No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಜ್ಞಾನ ಭಂಡಾರ ವೃದ್ಧಿಯಿಂದ ವ್ಯಕ್ತಿತ್ವದ ಉನ್ನತಿ | ಉತ್ತರಾದಿ ಮಠದ ಸತ್ಯಾತ್ಮತೀರ್ಥ ಶ್ರೀ ಅಭಿಮತ

ಮೈಸೂರು | ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ನ್ಯಾಯಸುಧಾ ಮಂಗಳ ಮಹೋತ್ಸವ | ವಿದ್ವತ್ ಸಭೆ

kalpa News by kalpa News
June 4, 2024
in ಮೈಸೂರು
0
ಜ್ಞಾನ ಭಂಡಾರ ವೃದ್ಧಿಯಿಂದ ವ್ಯಕ್ತಿತ್ವದ ಉನ್ನತಿ | ಉತ್ತರಾದಿ ಮಠದ ಸತ್ಯಾತ್ಮತೀರ್ಥ ಶ್ರೀ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನಿರಂತರವಾಗಿ ಅಧ್ಯಯನಶೀಲತೆ ಇದ್ದಾಗ ಜ್ಞಾನವು ವಿಸ್ತಾರವಾಗುತ್ತದೆ. ಜ್ಞಾನ ಭಂಡಾರ ಬೆಳೆದಷ್ಟೂ ವ್ಯಕ್ತಿತ್ವ ಉನ್ನತ ಮಟ್ಟಕ್ಕೆ ಏರುತ್ತದೆ ಎಂದು ಶ್ರೀ ಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ನುಡಿದರು.

ಅವರು ನಗರದ ಕೃಷ್ಣಮೂರ್ತಿಪುರಂ ನಲ್ಲಿರುವ ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದಲ್ಲಿ ಆಯೋಜನೆಗೊಂಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದ ಮೂರನೇ ದಿನವಾದ ಮಂಗಳವಾರ ವಿದ್ವತ್ ಸಭೆಗೆ ಚಾಲನೆ ನೀಡಿ ಆಶೀರ್ವಚನ ಅನುಗ್ರಹಿಸಿದರು.
ಜ್ಞಾನ ಭಂಡಾರ ಬೆಳೆದಷ್ಟೂ ವ್ಯಕ್ತಿತ್ವ ಉನ್ನತ ಮಟ್ಟಕ್ಕೆ ಏರುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಅಧ್ಯಯನ ಮತ್ತು ಜ್ಞಾನ ಸಂಪಾದನೆಗೆ ವಿಶೇಷವಾದ ಒತ್ತು ನೀಡಬೇಕು ಎಂದು ಕಿವಿ ಮಾತು ಹೇಳಿದರು.

ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳು ಸನಾತನ ಪರಂಪರೆಯಲ್ಲಿ ಬಂದಂತಹ ಶಾಸ್ತ್ರ ವಿದ್ಯೆಯನ್ನು ಚೆನ್ನಾಗಿ ಅಧ್ಯಯನ ಮಾಡಿದ್ದಾರೆ. ಶ್ರೀ ಜಯತೀರ್ಥ ವಿರಚಿತ ಶ್ರೀಮನ್ ನ್ಯಾಯ ಸುಧಾ ಗ್ರಂಥದ ಮೇಲೆ ಉತ್ತಮವಾದ ಪಾಂಡಿತ್ಯವನ್ನು ಗಳಿಸುತ್ತ ಇದ್ದಾರೆ. ಇದರೊಂದಿಗೆ ವ್ಯಾಸತ್ರಯ ಗ್ರಂಥಗಳ ಬಗ್ಗೆಯೂ ಅವರು ಅಧ್ಯಯನ ನಡೆಸಿ ಎರಡೂ ಗ್ರಂಥಗಳ ಪರೀಕ್ಷೆಯನ್ನು ಸುಲಲಿತವಾಗಿ ನೀಡುತ್ತಿರುವುದು ಸಂತೋಷದಾಯಕ ಎಂದು ಸಂತಸ ವ್ಯಕ್ತಪಡಿಸಿದರು.

