ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ರಾಜವಂಶಸ್ಥ ಯದುವೀರ್ ಅವರ ಕುರಿತಾಗಿ ಕಾಂಗ್ರೆಸ್ ನಾಯಕರು ತುಟಿಬಿಚ್ಚಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಸೂಚನೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿರುವ ಅವರು, ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಮಾತನಾಡಿ. ಆದರೆ, ಯದುವಂಶದ ವಿಚಾರ ಮೈಸೂರು ಭಾಗದಲ್ಲಿ ಭಾವನಾತ್ಮಕವಾಗಿದೆ. ಹೀಗಾಗಿ, ಯದುವೀರ್ Yaduveer Wadeyar ಅವರ ಬಗ್ಗೆ ಟೀಕಿಸಲು ಯಾರೂ ಮುಂದಾಗಬೇಡಿ ಎಂದಿದ್ದಾರೆ.
Also read: ರಾಜ್ಯ 7ನೇ ವೇತನ ಆಯೋಗದ ವರದಿ ಸಲ್ಲಿಕೆ | ಎಷ್ಟು ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗಿದೆ?
ಸ್ವಲ್ಪ ಹೆಚ್ಚು ಕಡಿಮೆ ಆದರೂ ನಮ್ಮ ಮಾತೇ ನಮಗೆ ಮುಳ್ಳಾಗುತ್ತೆ. ಸರ್ಕಾರದ ಗ್ಯಾರಂಟಿಗಳು, ಬಿಜೆಪಿ ಸುಳ್ಳುಗಳ ಮೇಲೆ ಪ್ರಚಾರ ಮಾಡಿ. ಯದುವೀರ್ ವಿಚಾರಕ್ಕೆ ಅಪ್ಪಿತಪ್ಪಿಯೂ ಹೋಗಬೇಡಿ. ಅದರ ಪರಿಣಾಮವನ್ನು ನಾವೇ ಎದರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post