ಕಲ್ಪ ಮೀಡಿಯಾ ಹೌಸ್
ಮೈಸೂರು: ಜಿಲ್ಲೆಯ ಡಿಸಿ ಹಾಗೂ ಮಂತ್ರಿಗಳಿಗೆ ಆರ್ಥಿಕ ಹೊಣೆಗಾರಿಕೆ ನೀಡಿಲ್ಲ. ಜಿಲ್ಲಾಡಳಿತಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ಬೆಂಗಳೂರಿಗೆ ತೆರಳಿ ಅನುಮತಿ ಪಡೆಯುವ ಪರಿಸ್ಥಿತಿ ಇದೆ. ಇಲ್ಲಿ ಅಧಿಕಾರ ಕೇಂದ್ರೀಕರಣ ಆಗಿದೆ ಎಂದು ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಕೊರೋನಾಗೆ ಸಂಬಂಧಿಸಿದ ಮಾತ್ರೆಗಳು ಸಿಗುತ್ತಿಲ್ಲ. ಮೆಡಿಸನ್‌ಗಳಿಗಾಗಿ ಬೆಂಗಳೂರಿಗೆ ಹೋಗಬೇಕು. ಒಬ್ಬರೇ ಅಧಿಕಾರವನ್ನು ಇಟ್ಟುಕೊಂಡಿದ್ದಾರೆ. ಪ್ರತಿಯೊಬ್ಬ ಜಿಲ್ಲಾಧಿಕಾರಿಗೂ ಅವರಿಗೆ ಇರುವ ಅಧಿಕಾರವನ್ನು ಬಳಸಲು ಅವಕಾಶ ಕೊಡಿ. ಅವರ ಮೇಲೆ ಆಡಳಿತ ನಡೆಸಬೇಡಿ ಎಂದರು.
ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾತಾನಾಡಿದ ಅವರು, ಜಿಲ್ಲಾಧಿಕಾರಿಗಳು ಬೆಳಗ್ಗೆ 6 ರಿಂದ 8 ರವರೆಗೆ ವ್ಯಾಪಾರಕ್ಕೆ ಅವಕಾಶ ಕೊಡುತ್ತೇವೆ ಎಂದು ಹೇಳಿದ್ದಾರೆ. ಪ್ರತಿನಿತ್ಯ ಅಂಗಡಿ ತೆರೆಯುವುದರಿಂದ ಜನ-ಜಂಗುಳಿ ಸೇರುತ್ತಿದೆ. ವಾರಕ್ಕೆ ಒಂದು ದಿನ ಮಾತ್ರ ಅವಕಾಶ ಕೊಟ್ಟು ಉಳಿದ ದಿನಗಳಂದು ಸಂಪೂರ್ಣ ಲಾಕ್‌ಡೌನ್ ಮಾಡುವುದು ಸೂಕ್ತ ಎಂದು ಸಲಹೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post