No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಜ.18ರಂದು ದ್ವಾದಶ ಗರುಡೋತ್ಸವ | ವೈಷ್ಣವ ಪರಂಪರೆಯ ಮಹಾಸಂಗಮ

kalpa News by kalpa News
January 12, 2026
in ಮೈಸೂರು
0
ಜ.18ರಂದು ದ್ವಾದಶ ಗರುಡೋತ್ಸವ | ವೈಷ್ಣವ ಪರಂಪರೆಯ ಮಹಾಸಂಗಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಪಂಚಗರುಡೋತ್ಸವ ಸೇವಾ ಸಮಿತಿ (ರಿ), ಮೈಸೂರು ಇವರ ಆಶ್ರಯದಲ್ಲಿ ನಾಡಿನ ಶ್ರೇಷ್ಠ ವೈಷ್ಣವ ಪರಂಪರೆಯನ್ನು ಪ್ರತಿಬಿಂಬಿಸುವ “ದ್ವಾದಶ (12) ಗರುಡೋತ್ಸವ” #Dwadasha Garudothsava ಮಹೋತ್ಸವವನ್ನು ಇದೇ ಜ.18ರಂದು (ಭಾನುವಾರ) ಮೈಸೂರಿನ ಮಹಾಜನ ವಿದ್ಯಾಸಂಸ್ಥೆ ಕ್ರೀಡಾಂಗಣ, ಜಯಲಕ್ಷ್ಮೀಪುರಂ ಆವರಣದಲ್ಲಿ ಭಕ್ತಿಭಾವಪೂರ್ಣವಾಗಿ ಆಯೋಜಿಸಲಾಗಿದೆ.

