್ಮ, ಶಿಕ್ಷಣ,ಸಂಸ್ಕಾರ ವಿಚಾರಗಳನ್ನು ಜಗತ್ತಿಗೆ ತಿಳಿಸಲು ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ ಯಾವಾಗಲೂ ಸಿದ್ದವಾಗಿರುತ್ತದೆ ಎಂದು ತಿಳಿಸಿದರು.

ಬ್ರಾಹ್ಮಣ ಯುವ ವೇದಿಕೆ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ ಮಾತನಾಡಿ, ಬ್ರಾಹ್ಮಣರು ಸರ್ಕಾರದ ಯಾವುದೇ ಸೌಲಭ್ಯ ಪಡೆಯಲು ಹಿಂಜರಿಯ ಬಾರದು, ಬ್ರಾಹ್ಮಣ ಯುವ ವೇದಿಕೆ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಕಾರ್ಯೋಮುಖವಾಗಿದೆ ಎಂದು ತಿಳಿಸಿದರು.
ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಅವರು ಮಾತನಾಡಿ, ಬ್ರಾಹ್ಮಣ ಸಮುದಾಯ ಇಂದು ಶಿಕ್ಷಣ, ಉದ್ಯೋಗದ ದೃಷ್ಟಿಯಿಂದ ವಲಸೆ ಹೋಗುತ್ತಿದ್ದಾರೆ. ವಲಸೆ ಹೋದವರು ಮತ್ತೆ ಮರಳಿ ಬಂದು ಅವರಿಗೆ ಗ್ರಾಮ ಗಳಲ್ಲಿ ಅವರಿಗೆ ಇದ್ದ ಧಾರ್ಮಿಕ ಜವಾಬ್ದಾರಿ ಮುಂದುವರೆಸಲು ಆಗುತ್ತಿಲ್ಲ. ಇದರಿಂದ ಸ್ಥಳೀಯವಾಗಿ ಧಾರ್ಮಿಕ ಚಟುವಟಿಕೆಗಳು ನೆಡೆಸಲು ಬೇರೆ ಊರುಗಳಿಂದ ಬರಬೇಕಾದ ಪರಿಸ್ಥಿತಿ ಇದೆ. ಯುವಕರು ಶಿಕ್ಷಣದೊಂದಿಗೆ ವೇದಾಧ್ಯಯನ, ಆಗಮ, ಜ್ಯೋತಿಷ್ಯ, ಶಾಸ್ತ್ರ, ಪುರಾಣಗಳ ವಿಚಾರಗಳನ್ನು ಸಹ ತಿಳಿಯಬೇಕು. ಇದರಿಂದ ಮುಂದಿನ ತಲೆಮಾರಿಗೆ ನಾವು ಸನಾತನ ಸಂಸ್ಕೃತಿಯನ್ನು ಉಳಿಸಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ವತಿಯಿಂದ ಬ್ರಾಹ್ಮಣ ಸಂಘಟನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸ್ಪಿರಿಟ್ ಇವೆಂಟ್ ಮಾಲಿಕರು ಹಾಗೂ ಬ್ರಾಹ್ಮಣ ಯುವ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತಿç ಹಾಗೂ ಸಮಾಜದಲ್ಲಿ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೆ.ಆರ್. ಗಣೇಶ್ , ನಿರಂಜನ್ ಕಾಶ್ಯಪ ಸಿಂಹ , ಪ್ರಸನ್ನ ಹಾಗೂ ಕೂಡ್ಲೂರು ಗುಂಡಪ್ಪ ರವರ ಕುಟುಂಬ ವರ್ಗ, ಜಯನಗರ ರಾಮಮಂದಿರದ ವೆಂಕಟೇಶ್ವರ ರಾವ್, ಶಿವರಾಂ, ಸುರೇಶ್, ವೇದ ಬಳಗದ ದತ್ತಣ್ಣ ಋಗ್ವೇದ, ಅವನಿ ಶಂಕರ ಮಠದ ನಾಗೇಂದ್ರ, ಅಜಯ್ ಶಾಸ್ತ್ರಿ, ವಿಕ್ರಂ ಅಯ್ಯಂರ್ಗಾ, ಪೃಥು ಪಿ ಅದ್ವೈತ್ ಸೇರಿ ಹಲವರು ಇದ್ದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limitedKalahamsa Infotech private limitedKalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಡಿಕೇರಿ: ನೇಣು ಹಾಕಿಕೊಂಡು ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ

Next Post

ಅಂತರಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ: ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ

kalpa News

kalpa News

Next Post
ಅಂತರಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ: ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ

ಅಂತರಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ: ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL