No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಜನಸಹಭಾಗಿತ್ವದಲ್ಲಿ ಬೃಹತ್ ಮೈಸೂರು ಮಹಾನಗರಪಾಲಿಕೆ ರಚಿಸುವಂತೆ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 5, 2026
in ಮೈಸೂರು
0
ಜನಸಹಭಾಗಿತ್ವದಲ್ಲಿ ಬೃಹತ್ ಮೈಸೂರು ಮಹಾನಗರಪಾಲಿಕೆ ರಚಿಸುವಂತೆ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೈಸೂರಿನ ಪ್ರಜ್ಞಾವಂತ ನಾಗರಿಕರು ಮತ್ತು ನಾಗರಿಕ ಸಮಾಜದ ಸಂಘಟನೆಗಳ ಒಕ್ಕೂಟವು ಪ್ರಸ್ತಾವಿತ ‘ಬೃಹತ್ ಮೈಸೂರು’ ಮಹಾನಗರ ಪಾಲಿಕೆ (Greater Mysuru) ವಿಸ್ತರಣೆ ಯೋಜನೆಗೆ ಸಂಬಂಧಿಸಿದಂತೆ ವಿಸ್ತೃತ ಆಕ್ಷೇಪಣೆಯನ್ನು ಸಲ್ಲಿಸಿತು.

ಪ್ರಸ್ತುತ ಹೊರಡಿಸಲಾಗಿರುವ ಅಧಿಸೂಚನೆಯನ್ನು ತಕ್ಷಣ ಹಿಂಪಡೆದು, ವೈಜ್ಞಾನಿಕ ಹಾಗೂ ಜನಸಹಭಾಗಿತ್ವದ ಮೂಲಕ ಬೃಹತ್ ಮೈಸೂರು ಮಹಾನಗರಪಾಲಿಕೆ ರಚಿಸುವಂತೆ ಸರ್ಕಾರವನ್ನು ಆಗ್ರಹಿಸಲಾಯಿತು.
“ಭವಿಷ್ಯದರ್ಶಿ ಮಹಾ ಮೈಸೂರು” ಸಂಘಟನೆಯ ಪ್ರವರ್ತಕ, ಬಿಜೆಪಿ ಹಿರಿಯ ನಾಯಕ ಖ್ಯಾತ ನರರೋಗ ತಜ್ಞ ಡಾ. ಸುಶ್ರುತ ಗೌಡ ನೇತೃತ್ವದ ನಗರದ ಪ್ರಜ್ಞಾವಂತ ನಾಗರೀಕರತಂಡ ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆಯ ಪೌರಾಡಳಿತ ನಿರ್ದೇಶನಾಲಯದ (DMA) ಸಹಾಯಕ ನಿರ್ದೇಶಕರಾದ ಶೈಲಾ ಕೆ. ಡಿ. (ಕೆ.ಎಂ.ಎ.ಎಸ್) ಅವರನ್ನು ಭೇಟಿ ಮಾಡಿ ಆಕ್ಷೇಪಣೆ ಸಲ್ಲಿಸಿತು. ನಮ್ಮ ಮೈಸೂರು ಫೌಂಡೇಶನ್, ಕ್ರಿಸ್ಟಲ್ ಗ್ರೀನ್ ಬಡ್ಸ್, ಕ್ರೆಡಿಟ್-ಐ ಸಂಸ್ಥೆ, ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಸಮಿತಿ, ಕನ್ನಡ ರಕ್ಷಣಾ ವೇದಿಕೆ, ಮೈಸೂರು ಗ್ರಾಹಕರ ಪರಿಷತ್ತು, ಮಿಷನ್ ಮೋದಿ ಡೆಮಾಕ್ರಸಿ ಡೆವಲಪ್‌ಮೆಂಟ್ ಟ್ರಸ್ಟ್, ಯೂತ್ ಫಾರ್ ನೇಷನ್ (YFN), ಮತ್ತು ಹಲವಾರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಅಭಿವೃದ್ಧಿಗೆ ವಿರೋಧವಿಲ್ಲ, ಆದರೆ ಅವೈಜ್ಞಾನಿಕ ವಿಸ್ತರಣೆಗೆ ಆಕ್ಷೇಪ: ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸುಶ್ರುತ ಗೌಡ “ನಾವು ಅಭಿವೃದ್ಧಿಗೆ ವಿರುದ್ಧವಾಗಿಲ್ಲ. ನಗರಗಳು ಬೆಳೆಯಬೇಕು ಮತ್ತು ಮೂಲಸೌಕರ್ಯಗಳು ಸುಧಾರಿಸಬೇಕು. ಆದರೆ, ಸರಿಯಾದ ಪೂರ್ವತಯಾರಿ- ಯೋಜನೆ, ವೈಜ್ಞಾನಿಕ ದತ್ತಾಂಶ ಮತ್ತು ಪ್ರಜಾಸತ್ತಾತ್ಮಕ ಮಾದರಿಯ ಸಮಾಲೋಚನೆ ಇಲ್ಲದ, ಏಕಪಕ್ಷೀಯ ಅವೈಜ್ಞಾನಿಕ ಅಭಿವೃದ್ಧಿಯು ಪ್ರಗತಿಯಲ್ಲ. ಇದು ಭವಿಷ್ಯದಲ್ಲಿ ಒಳ್ಳೆಯದಕ್ಕಿಂತ ಹೆಚ್ಚು ಹಾನಿಯನ್ನು ಉಂಟು ಮಾಡಬಹುದು,” ಎಂದು ಅವರು ಎಚ್ಚರಿಸಿದರು.
“ಪ್ರಸ್ತುತ ಹೊರಡಿಸಲಾಗಿರುವ ಪ್ರಸ್ತಾವನೆಯಲ್ಲಿ ಪಾರದರ್ಶಕತೆ ಮತ್ತು ಸಮರ್ಪಕ ಸಿದ್ಧತೆಯ ಕೊರತೆಯಿದೆ. ಈ ವಿಸ್ತರಣೆಯನ್ನು ಹಂತ ಹಂತವಾಗಿ ಮತ್ತು ಸಾರ್ವಜನಿಕ ಸಹಭಾಗಿತ್ವದೊಂದಿಗೆ ಯೋಜಿಸಬೇಕು. ದುರದೃಷ್ಟವಶಾತ್, ಪ್ರಸ್ತುತ ಬೃಹತ್ ಮೈಸೂರು ಪ್ರಸ್ತಾವನೆಯು ಈ ಮೂಲಭೂತ ತತ್ವಕ್ಕೆ ವಿರುದ್ಧವಾಗಿದೆ,” ಎಂದು ಅವರು ಟೀಕಿಸಿದರು.

ಮೈಸೂರು ಗ್ರಾಹಕರ ಪರಿಷತ್ತಿನ ಸ್ಥಾಪಕ ಅಧ್ಯಕ್ಷ ಡಾ. ಭಾಮಿ ವಿ ಶೆಣೈ ಮಾತನಾಡಿ, ಯೋಜನೆಯ ಪರಿಸರ ಪರಿಣಾಮಗಳ ಮೌಲ್ಯಮಾಪನ ನಡೆದಿಲ್ಲ ಎಂದು ದೂರಿದರು. “ಯಾವುದೇ ಪರಿಸರ ಪ್ರಭಾವದ ಮೌಲ್ಯಮಾಪನ (EIA) ವರದಿ ಸಾರ್ವಜನಿಕವಾಗಿ ಲಭ್ಯವಿಲ್ಲ. ಅಗತ್ಯ ಮುನ್ನೆಚ್ಚರಿಕೆಗಳಿಲ್ಲದೆ ಈ ಯೋಜನೆಯನ್ನು ಜಾರಿಗೆ ತಂದರೆ ಕೆರೆಗಳು, ಜೌಗು ಪ್ರದೇಶಗಳು, ಹಸಿರು ವಲಯಗಳು ಮತ್ತು ವನ್ಯಜೀವಿ ಕಾರಿಡಾರ್‌ಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ,” ಎಂದು ಎಚ್ಚರಿಸಿದರು.

ಪ್ರಮುಖ ಆಕ್ಷೇಪಗಳು:

ನಿಯೋಗ ಈ ಕೆಳಗಿನ ಅಂಶಗಳ ಬಗ್ಗೆ ಸರಕಾರದ ಗಮನ ಸೆಳೆದಿದೆ.

  • ಗ್ರಾಮ ಸಭೆ ಮತ್ತು ವಾರ್ಡ್ ಸಮಿತಿಗಳ ಕಡೆಗಣನೆ
  • ಮಾಸ್ಟರ್ ಪ್ಲಾನ್ ಅಲಭ್ಯತೆ
  • ಸದ್ಯ ಮೈಸೂರು ನಗರ ಎದುರಿಸುತ್ತಿರುವ ನೀರಿನ ಅಭಾವ, ಒಳಚರಂಡಿ ಅವ್ಯವಸ್ಥೆ, ಪ್ರವಾಹ, ಸಂಚಾರ ದಟ್ಟಣೆ ಮತ್ತು ಘನತ್ಯಾಜ್ಯ ವಿಲೇವಾರಿಯಂತಹ ಸಮಸ್ಯೆಗಳನ್ನು ಬಗೆಹರಿಸದೆ ನಗರ ವಿಸ್ತರಣೆ ಮಾಡುತ್ತಿರುವುದು.
  • ರೈತರು ಮತ್ತು ಗ್ರಾಮೀಣ ಜೀವನೋಪಾಯದ ಮೇಲೆ ಪ್ರತಿಕೂಲ ಪರಿಣಾಮ ಸಾಧ್ಯತೆ.
  • ಹೆಚ್ಚಿನ ತೆರಿಗೆ ಮತ್ತು ಸೌಲಭ್ಯಗಳ ಮೇಲಣ ಶುಲ್ಕದಿಂದ ಜೀವನ ವೆಚ್ಚ ಏರಿಕೆ.
  • ನೀರಿನ ಭದ್ರತೆ ಮತ್ತು ಸುಸ್ಥಿರತೆಯ ಬಗ್ಗೆ ಸ್ಪಷ್ಟತೆ ಕೊರತೆ
  • ಚಾಮುಂಡಿ ಬೆಟ್ಟ ಮತ್ತು ಪರಿಸರ ಸೂಕ್ಷ್ಮ ವಲಯಗಳಿಗೆ ಅಪಾಯ ಸಾಧ್ಯತೆ
  • ವಿಪತ್ತು ನಿರ್ವಹಣೆ ಮತ್ತು ಸಾರ್ವಜನಿಕ ಆರೋಗ್ಯ ಸಿದ್ಧತೆಯ ಕೊರತೆ.
  • ಪಾರದರ್ಶಕತೆ ಇಲ್ಲದೆ ಸಾರ್ವಜನಿಕ ಖಜಾನೆಯ ಮೇಲೆ ಬೀಳುವ ಆರ್ಥಿಕ ಹೊರೆ.
  • ಈ ವಿಸ್ತರಣೆಯು ಭೂ-ಮಾಫಿಯಾದ ಹಿತಾಸಕ್ತಿಯಿಂದ ಪ್ರೇರಿತವಾಗಿದೆ ಎಂಬ ಆತಂಕ.

ನಮ್ಮ ಮೈಸೂರು ಫೌಂಡೇಶನ್‌ನ ದಶರಥ್ ಮಾತನಾಡಿ, “ರೈತರು ಅನಿವಾರ್ಯವಾಗಿ ಭೂಮಿ ಮಾರಾಟ ಮಾಡಬೇಕಾಗುತ್ತದೆ ಮತ್ತು ಕೃಷಿ ಕಾರ್ಮಿಕರು ಜೀವನೋಪಾಯ ಕಳೆದುಕೊಳ್ಳುತ್ತಾರೆ. ಇದು ಗ್ರಾಮೀಣ-ನಗರ ಅಸಮಾನತೆಯನ್ನು ಹೆಚ್ಚಿಸುತ್ತದೆ ಮತ್ತು ಆಹಾರ ಭದ್ರತೆಗೆ ಸಂಚಕಾರ ತರುತ್ತದೆ,” ಎಂದರು. ನಿಮಿಷಾಂಬ ಸ್ವಸಹಾಯ ಸಂಘದ ಸುಜಾತಾ ಎಸ್. ಅವರು, ಸಾಮಾನ್ಯ ನಾಗರಿಕರು ಹೆಚ್ಚಿನ ತೆರಿಗೆ ಮತ್ತು ಶುಲ್ಕಗಳ ಹೊರೆ ಹೊರಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರಸ್ತುತ ಬೃಹತ್ ಮೈಸೂರು ಅಧಿಸೂಚನೆಯನ್ನು ಹಿಂಪಡೆಯಬೇಕು, ಕಡ್ಡಾಯವಾಗಿ ಗ್ರಾಮ ಸಭೆ ಮತ್ತು ವಾರ್ಡ್ ಸಮಿತಿ ಸಮಾಲೋಚನೆ ನಡೆಸಬೇಕು, ವೈಜ್ಞಾನಿಕ ಮಹಾಯೋಜನೆಯನ್ನು (2031 ಮತ್ತು ಅದಕ್ಕೂ ಮೀರಿದ) ಪ್ರಕಟಿಸಬೇಕು,
ಪರಿಸರ ಮತ್ತು ಆರೋಗ್ಯ ಪ್ರಭಾವದ ಮೌಲ್ಯಮಾಪನಗಳನ್ನು ಬಿಡುಗಡೆ ಮಾಡಬೇಕು, ಸಾರ್ವಜನಿಕ ವಿಚಾರಣೆಗಳನ್ನು (Public Hearings) ನಡೆಸಬೇಕು, ರೈತರು, ಕೆರೆಗಳು, ಹಸಿರು ವಲಯ ಮತ್ತು ಚಾಮುಂಡಿ ಬೆಟ್ಟದ ಪರಿಸರ ವಲಯಗಳನ್ನು ಸಂರಕ್ಷಿಸಬೇಕು, .
ವಿಸ್ತರಣೆಯ ಮೊದಲು ಮೈಸೂರಿನ ಹಾಲಿ ಮೂಲಸೌಕರ್ಯಗಳನ್ನು ಬಲಪಡಿಸಬೇಕು,
ಸ್ಥಳೀಯ ಸಂಸ್ಥೆಗಳ ಪ್ರಜಾಸತ್ತಾತ್ಮಕ ಒಪ್ಪಿಗೆಯೊಂದಿಗೆ ಮಾತ್ರ ಮುಂದುವರಿಯಬೇಕು ಎಂದು ಈ ಸಂದರ್ಭದಲ್ಲಿ ರಾಜ್ಯ ಸರಕಾರವನ್ನು .ಆಗ್ರಹಿಸಲಾಯಿತು.
“ಮೈಸೂರಿನ ಭವಿಷ್ಯವನ್ನು ದೂರದೃಷ್ಟಿಯಿಂದ ರೂಪಿಸಬೇಕು ಎಂದು ನಾಗರಿಕ ಗುಂಪು ಹೇಳಿದೆ. “ನಿಜವಾದ ಅಭಿವೃದ್ಧಿಯು ಒಳಗೊಳ್ಳುವಿಕೆಯನ್ನ ಹೊಂದಿರಬೇಕು. ಮೈಸೂರಿನ ಭವಿಷ್ಯವನ್ನು ಅವಸರದಲ್ಲಿ ಅಥವಾ ಕೆಲವೇ ಹಿತಾಸಕ್ತಿಗಳಿಗಾಗಿ ನಿರ್ಧರಿಸಬಾರದು. ಅದು ಜನರ ಇಚ್ಛೆ ಮತ್ತು ಕಲ್ಯಾಣವನ್ನು ಪ್ರತಿಬಿಂಬಿಸಬೇಕು,” ಎಂದು ಡಾ. ಗೌಡ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮೈಸೂರು
Share198Tweet124Send
Previous Post

ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

Next Post

ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ!

ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL