ಕಲ್ಪ ಮೀಡಿಯಾ ಹೌಸ್ | ಮೈಸೂರು/ಬಳ್ಳಾರಿ |
ರಾಜ್ಯ ವಿವಿದೆಢೆಗಳಲ್ಲಿ ಮುಂಗಾರು ಪೂರ್ವ ವರುಣನ ಅಬ್ಬರಕ್ಕೆ ಸಾಲು ಸಾಲು ದುರಂತಗಳು ಸಂಭವಿಸಿವೆ.
ಮೈಸೂರು ವರದಿ:
ಜಿಲ್ಲೆಯ ಒಂಟಿಕೊಪ್ಪಲ್ ಬಳಿಯ ಬಿಳಿಕೆರೆ ಠಾಣಾ ವ್ಯಾಪ್ತಿಯಲ್ಲಿ ಸಿಡಿಲು ಬಡಿದು ರೈತನೊಬ್ಬ ಸಾವನ್ನಪ್ಪಿದ್ದಾನೆ.
ಹೊಲಕ್ಕೆ ನೀರು ಹಾಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಹರೀಶ್(42) ಎಂಬ ರೈತ ಸಾವನ್ನಪ್ಪಿದ್ದಾನೆ.
ಇನ್ನು, ಮಳೆಯಿಂದಾಗಿ ಬಿದ್ದಿದ್ದ ಮರದ ಕೊಂಬೆಗಳನ್ನು ಸರಿಸುವಾಗ ಆಕಸ್ಮಿಕವಾಗಿ ವಿದ್ಯುತ್ ಸಂತಿ ಸ್ಪರ್ಶಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ದಾವಣಗೆರೆ ವರದಿ:
ಸಿಡಿಲು ಬಡಿದು ತೆಂಗಿನ ಮರ ಹಾಗೂ 20ಕ್ಕೂ ಅಧಿಕ ಅಡಿಕೆ ಮರಗಳು ಭಸ್ಮವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕೊಂಡದಹಳ್ಳಿಯಲ್ಲಿ ನಡೆದಿದೆ.
ಶ್ರೀನಿವಾಸ್ ಎನ್ನುವವರಿಗೆ ಸೇರಿದ ತೋಟದಲ್ಲಿದ್ದ ತೆಂಗಿನ ಮರ ಸಿಡಿಲಿಗೆ ಹೊತ್ತಿ ಉರಿದಿದೆ. ಅಗ್ನಿಯ ಕೆನ್ನಾಲಿಗೆ ವ್ಯಾಪಿಸಿ ಸುಮಾರು 20ಕ್ಕೂ ಅಧಿಕ ಅಡಿಕೆ ಮರಗಳೂ ಸಹ ಭಸ್ಮವಾಗಿದ್ದು, ಅಂದಾಜು 3 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.
ಬಳ್ಳಾರಿ ವರದಿ:
ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಸಾವಿಗೀಡಾದ ಘಟನೆ ನಡೆದಿದೆ.
ಗ್ರಾಮ ಪಂಚಾಯ್ತಿ ಸದಸ್ಯ ಮಲ್ಲಿಕಾರ್ಜುನ ಅವರು ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಪರಿಣಾಮವಾಗಿ ಸ್ಥಳದಲ್ಲೇ ಅವರ ಮೃತಪಟ್ಟಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post