No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೊಬೈಲ್‌ಗೆ ದಾಸರಾಗಬೇಡಿ, ಸನಾತನ ಧರ್ಮವನ್ನು ದೃಢವಾಗಿ ನಂಬಿ | ವಿಧುಶೇಖರ ಭಾರತೀ ಶ್ರೀ ಸಂದೇಶ

ನಂಜನಗೂಡಿನ ಶೃಂಗೇರಿ ಶಂಕರ ಮಠದಲ್ಲಿ ಗುರುವಂದನೆ ಕಾರ್ಯಕ್ರಮ | ಪುನರುತ್ಥಾನಗೊಂಡ ಶ್ರೀ ಗಣಪತಿ ದೇವಾಲಯ ಸೇವೆಗೆ ಸಮರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 1, 2024
in ಮೈಸೂರು
0
ಮೊಬೈಲ್‌ಗೆ ದಾಸರಾಗಬೇಡಿ, ಸನಾತನ ಧರ್ಮವನ್ನು ದೃಢವಾಗಿ ನಂಬಿ | ವಿಧುಶೇಖರ ಭಾರತೀ ಶ್ರೀ ಸಂದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಭಾರತೀಯ ಪರಂಪರೆಯ ಸನಾತನ ಧರ್ಮವನ್ನು ದೃಢವಾಗಿ ನಂಬಿ. ಮಕ್ಕಳಿಗೂ ಧರ್ಮ ಪಾಲನೆಯ ಮಾರ್ಗವನ್ನು ಕಲಿಸಿದರೆ ಮಾತ್ರ ನಮ್ಮ ಸಂಸ್ಕೃತಿ ಉಳಿಯುತ್ತದೆ ಎಂದು ಶೃಂಗೇರಿಯ #Sringeri ಪರಮಪೂಜ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಹೇಳಿದರು.

ನಂಜನಗೂಡಿನ ಶೃಂಗೇರಿ ಶಂಕರ ಮಠದ #ShankarMutt ಶಾಖೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಅನುಗ್ರಹ ಸಂದೇಶ ನೀಡಿದರು.

ಜವಾಬ್ದಾರಿ ದೊಡ್ಡದಾಗಿದೆ
ಧರ್ಮ, ಸಂಸ್ಕೃತಿ ಬಗ್ಗೆ ಮಕ್ಕಳಿಗೆ ಮನೆಯೇ ಪಾಠಶಾಲೆ. ಜನನಿಯೇ ಮೊದಲ ಗುರು. ಈ ಜವಾಬ್ದಾರಿ ಎಲ್ಲರಿಗೂ ಇದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾದ ತುರ್ತು ಸ್ಥಿತಿ ಇಂದು ಒದಗಿಬಂದಿದೆ. ಋಷಿ ಪರಂಪರೆಯಿಂದ ಬಂದ ನಮ್ಮ  ಧರ್ಮದ ಬಗ್ಗೆ ಅನೇಕರಿಗೆ ತಿಳಿವಳಿಕೆ ಇಲ್ಲದ ಸ್ಥಿತಿಯಲ್ಲಿ ನಾವಿದ್ದೇವೆ. ಮೊದಲು ನಾವು ತಿಳಿದು, ನಮ್ಮ ಮಕ್ಕಳಿಗೆ ಚಿಕ್ಕ ಮಟ್ಟದಲ್ಲಾದರೂ ನಮ್ಮ ಸಂಸ್ಕೃತಿ, ಆಚರಣೆಗಳನ್ನು ರೂಢಿಸಿ. ಇದು ಮನೆ, ಕುಟುಂಬ, ವಂಶಕ್ಕೆ ಮಾತ್ರವಲ್ಲ, ದೇಶಕ್ಕೂ ಮಹತ್ತರ ಕೊಡುಗೆಯಾಗುತ್ತದೆ ಎಂದು ಜಗದ್ಗುರುಗಳು ಸಂದೇಶ ನೀಡಿದರು.
Also read: KPTCL goes big on technology, deploys Insulated Aerial Work Platform vehicles for seamless power supply

ಮೊಬೈಲ್‌ಗಳಿಗೆ ದಾಸರಾಗಬೇಡಿ
ಭಾರತೀಯ ಪರಂಪರೆ ವಿಶ್ವದಲ್ಲೇ ವಿಶಿಷ್ಠವಾದ ಪರಂಪರೆ. ಸಾವಿರಾರು ವರ್ಷ ಕಾಡಿನಲ್ಲಿ ನಮ್ಮ ಋಷಿ- ಮುನಿಗಳು ಘೋರ ತಪಸ್ಸು ಮಾಡಿ, ದೇವರನ್ನು ಪ್ರತ್ಯಕ್ಷ ಒಲಿಸಿಕೊಂಡು ಜೀವನ ಕ್ರಮ ರೂಪಿಸಿದ್ದಾರೆ. ಇಹ ಮತ್ತು ಪರದ ಸಾಧನೆಗಳನ್ನು, ಅಂತರಂಗ- ಬಹಿರಂಗ ವ್ಯಕ್ತಿತ್ವ ರೂಪಿಸಲು ಬೇಕಾದ ಸೂತ್ರಗಳನ್ನು ಕಟ್ಟಿಕೊಟ್ಟಿದ್ದಾರೆ. ಆದರೆ ಇಂದು ಸಾಮಾಜಿಕ ಜಾಲತಾಣ, ಮೊಬೈಲ್‌ಗಳಿಗೆ #Mobile ದಾಸರಾಗಿರುವ ಅನೇಖರು ಸನಾತನ ಧರ್ಮದ ಮಹೋನ್ನತ ಸಂಗತಿಗಳನ್ನೇ ಮರೆತಿದ್ದಾರೆ. ಇದು ಅಪಾಯಕಾರಿ ಎಂದು ಜಗದ್ಗುರುಗಳು ಎಚ್ಚರಿಸಿದರು.

ಟೀಕೆ ಸಲ್ಲದು
ಕೆಲವರು ನಮ್ಮ ಧರ್ಮದ ಬಗ್ಗೆ ಸಂಪೂರ್ಣ ಅಧ್ಯಯನ ಮಾಡದೇ, ತಿಳಿದುಕೊಳ್ಳದೇ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿರುತ್ತಾರೆ. ಅವರಿಗೆ ನಾವು ಪ್ರತಿಕ್ರಿಯೆ ಕೊಡುವ ಅಗತ್ಯವಿಲ್ಲ. ಅನುಷ್ಠಾನವಂತರಿಂದ, ಸಾಧಕರಿಂದ ಧರ್ಮ ಉಳಿದೇ ಉಳಿಯುತ್ತದೆ. ನಮ್ಮ ಮುಂದಿನ ಪೀಳಿಗೆ ಅಧರ್ಮ ಮಾರ್ಗದಲ್ಲಿ ಸಾಗದಂತೆ ಎಚ್ಚರ ವಹಿಸುವ ಹೊಣೆಗಾರಿಕೆ ಪಾಲಕರ ಮೇಲಿದೆ ಎಂದು ಶ್ರೀ ವಿಧುಶೇಖರ ಭಾರತೀ ತೀರ್ಥರು #VidhushekharaBharatiSwamiji ಕಿವಿಮಾತು ಹೇಳಿದರು.ಧರ್ಮ ನಾಶ ಮಾಡಲಿದ್ದಾರೆ
ಪ್ರಸ್ತುತ ದಿನಮಾನಗಳಲ್ಲಿ ನಾಸ್ತಿಕರು, ಧರ್ಮ ನಾಶ ಮಾಡುವ ಸಂಕಲ್ಪ ಮಾಡಿದ್ದಾರೆ. ಇದು ಭರತಖಂಡದ ದುರಂತ. ನಾವು -ನಮ್ಮ ಮನೆತನ, ಪರಂಪರೆಯಲ್ಲಿ ಹೇಳಿದ ಜೀವನ ಮಾರ್ಗವನ್ನು ಅನುಸರಿಸುವಲ್ಲಿ ಶ್ರದ್ಧೆ ತೋರಬೇಕು. ಅಜ್ಜ-ಅಜ್ಜಿ ಹೇಗೆ ಜೀವನ ನಿರ್ವಹಿಸಿದ್ದರು ಎಂದು ಒಮ್ಮೆ ಅವಲೋಕಿಸಬೇಕು. ಆಗ ನಮ್ಮ ನಮ್ಮ ಮನೆಯೇ ಮಂದಿರವಾಗುತ್ತದೆ. ಇದಕ್ಕೆ ಹಲವು ವರ್ಷಗಳ ಸಂಯಮ, ತಾಳ್ಮೆಗಳೂ ಬೇಕು. ಆಗ ಮಾತ್ರ ನಮ್ಮ ಮನೆಯ ಮಕ್ಕಳು ಧರ್ಮವಂತರಾಗುತ್ತಾರೆ. ಸಂಸ್ಕಾರದ ಹಾದಿಯಲ್ಲಿ ಸಾಗಿ ಜೀವನ ಸಾರ್ಥಕ ಮಾಡಿಕೊಳ್ಳುತ್ತಾರೆ. ಹಾಗಾಗಿ ಇಂದಿನ ತಂದೆ- ತಾಯಿಯರ ಮೇಲೆ ಬಹಳ ದೊಡ್ಡ ಜವಾಬ್ದಾರಿ ಬಂದಿದೆ ಎಂದು ಶ್ರೀಗಳು ಹೇಳಿದರು.

ನಂಜನಗೂಡು ಶಾಖಾ ಮಠ ಶೀಘ್ರ ಪುನರುತ್ಥಾನ
ಶೃಂಗೇರಿ ದಕ್ಷಿಣಾಮ್ನಾಯ ಶಾರದಾ ಪೀಠಕ್ಕೂ. ನಂಜನಗೂಡಿನ #Nanjanagudu ಶ್ರೀ ಶಂಕರ ಮಠದ ಶಾಖೆಗೂ ನೂರಾರು ವರ್ಷಗಳ ಅವಿನಾ ಸಂಬಂಧ ಇದೆ. ನಮ್ಮ ಪರಂಪರೆಯ ಅನೇಕ ಜಗದ್ಗುರುಗಳು ಈ  ಕ್ಷೇತ್ರ ದೇವತೆ ಶ್ರೀಕಂಠೇಶ್ವರನಿಗೆ  (ನಂಜುಂಡೇಶ್ವರ) ಪೂಜೆ ಸಮರ್ಪಣೆ ಮಾಡಿದ ಇತಿಹಾಸವಿದೆ ಎಂದು ಜಗದ್ಗುರುಗಳು ಹೇಳಿದರು.

92 ವರ್ಷದ ಹಿಂದೆ ಶೃಂಗೇರಿ #Sringeri ಪರಂಪರೆಯ 34ನೇ ಯತಿ ಶ್ರೀ ಚಂದ್ರಶೇಖರ ಭಾರತೀ ಸ್ವಾಮೀಜಿ ನಂಜನಗೂಡಿನಲ್ಲಿ ಶೃಂಗೇರಿ ಶಾಖಾ ಮಠವನ್ನು ಇಲ್ಲಿ ಆರಂಭಿಸಿದ್ದರು. ಅದೀಗ ಶಿಥಿಲವಾಗಿದೆ. ಶೀಘ್ರವೇ ಪುನರುತ್ಥಾನ ಮಾಡಲಾಗುವುದು. ಮುಂಬರುವ ವರ್ಷಗಳಲ್ಲಿ ಇಲ್ಲಿಯೂ ಮಠದ ಶತಮಾನೋತ್ಸವ ಸಂಭ್ರಮದಿಂದ ನೆರವೇರಲಿದೆ ಎಂದು ಅವರು ಭಕ್ತ ಸಮೂಹಕ್ಕೆ ಭರವಸೆ ನೀಡಿದಾಗ ಹರ್ಷೋದ್ಗಾರದ ಚಪ್ಪಾಳೆ ಮೊಳಗಿತು.
ಸನ್ನಿಧಿ ಸೇವೆಗೆ ಸಮರ್ಪಣೆ
ನಂಜನಗೂಡಿನ ನಾರಾಯಣ ರಾವ್ ಅಗ್ರಹಾರದಲ್ಲಿ ಪುನರುತ್ಥಾನಗೊಂಡ ಶ್ರೀ ಗಣಪತಿ ದೇವಾಲಯದಲ್ಲಿ ಜಗದ್ಗುರುಗಳು ಸೋಮವಾರ ಪೂಜಾ ಕಾರ್ಯ ನೆರವೇರಿಸಿ ಸನ್ನಿಧಿಯನ್ನು ಸೇವೆಗೆ ಸಮರ್ಪಣೆ ಮಾಡಿದರು. ನಂತರ ಅವರು ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರಸ್ವಾಮಿ ದೇಗುಲ, ಗಟ್ಟವಾಡಿಯಲ್ಲಿರುವ ಶ್ರೀ ಸುಬ್ರಹ್ಮಣೇಶ್ವರಸ್ವಾಮಿ ಸನ್ನಿಧಿಗಳ ದರ್ಶನ ಪಡೆದು ಪೂಜೆ ಸಮರ್ಪಿಸಿದರು.ನಂತರ ನೂರಾರು ಭಕ್ತರಿಗೆ ಶ್ರೀಗಳು ಫಲ ಮಂತ್ರಾಕ್ಷತೆ ಅನುಗ್ರಹಿಸಿದರು.

ಈ ಸಂದರ್ಭ ಮುಖಂಡರಾದ ಎನ್.ಎಸ್.ಸುಬ್ರಹ್ಮಣ್ಯ,  ಯು.ಎನ್.ಪದ್ಮನಾಭರಾವ್, ಎನ್.ನರಸಿಂಹಸ್ವಾಮಿ, ಎನ್.ಆರ್.ಕೃಷ್ಣಪ್ಪಗೌಡ, ಮೋಹನ್‌ಕುಮಾರ್, ಉಮೇಶ್ ಶರ್ಮ,  ಬ್ರಾಹ್ಮಣ ಧರ್ಮ ಸಹಾಯ ಸಭಾ ಅಧ್ಯಕ್ಷ ಗೋವರ್ಧನ   ಮತ್ತು ಮಠದ ಪದಾಧಿಕಾರಿಗಳು ಇದ್ದರು.
ಆಶೀರ್ವಾದ ಪಡೆದ ಶೋಭಾ ಕರಂದ್ಲಾಜೆ
ಬಿಜೆಪಿ ನಾಯಕಿ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ದರ್ಶನ ಮಾಡಿ ಆಶೀರ್ವಾದ ಪಡೆದರು. ಲೋಕಸಭೆ ಚುನಾವಣೆಯಲ್ಲಿ ವಿಜಯ ದೊರೆತು, ಮೋದಿ ಸರ್ಕಾರವೇ ಮತ್ತೆ ಆಡಳಿತಕ್ಕೆ ಬರಲಿ ಎಂದು ಪ್ರಾರ್ಥಿಸಿದ್ದು ವಿಶೇಷವಾಗಿತ್ತು.

ಮಂಗಳವಾರದ ಕಾರ್ಯಕ್ರಮ
ಏ. 2ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಮೈಸೂರು ಶಂಕರ ಮಠದ ಆವರಣದಲ್ಲಿ ಸಾರ್ವಜನಿಕ ದರ್ಶನ , ಪಾದಪೂಜೆ ಹಾಗೂ ಭಿಕ್ಷಾ ವಂದನೆ ನಡೆಯಲಿದೆ. ಸಂಜೆ 4:30ಕ್ಕೆ ನಗರದ ವಿವಿಧ ದೇವಾಲಯಗಳು ಹಾಗೂ ಸಂಘ-ಸಂಸ್ಥೆಗಳಿಗೆ ಜಗದ್ಗುರುಗಳು ಭೇಟಿ ನೀಡಲಿದ್ದಾರೆ. ರಾತ್ರಿ 8. 30ಕ್ಕೆ ಶ್ರೀ ಮಠದಲ್ಲಿ ಚಂದ್ರಮೌಳೇಶ್ವರ ಪುಜೆ ನಡೆಸಲಿದ್ದಾರೆ.

ಸಂಗೀತ ಕಛೇರಿ
ಏ. 2ರಂದು ಸಂಜೆ 7ಕ್ಕೆ ಮೈಸೂರು ಮಠದ ಆವರಣದಲ್ಲಿ ವಿದ್ವಾನ್ ಕೃಷ್ಣಮೂರ್ತಿ ತಂಡದವರು ನಾಗಸ್ವರ ಕಛೇರಿ ನೀಡಿ ರಂಜಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4
Tags: Kannada News WebsiteLatest News KannadamysoreShankar MuttVidhushekhara bharati Swamijiಮೈಸೂರುಶಂಕರ ಮಠಶೃಂಗೇರಿಶೋಭಾ ಕರಂದ್ಲಾಜೆಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಶ್ರೀ ಶಂಕರಾಚಾರ್ಯ
Share197Tweet123Send
Previous Post

ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ: ಕೆ ಎಸ್ ಈಶ್ವರಪ್ಪ ಭರವಸೆ

Next Post

ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್. ಪ್ರಸನ್ನಕುಮಾರ್ ನೇಮಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಮಾಜಿ ಸದಸ್ಯ ಭಾನುಪ್ರಕಾಶ್’ಗೆ ಕೊರೋನಾ ಪಾಸಿಟಿವ್!

ಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್. ಪ್ರಸನ್ನಕುಮಾರ್ ನೇಮಕ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

March 24, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

March 24, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL