ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮೈಸೂರು: ನಾಡ ಹಬ್ಬ ದಸರಾಗೆ ಮೈಸೂರಿನಲ್ಲಿ ಇಂದು ಮುಂಜಾನೆ ವಿದ್ಯುಕ್ತ ಚಾಲನೆ ನೀಡಲಾಗಿದೆ.
ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಗ್ರಪೂಜೆ ನೆರವೇರಿಸಿದರು. ಆನಂತರ ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಹಾಗೂ ಹಿರಿಯ ಪ್ರಾಧ್ಯಾಪಕರಾದ ಡಾ.ಸಿ.ಎನ್. ಮಂಜುನಾಥ್ ರವರು ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ 2020 ರ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿದರು.
ಇದೇ ವೇದಿಕೆಯಲ್ಲಿ ಆರು ಕೊರೋನಾ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಯಿತು.
ಈ ಮೂಲಕ ಕೊರೋನಾ ಆತಂಕದ ನಡುವೆಯೇ ಈ ಬಾರಿಯ ದಸರಾಗೆ ಅಧಿಕೃತ ಚಾಲನೆ ದೊರೆತಿದೆ. ಸಂಜೆ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ ಸಿಗಲಿದೆ.
ಕೋವಿಡ್19 ಕಾರಣದಿಂದ ಈ ಬಾರಿಯ ದಸರಾವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು ದಸರಾ ಸಂಬಂಧ ಎಲ್ಲಾ ಕಾರ್ಯಕ್ರಮಗಳನ್ನು ಲೈವ್ ಮುಖಾಂತರ ನೀಡಲಾಗುತ್ತಿರುವುದರಿಂದ ಸಾರ್ವಜನಿಕರು ಮನೆಯಲ್ಲಿಯೇಕುಳಿತು ವೀಕ್ಷಣೆ ಮಾಡಬಹುದಾಗಿದೆ.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಸಚಿವರಾದ ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ವಿ. ಸೋಮಣ್ಣ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post