ಕಲ್ಪ ಮೀಡಿಯಾ ಹೌಸ್ | ಮೈಸೂರು |
ಪಕ್ಷದ ವರಿಷ್ಠರು, ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಬಗ್ಗೆ ತೀರ್ಮಾನವಾಗಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಭವಾನಿ ರೇವಣ್ಣ ಸ್ಪರ್ಧೆ ವಿಚಾರದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮದು ಪ್ರಾದೇಶಿಕ ಪಕ್ಷ, ನಾನು ಮಾತನಾಡುವುದು ಸೂಕ್ತವಲ್ಲ. ಹೆಚ್‍ಡಿಕೆ, ವರಿಷ್ಠರು ಹಾಗೂ ರಾಜ್ಯಾಧ್ಯಕ್ಷರು ಇದಕ್ಕೆಲ್ಲ ಉತ್ತರ ನೀಡುತ್ತಾರೆ. ಹಾಸನ ಕಾರ್ಯಕರ್ತರ ಮನೋಭಿಲಾಷೆಯನ್ನು ಅರಿತು ವರಿಷ್ಠರು ತೀರ್ಮಾನಕ್ಕೆ ಬರುತ್ತಾರೆ ಎಂದರು.
Also read: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರ ಬಂಧನ
ಹೆಚ್ ಡಿಕೆ ವಿರುದ್ಧ ರೇವಣ್ಣ ಪುತ್ರ ಸೂರಜ್ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಾವೆಲ್ಲ ಅಣ್ಣ-ತಮ್ಮಂದಿರು, ಒಂದೇ ಮನೆಯ ಮಕ್ಕಳು.ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಬಿಂಬಿಸುವುದು ಸರಿಯಲ್ಲ. ಸೂರಜ್ ಪ್ರಬುದ್ಧರಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಾನೊಬ್ಬ ಪಕ್ಷದ ಕಾರ್ಯಕರ್ತ ಅಷ್ಟೇ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post