ಈ ಮಹೋತ್ಸವವು ಶ್ರೀರಂಗಂ, ತಿರುಪತಿ, ಕಾಂಚೀಪುರಂ, ಮೇಲುಕೋಟೆ ಹಾಗೂ ಶ್ರೀರಂಗಪಟ್ಟಣ ಮುಂತಾದ ಪಂಚ ಮಹಾದಿವ್ಯಕ್ಷೇತ್ರಗಳ ಗರುಡೋತ್ಸವ ಪರಂಪರೆಯನ್ನು ಒಂದೇ ವೇದಿಕೆಯಲ್ಲಿ ಪ್ರತಿಷ್ಠಾಪಿಸುವ ಅಪೂರ್ವ ಧಾರ್ಮಿಕ ಉತ್ಸವವಾಗಿದೆ. ಇದರ ಮೂಲಕ ಶ್ರೀವೈಷ್ಣವ ಸಂಪ್ರದಾಯದ ದೈವೀ ಪರಂಪರೆ, ಭಕ್ತಿ ಹಾಗೂ ಸಂಸ್ಕೃತಿಯ ವೈಭವವನ್ನು ಸಮಾಜದ ಮುಂದಿಡುವ ಉದ್ದೇಶವನ್ನು ಹೊಂದಲಾಗಿದೆ.
ಭಾರತೀಯ ವೈಷ್ಣವ ಪರಂಪರೆಯಲ್ಲಿ ಗರುಡನು ಕೇವಲ ವಾಹನ ಮಾತ್ರವಲ್ಲ, ಆತನೇ ಭಗವಂತನ ಸೇವೆಯ ಜೀವಂತ ಸಂಕೇತ. ಗರುಡನ ಮೇಲೆ ವಿರಾಜಮಾನನಾಗಿರುವ ನಾರಾಯಣನು ಭಕ್ತರ ಹೃದಯದಲ್ಲಿ ಶಾಶ್ವತವಾಗಿ ಸ್ಥಾಪಿತನಾಗಿದ್ದಾನೆ. ಈ ದೈವೀ ತತ್ತ್ವವನ್ನು ಆಚರಣೆಯಾಗಿ ರೂಪಿಸಿದ ಮಹಾನ್ ಪರಂಪರೆಯೇ ಗರುಡೋತ್ಸವ.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ, ಪ್ರಸನ್ನ ವೇಂಕಟರಮಣ, ಶ್ರೀ ಶ್ರೀನಿವಾಸ,  ಸಂತಾನ ವೇಣುಗೋಪಾಲ ಸ್ವಾಮಿ , ರಂಗನಾಥ, ಚೆಲುವ ನಾರಾಯಣಸ್ವಾಮಿ, ಶ್ರೀ ವರದರಾಜ, ಶ್ರೀ ಯೋಗನರಸಿಂಹ ಮತ್ತು ಶ್ರೀ ರಾಮಾನುಜಾಚಾರ್ಯ ಪರಂಪರೆಯ ದೇವತೆಗಳ ಗರುಡಾರೋಹಣ ಸೇವೆಗಳು ಭಕ್ತರ ಸಮ್ಮುಖದಲ್ಲಿ ಭಕ್ತಿಪೂರ್ಣ ವಾತಾವರಣದಲ್ಲಿ ನೆರವೇರಲಿವೆ.
ಈ ಉತ್ಸವಕ್ಕೆ ದೇಶದ ವಿವಿಧ ಭಾಗಗಳಿಂದ ಆಗಮಿಸುವ ಶ್ರೇಷ್ಠ ಶ್ರೀವೈಷ್ಣವ ಆಚಾರ್ಯರು, ಯತಿಗಳು ಹಾಗೂ ಧಾರ್ಮಿಕ ಮುಖಂಡರು ದಿವ್ಯಸಾನ್ನಿಧ್ಯ ನೀಡಲಿದ್ದಾರೆ. ಗರುಡಾರೋಹಣದ ಸಂದರ್ಭದಲ್ಲಿ ದೇವತೆಗಳು ಭಕ್ತರ ಮಧ್ಯೆ ಸಂಚರಿಸುವುದು, ದಿವ್ಯಪ್ರಬಂಧಗಳ ನಾದ, ವೇದಮಂತ್ರಗಳ ಘೋಷ ಮತ್ತು ಭಕ್ತರ ನಾಮಸ್ಮರಣೆ. ಈ ಎಲ್ಲವೂ ಕ್ಷಣಮಾತ್ರದಲ್ಲಿ ಭೂಲೋಕವನ್ನು ವೈಕುಂಠವನ್ನಾಗಿ ಪರಿವರ್ತಿಸುತ್ತದೆ.

ಪಂಚಗರುಡೋತ್ಸವ ಸೇವಾ ಸಮಿತಿ (ರಿ)ಗೌ.  ಅಧ್ಯಕ್ಷರಾದ ಕೆ.ಆರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಅವರ ಮಾರ್ಗದರ್ಶನದಲ್ಲಿ ಈ ಮಹೋತ್ಸವವನ್ನು ಭಕ್ತರು, ಸಮಾಜಮುಖಿ ಕಾರ್ಯಕರ್ತರು ಹಾಗೂ ಧಾರ್ಮಿಕ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದೆ.

ರಾಮಾನುಜ ವೇದಿಕೆಯಲ್ಲಿ 18 ಜನವರಿ ಭಾನುವಾರ ಸಂಜೆ ನಾಲ್ಕು ಗಂಟೆಗೆ  ದ್ವಾದಶ ಗರುಡೋತ್ಸವ  ಉದ್ಘಾಟನಾ ಸಮಾರಂಭ ಮೈಸೂರು ಪರಕಾಲ ಮಠದ  ಶ್ರೀಮದ್ ಅಭಿನವ ವಾಗೀಶ ಬ್ರಹ್ಮ ತಂತ್ರ ಸ್ವತಂತ್ರ ಪರಕಾಲ ಸ್ವಾಮಿಗಳು ,ಮೇಲುಕೋಟೆ ಯದುಗಿರಿ ಯತಿರಾಜ ಮಠದ  ನಾರಾಯಣ ರಾಮಾನುಜ ಜೀಯರ್ ಸ್ವಾಮಿಗಳು, ಅವಧೂತ ದತ್ತಪೀಠ ಗಣಪತಿ ಸಚ್ಚಿದಾನಂದ ಆಶ್ರಮದ  ಕಿರಿಯ ಪೀಠಾಧಿಪತಿ ಶ್ರೀ ದತ್ತ ವಿಜಯೇಂದ್ರ ತೀರ್ಥ ಸ್ವಾಮಿಜಿ, ಸುದರ್ಶನ ನರಸಿಂಹ ಕ್ಷೇತ್ರದ ಧರ್ಮಾಧಿಕಾರಿ ಭಾಷಾಂ ಸ್ವಾಮೀಜಿ ,  ಹೈದರಾಬಾದ್ ನ  ತ್ರಿದಂಡಿ ಶ್ರೀಮನ್ ನಾರಾಯಣ ರಾಮಾನುಜ ಚಿನ್ನಜಿಯರ್  ಸ್ವಾಮೀಜಿ ರವರುಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಮೈಸೂರು ಮತ್ತು ಕೊಡಗು ಜಿಲ್ಲೆ ಲೋಕಸಭಾ ಸದಸ್ಯ  ಹಾಗೂ ಮೈಸೂರು  ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮೆರೆವಣಿಗೆಗೆ ಚಾಲನೆ ನೀಡಲಿದ್ದಾರೆ ,ಮುಖ್ಯ ಅತಿಥಿಗಳಾಗಿ  ಖ್ಯಾತ ಸಂಗೀತ ನಿರ್ದೇಶಕ ಇಳೆಯರಾಜ ಭಾಗವಹಿಸಲಿದ್ದಾರೆ. ಶಾಸಕ ಟಿ. ಎಸ್. ಶ್ರೀವತ್ಸ ಅಧ್ಯಕ್ಷತೆ ವಹಿಸುವ ಸಮಾರಂಭದಲ್ಲಿ ಗಣ್ಯಮಾನ್ಯರು  ಉಪಸ್ಥಿತರಿರುವರು.

ಇದೇ ವೇದಿಕೆಯಲ್ಲಿ ಬೆಳಗ್ಗೆ 10 ರಿಂದ ವಿಷ್ಣು ಸಹಸ್ರನಾಮ ಪಾರಾಯಣ ,ಯುಗಳ ವೀಣಾ ವಾದನ ,ಭರತನಾಟ್ಯ ವಿಶೇಷ ನೃತ್ಯ ರೂಪಕ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಇಂತಹ ಉತ್ಸವಗಳನ್ನು ಸಂರಕ್ಷಿಸುವುದು ಕೇವಲ ಧಾರ್ಮಿಕ ಕರ್ತವ್ಯವಲ್ಲ; ಅದು ನಮ್ಮ ಸಂಸ್ಕೃತಿಯ ರಕ್ಷಣೆಯೂ ಹೌದು. ಪಂಚಗರುಡೋತ್ಸವ ಸೇವಾ ಸಮಿತಿ (ರಿ), ಮೈಸೂರು ಈ ಮಹಾನ್ ಪರಂಪರೆಯನ್ನು ಶ್ರದ್ಧೆಯಿಂದ ಮುಂದುವರಿಸುತ್ತಿರುವುದು ನಾಡಿನ ಧಾರ್ಮಿಕ, ಸಾಂಸ್ಕೃತಿಕ ಜೀವನಕ್ಕೆ ದೊಡ್ಡ ಕೊಡುಗೆಯಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Dwadasha GarudothsavaKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaದ್ವಾದಶ ಗರುಡೋತ್ಸವಮೈಸೂರು
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Next Post

ಉಡುಪಿ | ಫೆ.14ರಂದು ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರಸಂಕಿರಣ

kalpa News

kalpa News

Next Post
ಉಡುಪಿ | ಫೆ.14ರಂದು ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರಸಂಕಿರಣ

ಉಡುಪಿ | ಫೆ.14ರಂದು ಉನ್ಮೀಲನಂ 2026 - ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರಸಂಕಿರಣ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL