ಕಲ್ಪ ಮೀಡಿಯಾ ಹೌಸ್ | ಮೈಸೂರು |
ಬ್ರಹ್ಮೀಭೂತ ಶ್ರೀ ವಾಸುದೇವ ಮಹಾರಾಜ್ ರವರ 16ನೇ ಆರಾಧನೆ ಅಂಗವಾಗಿ ಮೈಸೂರಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ಸಂಜೆ 4.30 ಗಂಟೆಗೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಶ್ರೀ ವಾಸುದೇವ ಮಹಾರಾಜ್ ಸದ್ಭಾವನಾ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಕಾರ್ಯಕ್ರಮ ಉಧ್ಘಾಟಿಸಲಿದ್ದು, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವರು.
ಸಮಾರಂಭದಲ್ಲಿ ಹಿರಿಯ ಸಮಾಜ ಸೇವಕ ಡಾ.ಕೆ. ರಘುರಾಮ ವಾಜಪೇಯಿ ಹಾಗು ಬೆಂಗಳೂರಿನ ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಕಾರ್ಯಯಕ್ರಮದಲ್ಲಿ ಮುಖ್ಯ ಅಥಿಗಳಾಗಿ ಭಾಗವಹಿಸುವರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















