No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮೈಸೂರು | ಶತಮಾನೋತ್ಸವಕ್ಕೆ ಸಂಭ್ರಮದ ತೆರೆ | ಶಾರದಾಂಬೆಗೆ ಲಕ್ಷ ಮಲ್ಲಿಗೆ ಪುಷ್ಪಾರ್ಚನೆ

ಒಂದು ವಾರದ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗೆ ಮಂಗಳ | ಎಲ್ಲೆಲ್ಲೂ ಹರಡಿತ್ತು ಭಕ್ತಿ- ಭಾವದ ಘಮಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 7, 2024
in Special Articles, ಮೈಸೂರು
0
ಮೈಸೂರು | ಶತಮಾನೋತ್ಸವಕ್ಕೆ ಸಂಭ್ರಮದ ತೆರೆ | ಶಾರದಾಂಬೆಗೆ ಲಕ್ಷ ಮಲ್ಲಿಗೆ ಪುಷ್ಪಾರ್ಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |  ರಘುರಾಮ ಮೈಸೂರು  |

ಜಗನ್ಮಾತೆ ಶ್ರೀ ಶಾರದಾಂಬೆಗೆ ಲಕ್ಷ ಮಲ್ಲಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಶನಿವಾರ ಮೈಸೂರಿನ ಅಭಿನವ ಶಂಕರಾಲಯದ #AbhinavaShankaralaya ಶತಮಾನೋತ್ಸವ ಸಂಭ್ರಮದ ಸಂಭ್ರಮದ ತೆರೆ ಎಳೆಯಲಾಯಿತು.

ಕಳೆದ ಒಂದು ವಾರದಿಂದ ಐತಿಹಾಸಿಕ ದೇಗುಲದ ಆವರಣದಲ್ಲಿ ಮೂಡಿದ್ದ ಸಂಭ್ರಮಕ್ಕೆ ಸಾಕ್ಷಿಯಾದ ಶಾರದಾಂಬೆ, ಸತ್ಯನಾರಾಯಣ, ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಮಹಾಸ್ವಾಮಿಗಳ ದೇಗುಲದಲ್ಲಿ ಶನಿವಾರ ಮಲ್ಲಿಯೆಯದ್ದೇ ಘಮಲು.
ಶಿಖರ ಕುಂಭಾಭಿಷೇಕ, ಕಳಸ ಪ್ರತಿಷ್ಠಾಪನೆ, ವಿವಿಧ ಹೋಮ, ಹವನ, ಆದುಕಾ ಪೂಜೆ, ಪಾರಾಯಣಗಳಿಗೆ ಪಂಡಿತರ ದಂಡೇ ವಾರದಿಂದ ಇಲ್ಲಿ ಬೀಡು ಬಿಟ್ಟಿತ್ತು. ಅವರೆಲ್ಲರಿಗೂ ಶನಿವಾರ ಧನ್ಯತಾ ಭಾವ. ನೂತನ ಶ್ರೀ ಸಚ್ಚಿದಾನಂದ ವಿಲಾಸ ಗುರುಭವನವಂತೂ ಸಂಸ್ಥಾನ ಪೂಜೆ, ಚಂದ್ರಮೌಳೇಶ್ವರನ ಆರಾಧನಾ ನೆಲೆಯಾಗಿ, ಗುರುಪೀಠಕ್ಕೆ ವೇದಿಕೆಯಾಗಿ ರಾರಾಜಿಸಿತು.

ಶನಿವಾರ ಮುಂಜಾನೆಯಿಂದ ವೇದ ಘೋಷದೊಂದಿಗೆ ಶಾರದಾಂಬೆಗೆ ವಿಶೇಷ ಅಭಿಷೇಕ, ಪೂಜೆ, ನೈವೇದ್ಯ ಸಮರ್ಪಣೆಯಾಯಿತು. ಶೃಂಗೇರಿಯ ನೂರರು ವೇದ ವಿದ್ವಾಂಸರು ಅಷ್ಟೋತ್ತರ, ಶ್ರೀ ಸೂಕ್ತ ಮತ್ತಿತರ ಮಂತ್ರೋಚ್ಛಾರಣೆ ಮೂಲಕ ಶಕ್ತಿ ಶಾರದೆಗೆ ನಮಿಸಿದ್ದು, ವಾರಪೂರ್ಣ ಚಟುವಟಿಕೆಗಳನ್ನು ಆಕೆಯ ಪಾದ ಕಮಲಗಳಿಗೆ ವಿನಮ್ರವಾಗಿ ಸಮರ್ಪಣೆ ಮಾಡಿದ್ದು ವಿಶೇಷವಾಗಿತ್ತು.

ಎಲ್ಲವೂ ಪರಮ ಗುರುಗಳ ಕೃಪೆಯಿಂದಲೇ ಆಗಿದೆ. ಜಗದ್ಗುರು ಶ್ರೀ ವಿಧುಶೇಖರ ಭಾರತೀತೀರ್ಥರ #VidhushekharaBharatiSwamiji ಆಜ್ಞೆ ಮತ್ತು ಆದೇಶದಂತೆ ಸಕಲ ಸೇವೆಗಳೂ ಸಂಪನ್ನಗೊಂಡಿವೆ ಎಂಬ ಆತ್ಮಾನಂತ ಎಲ್ಲರಲ್ಲೂ ಕಂಡುಬಂತು. ನಾನು- ನನ್ನಿಂದಲೇ ಎಂಬ ಲವಲೇಶ ಸ್ವಾರ್ಥವೂ ನೆರೆದ ಭಕ್ತಗಣದಲ್ಲಿ ಕಾಣಲೇ ಇಲ್ಲ. ಎಲ್ಲೆಲ್ಲೂ ಭಕ್ತಿ- ಭಾವವೇ ಮೇಳೈಸಿದ್ದು, ಅದಕ್ಕೆ ಶನಿವಾರ ಮಂಗಳಾಚರಣೆ!
ಈ ಸಂದರ್ಭಕ್ಕೆ ನೂರಾರು ಭಕ್ತರು ಸಾಕ್ಷಿಯಾದರು. ಶಾರದೆಗೆ ಮಂಗಳಾರತಿ ಸಮರ್ಪಿಸಿದ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ, ಒಂದು ವಾರಗಳ ಕಾಲ ವಿಶೇಷ ಉತ್ಸವಕ್ಕೆ ಶ್ರಮಿಸಿದ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಗುಮೊಗದಿಂದ ಹರಸಿದರು.

ಮುಂದಿನ ನೂರಾರು ವರ್ಷಗಳವರೆಗೆ ಈ ತಾಣದಲ್ಲಿ ಸನಾತನ ಪರಂಪರೆಯ ಚಟುವಟಿಕೆಗಳು ಇಲ್ಲಿ ವಿಜೃಂಭಿಸಲಿ ಎಂದು ಆಶೀರ್ವದಿಸಿದರು.

ನಂತರ ಶ್ರೀ ಸಚ್ಚಿದಾನಂದ ವಿಲಾಸ ಗುರುಭವನದಲ್ಲಿ ಸ್ವಾಮೀಜಿ ಪಾದಪೂಜೆ ಸ್ವೀಕಾರ ಮಾಡಿದರು. ಭಕ್ತರಿಗೆ ಫಲ, ಮಂತ್ರಾಕ್ಷತೆ ನೀಡಿದರು. ನೂರಾರು ಮಾತೆಯರು ಗುರುನಮನ ಸಮರ್ಪಿಸಲು ಗುರುಚರಿತ್ರೆ ಪಾರಾಯಣ ಮಾಡಿದರು.

ಮೈಸೂರಿನ ಶೃಂಗೇರಿ ಶ್ರೀ ಶಂಕರ ಮಠದ ಅಭಿನವ ಶಂಕರಾಲಯದ ಶತಮಾನೋತ್ಸವ ಸಂಭ್ರಮಾಚರಣೆಯಲ್ಲಿ ಶೃಂಗೇರಿ ಶ್ರೀ ಶಾರದಾಪೀಠದ ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿಧಾನಂರವರು ವಿಶೇಷ ಅಂಚೆ ಲಕೋಟೆಯನ್ನು ಲೋಕಾರ್ಪಣೆ ಮಾಡಿ ಆಶೀರ್ವದಿಸಿದರು. ಶ್ರೀಮಠದ ಆಡಳಿತಾಧಿಕಾರಿ ಶ್ರೀ ಪಿ ಎ ಮುರಳಿ, ಧರ್ಮಾಧಿಕಾರಿ ಶ್ರೀ ಹೆಚ್ ರಾಮಚಂದ್ರ, ಸಪ್ತಮಾತೃಕ ದೇವಸ್ಥಾನದ ಅಧ್ಯಕ್ಷರಾದ ಕೆ ಭಾಸ್ಕರ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ನಂ ಶ್ರೀಕಂಠ ಕುಮಾರ್ ಉಪಸ್ಥಿತರಿದ್ದರು.

ಶಿವಾನಂದ ಲಹರೀ, ಲಲಿತಾ ಸಹಸ್ರನಾಮ, ಸೌಂದರ್ಯ ಲಹರಿ ಅನುರಣಿಸಿದವು. ಎಲ್ಲರಿಗೂ ತೀರ್ಥ ಪ್ರಸಾದ ವಿತರಣೆ ನೆರವೇರಿತು. ಅಭಿನವ ಶಂಕರಾಲಯದ ಧರ್ಮಾಧಿಕಾರಿ ಎಚ್. ರಾಮಚಂದ್ರನ್, ಮಠದ ವ್ಯವಸ್ಥಾಪಕ ಶೇಷಾದ್ರಿ ಭಟ್ ಇತರರು ಇದ್ದರು.

ರಂಜಿಸಿದ ಸಂಗೀತ
ಖ್ಯಾತ ಕಲಾವಿದೆ ಅಪರ್ಣಾ ಪಂಡಿತ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ರಂಜಿಸಿತು. ರೂಪನಗುಡಿ ರತ್ನತೇಜ ಪಿಟೀಲು ಮತ್ತು ಪ್ರಣವ ಸುಬ್ರಹ್ಮಣ್ಯ ಅವರು ಮೃದಂಗ ಪಕ್ಕವಾದ್ಯ ಸಹಕಾರ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Abhinava ShankaralayaKannada News WebsiteLatest News Kannadamysoreಅಭಿನವ ಶಂಕರಾಲಯಗುರುಭವನನೃಸಿಂಹ ಭಾರತೀ ಮಹಾಸ್ವಾಮಿಮೈಸೂರುಲಲಿತಾ ಸಹಸ್ರನಾಮಶಾರದೆಶಾಸ್ತ್ರೀಯ ಸಂಗೀತಶಿವಾನಂದ ಲಹರೀಶ್ರೀ ವಿಧುಶೇಖರ ಭಾರತೀತೀರ್ಥಶ್ರೀ ಶಾರದಾಂಬೆಸೌಂದರ್ಯ ಲಹರಿ
Share197Tweet123Send
Previous Post

ಸೊರಬ | ಕೆರೆಗೆ ನುಗ್ಗಿದ ಖಾಸಗಿ ಬಸ್ | ಅದೃಷ್ಟವಶಾತ್ ಪ್ರಯಾಣಿಕರು ಸೇಫ್

Next Post

The Shetty Sisters Elevates Ugadi Celebrations at Kalyan Jewellers Mangaluru

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
The Shetty Sisters Elevates Ugadi Celebrations at Kalyan Jewellers Mangaluru

The Shetty Sisters Elevates Ugadi Celebrations at Kalyan Jewellers Mangaluru

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL