ಕಲ್ಪ ಮೀಡಿಯಾ ಹೌಸ್ | ಮೈಸೂರು |
ದಸರಾ ವೈಭವ ಸಂಪನ್ನಗೊಂಡಿರುವ ಬೆನ್ನಲ್ಲೇ ಈ ಅವಧಿಯಲ್ಲಿ ಅಂಬಾ ವಿಲಾಸ ಅರಮನೆಗೆ 2 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದು, ವಿಶೇಷವಾಗಿದೆ.
ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ಭಾರೀ ನಷ್ಟಕ್ಕೊಳಗಾಗಿದ್ದ ಪ್ರವಾಸೋದ್ಯಮ ಕ್ಷೇತ್ರ ಮತ್ತೆ ಚೇತರಿಸಿಕೊಳ್ಳುತ್ತಿದೆ. ಕಳೆದ 2-3 ವರ್ಷಗಳಲ್ಲಿ ಇಲ್ಲಿಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ 2 ಲಕ್ಷ ಗಡಿ ದಾಟಿರಲಿಲ್ಲ. ಆದರೆ, ಈಗ ಕೋವಿಡ್ ಕಡಿಮೆಯಾದ ನಂತರ ಪ್ರವಾಸಿಗರ ಸಂಖ್ಯೆ ಏರಿಕೆಯಾಗಿದೆ.
ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 26 ರಿಂದ ಅ.8 ರವರೆಗೆ 300 ವಿದೇಶಿಗರು ಮತ್ತು 6,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 2.07 ಲಕ್ಷ ಜನರು ಅರಮನೆಗೆ ಭೇಟಿ ನೀಡಿದ್ದಾರೆ.
ಇನ್ನು, ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೂ ಇದೇ ಸಂಖ್ಯೆಯ ಜನರು ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.
Also read: ಮಥುರಾದಲ್ಲಿ ನಿರ್ಮಾಣವಾಗಲಿದೆ ಪೇಜಾವರ ಮಠದ ಶ್ರೀಗೋವಿಂದ ಧಾಮ
ದಸರಾ ಮಹೋತ್ಸವದ ವೇಳೆ ಟಿಕೆಟ್’ನಿಂದಾಗಿ ಒಟ್ಟು 2.6 ಕೋಟಿ ರೂ. ಸಂಗಹವಾಗಿದ್ದು, ಮೃಗಾಲಯದಲ್ಲೂ ಇದೇ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಮೃಗಾಲಯಕ್ಕೆ ಭೇಟಿ ನೀಡಿದ್ದು, ಸಮೀಪದ ಕಾರಂಜಿ ಕೆರೆಯಿಂದ 2.6 ಕೋಟಿ ರೂಪಾಯಿ ಆದಾಯ ಗಳಿಸಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post