ಕಲ್ಪ ಮೀಡಿಯಾ ಹೌಸ್ | ಮೈಸೂರು |
ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರೀಗೌಡ ಅವರ ಕಾಲದಲ್ಲಿ ಕರ್ನಾಟಕದಲ್ಲಿ ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿಯ ರೂವಾರಿಯಾಗಿದ್ದರು. ಸರ್ಕಾರಿ ಅಧಿಕಾರಿಯಾಗಿ ನಿಷ್ಠೆ ಹಾಗೂ ಬದ್ಧತೆಯಿಂದ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ಅವರು ಇಂದು ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರೀಗೌಡ ಪ್ರತಿಮೆ ಅನಾವರಣಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೈಸೂರಿನ ಕೇಂದ್ರಸ್ಥಳದಲ್ಲಿರುವ ಕರ್ಜನ್ ಪಾರ್ಕ್ ನಲ್ಲಿ ಡಾ.ಎಂ.ಹೆಚ್.ಮರೀಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಡಾ.ಎಂ.ಹೆಚ್.ಮರೀಗೌಡರ ಸಾಧನೆಗಳು ಎಲ್ಲರಿಗೂ ಸ್ಪೂರ್ತಿ ತರಲಿದೆ ಎಂದು ತಿಳಿಸಿದರು
ಮಾಹಿತಿ ಪಡೆದು ಪರಿಶೀಲನೆ :
ಹುಲಿ ಉಗುರು ಧರಿಸಿದ ಬಗ್ಗೆ ನಟರಾದ ದರ್ಶನ್ ಹಾಗೂ ಜಗ್ಗೇಶ್ ಅವರ ಪ್ರಕರಣ ದಾಖಲಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆದು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post