ಕಲ್ಪ ಮೀಡಿಯಾ ಹೌಸ್ | ಮೈಸೂರು |
ಅಯೋಧ್ಯೆಯಲ್ಲಿ ಶ್ರೀರಾಮಮಂದಿರದಲ್ಲಿ Ayodhya Shrirama Mandira ರಾಮಲಲ್ಲಾ Rama lalla ಪ್ರತಿಷ್ಠಾಪನೆಗೊಳ್ಳಲಿರುವ ಜ.22ರಂದೇ ಜಿಲ್ಲೆಯಲ್ಲೂ ಸಹ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯಲಿದೆ.
ಹೌದು…ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾ ಮೂರ್ತಿಯನ್ನು ಕೆತ್ತಿರುವ ಕೃಷ್ಣಶಿಲೆಯು ಜಯಪುರ ಹೋಬಳಿಯ ಹಾರೋಹಳ್ಳಿಯ ರಾಮದಾಸ್ ಎನ್ನುವವರ ಜಮೀನಿನಲ್ಲಿ ದೊರೆತಿತ್ತು. ಹೀಗಾಗಿ, ಇದೇ ಜಮೀನಿನಲ್ಲಿ ರಾಮಮಂದಿರ ನಿರ್ಮಾಣವಾಗಲಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಮಾತನಾಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ, ಕೃಷ್ಣಶಿಲೆ ದೊರೆತ ಜಮೀನಿನಲ್ಲೇ ರಾಮಮಂದಿರ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಜ.22ರಂದೇ ದೇವಾಲಯದ ಭೂಮಿಪೂಜೆ ನಡೆಯಲಿದೆ ಎಂದಿದ್ದಾರೆ.
Also read: ಆ ವ್ಯಕ್ತಿಗಳ ವಿರುದ್ಧ ತನಿಖೆಗೆ ಮುಂದಾದ ಅಯೋಧ್ಯೆ ಟ್ರಸ್ಟ್! ಇಷ್ಟಕ್ಕೂ ಕಾರಣವೇನು? ಇಲ್ಲಿದೆ ಮಾಹಿತಿ
ಹಾರೋಹಳ್ಳಿ ಹಾಗೂ ಗುಜ್ಜೇಗೌಡನಪುರ ಗ್ರಾಮಸ್ಥರೊಂದಿಗೆ ಚರ್ಚಿಸಿ ಈ ತೀರ್ಮಾನಕ್ಕೆ ಬರಲಾಗಿದೆ. ಅಂದು ಬೆಳಿಗ್ಗೆ ೬ರಿಂದಲೇ ಭಜನೆ ಮೊದಲಾದ ಕಾರ್ಯಕ್ರಮ ನಡೆಯಲಿದೆ.
ಈ ಮಾಧ್ಯಮಗಳಿಗೆ ಮಾತನಾಡಿರುವ ಜಮೀನು ಮಾಲೀಕ ರಾಮದಾಸ್ ಅವರು, ಶಿಲೆ ಸಿಕ್ಕ ಸ್ಥಳದ ೪ ಗುಂಟೆ ಜಮೀನನ್ನು ಮಂದಿರ ನಿರ್ಮಾಣಕ್ಕೆ ಸಂತೋಷದಿಂದ ಕೊಡುವುದಾಗಿ ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