ಸಂಸ್ಕೃತ ಭಾಷೆಯಲ್ಲಿಯೇ ವಿದ್ಯಾರ್ಥಿಗಳು ಪಂಡಿತರ ಮತ್ತು ಜ್ಞಾನಿಗಳ ನೇರ ಪ್ರಶ್ನೆಗಳಿಗೆ ಉತ್ತರ ನೀಡಿ, ಸೂಕ್ತ ವ್ಯಾಖ್ಯಾನವನ್ನೂ ಕೊಡುತ್ತಿರುವುದು ವಿದ್ಯಾಪೀಠದ ಶಿಕ್ಷಣಕ್ಕೆ ಹಿಡಿದ ಕನ್ನಡಿಯಾಗಿದೆ ಎಂದರು.

ಸಮಾರಂಭದಲ್ಲಿ ದಿಕ್ಸೂಚಿ ಭಾಷಣವನ್ನು ಮಾಡಿದ ಹಿರಿಯ ವಿದ್ವಾಂಸ ಡಾ.ಎ.ವಿ, ನಾಗಸಂಪಿಗೆ ಅವರು, ಅಧ್ಯಯನ ಮತ್ತು ಅಧ್ಯಾಪನ ಎರಡೂ ಪ್ರಕ್ರಿಯೆಗಳು ಸಾಂಗವಾಗಿ ಈ ವಿದ್ಯಾಪೀಠದಲ್ಲಿ ನೆರವೇರುತ್ತಿದೆ ಎಂದು ಹೊಗಳಿದರು.

ಮೈಸೂರಿನ ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ದ ಮಂಗಳವಾರದ ಕಲಾಪಗಳನ್ನು ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ, ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ವೀಕ್ಷಿಸಿದರು. ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ. ಪಿ. ಮಧುಸೂದನಾಚಾರ್ಯ, ವಿದ್ವಾಸ ಶ್ರೀ ಕಾಂತಾಚಾರ್ಯ ಇತರರು ಇದ್ದರು.

ನಾಲ್ಕು ದಶಕಗಳ ಹಿಂದೆ ಪೇಜಾವರ ಶ್ರೀ ವಿಶ್ವೇಶ ತೀರ್ಥರು ನ್ಯಾಯ ಸುಧಾ ಪರೀಕ್ಷೆ ನೀಡಿದವರಿಗೆ ಮಾತ್ರ ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಾಪಕ ವೃತ್ತಿ ನೀಡಲಾಗುವುದು ಎಂಬ ಕರಾರನ್ನು ಹಾಕಿದರು. ಅವರು ಅಂದು ನಮಗೆ ಹಾಕಿಕೊಟ್ಟ ನಿಯಮಗಳೇ ಇಂದು ವರವಾಗಿದೆ. ಇದನ್ನು ಇನ್ನೊಂದು ರೀತಿ ವಿಸ್ತರಿಸಿದ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥರು, ಸುಧಾ ಮಂಗಳ ಸಂದರ್ಭದಲ್ಲಿ ಸುಧಾ ಪರೀಕ್ಷೆಯೂ ನಡೆಯಬೇಕು. ವಿದ್ಯಾರ್ಥಿಗಳು ನೇರ ಪರೀಕ್ಷೆಯನ್ನು ಎದುರಿಸಬೇಕು ಎಂಬ ನಿಯಮವನ್ನು ಜಾರಿಗೆ ತಂದರು. ಇಂದು ದೇಶದ ಬಹುತೇಕ ಮಠಗಳೂ ಈ ನಿಯಮವನ್ನೇ ಅನುಸರಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.

ಮೈಸೂರಿನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಜ್ಞಾನ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಸಮಾಜಕ್ಕೆ ಅತ್ಯಂತ ಅನಿವಾರ್ಯವಾಗಿ ಬೇಕಾದಂತಹ ಶಾಸ್ತ್ರ, ಸನಾತನ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪಾಲಿಸುವ ಪ್ರತಿಭೆಗಳನ್ನು ಮಠವು ಬೆಳೆಸುತ್ತಿದೆ. ಇದು ಬಹುದೊಡ್ಡ ಸಮಾಜ ಸೇವೆ. ಧರ್ಮ, ಸಂಸ್ಕೃತಿಯೊಂದಿಗೆ ಆಚಾರ್ಯ ಶ್ರೀ ಮಧ್ವರ ಸಿದ್ಧಾಂತ ಮತ್ತು ಸಂದೇಶವನ್ನು ಸಮಾಜಕ್ಕೆ ತಲುಪಿಸುವಲ್ಲಿ ವ್ಯಾಸ ತೀರ್ಥ ವಿದ್ಯಾಪೀಠ ಬಹುದೊಡ್ಡ ಕೆಲಸವನ್ನು ಮಾಡುತ್ತಿದೆ. ಇದು ಮಹೋನ್ನತ ಕಾರ್ಯ.
-ಶ್ರೀಸತ್ಯಾತ್ಮತೀರ್ಥ ಸ್ವಾಮೀಜಿ, ಉತ್ತರಾದಿ ಮಠ

ವಿದ್ಯಾರ್ಜನೆಗೆ ಮಹತ್ತರವಾದ ಈ ಕೊಡುಗೆಯಿಂದ ದೇಶದ ನೂರಾರು ವಿದ್ಯಾರ್ಥಿಗಳಿಗೆ ಜ್ಞಾನ ಪರೀಕ್ಷೆ ಸಾಂಗವಾಗಿ ನೆರವೇರಲು ಸಹಕಾರಿ ಆಗಿದೆ ಎಂದು ಹೇಳಿದರು.

ಶ್ರೀ ಸತ್ಯಾತ್ಮತೀರ್ಥರದ್ದು ಮಠಾತೀತ ವ್ಯಕ್ತಿತ್ವವಾದರೆ, ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರದು ಜ್ಞಾನಾತೀತ ವ್ಯಕ್ತಿತ್ವ. ಎರಡೂ ಮಹಾನ್ ವ್ಯಕ್ತಿತ್ವಗಳು ಇಂದು ಒಂದೇ ವೇದಿಕೆಯಲ್ಲಿ ಸಂಗಮವಾಗಿರುವುದು ಸಜ್ಜನರ ಅಹೋಭಾಗ್ಯ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಮಂಗಳವಾರ ನಡೆದ ಪರೀಕ್ಷೆಯಲ್ಲಿ ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿ ಸೌಮಿತ್ರಿ ಅವರು ನ್ಯಾಯ ಸುಧಾ ಪ್ರಥಮ ಅಧ್ಯಾಯ ಮತ್ತು ತರ್ಕ ತಾಂಡವ ಗ್ರಂಥದ ಕುರಿತು ವ್ಯಾಖ್ಯಾನವನ್ನು ನೀಡಿ ಪಂಡಿತರ ಪ್ರಶ್ನೆಗಳಿಗೆ ಉತ್ತರಿಸಿದರು.

ಆಯಾಚಿತ ಶ್ರೀಶ ಅವರು ಚಂದ್ರಿಕಾ ಗ್ರಂಥದ ಪ್ರಥಮ ಅಧ್ಯಾಯದ ಪಾಠವನ್ನು ಸಮರ್ಪಣೆ ಮಾಡಿ ಸೂಕ್ತವಾಗಿ ನಿರೂಪಿಸಿ ವಿದ್ವಾಂಸರ ಪ್ರಶ್ನೆಗಳಿಗೆ ಸಮರ್ಥ ಉತ್ತರ ನೀಡಿದರು.

ಶ್ರೀ ಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದಲ್ಲಿ ಮಂಗಳವಾರ ನಡೆದ ಕಲಾಪಗಳು

ಗಣ್ಯ ವಿದ್ವಾಂಸರ ಉಪಸ್ಥಿತಿ
ಕಾರ್ಯಕ್ರಮದಲ್ಲಿ ಮುಂಬೈ ಸತ್ಯಧ್ಯಾನ ವಿದ್ಯಾಪೀಠದ ಕುಲಪತಿ ಮಾಹುಲಿ ವಿದ್ಯಾಸಿಂಹಾಚಾರ್ಯ, ಬೆಂಗಳೂರಿನ ಜಯತೀರ್ಥ ವಿದ್ಯಾಪೀಠದ ಪ್ರಾಚಾರ್ಯ ಸತ್ಯ ಧ್ಯಾನಚಾರ್ಯ ಕಟ್ಟಿ , ಹಿರಿಯ ವಿದ್ವಾಂಸ ಮಹಾ ಮಹೋಪಾಧ್ಯಾಯ ಎ. ಹರಿದಾಸಭಟ್ಟ, ಪ್ರಹ್ಲಾದಾಚಾರ್ಯ ಜೋಷಿ, ಹೊನ್ನಾಳಿ ಸತ್ಯಬೋಧಾಚಾರ್ಯ, ಸತ್ಯ ಪ್ರಮೋದ ಕಟ್ಟಿ, ಧನಂಜಯ ಆಚಾರ್ಯ, ಮೈಸೂರಿನ ಹಿರಿಯ ವಿದ್ವಾನ್ ಎಚ್.ವಿ. ನಾಗರಾಜ ರಾವ್, ಡಾ. ಶ್ರೀ ನಿಧಿ ಪ್ಯಾಟಿ, ಜ. ಮಾತರಿಶ್ವಾಚಾರ್ಯ, ವಿದ್ಯಾ ಪೀಠದ ಗೌರವ ಕಾರ್ಯದರ್ಶಿ ಡಾ.ಡಿ.ಪಿ. ಮಧುಸೂದನಾಚಾರ್ಯ ಇತರರು ಹಾಜರಿದ್ದರು.

ಸೋಸಲೆ ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Kannada News WebsiteLatest News KannadamysoreNyayasudha MangalaPejawara SwamijiSosaleSriman Nyaya SudhaTamil NaduUttaradi MuttVyasaraja Mathaಉತ್ತರಾದಿ ಮಠತಮಿಳುನಾಡುನ್ಯಾಯ ಸುಧಾ ಮಂಗಳಮೈಸೂರುವಿದ್ವತ್ ಸಭೆಶ್ರೀ ವ್ಯಾಸ ತೀರ್ಥ ವಿದ್ಯಾಪೀಠಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿಸಂಸ್ಕೃತ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಾರಣಾಸಿಯಲ್ಲಿ ಮೋದಿ ಹ್ಯಾಟ್ರಿಕ್ ಜಯಭೇರಿ | ಗೆಲುವಿನ ಅಂತರವೆಷ್ಟು?

Next Post

ಓದಿದ, ಕಲಿತ ವಿಷಯ ಮರೆಯದಿರಲು ಪರಿಹಾರವೇನು? ಸೋಸಲೆ ಶ್ರೀಗಳು ಅದ್ಬುತವಾಗಿ ವಿವರಿಸಿದ್ದಾರೆ ಓದಿ

kalpa News

kalpa News

Next Post
ಜೂನ್ 2-9 | ಸೋಸಲೆ ಶ್ರೀ ವ್ಯಾಸರಾಜ ಮಠದ ಸುಧಾಮಂಗಳ ಮಹೋತ್ಸವ | ಹಲವು ಮಠಾಧೀಶರು ಸಮಾಗಮ

ಓದಿದ, ಕಲಿತ ವಿಷಯ ಮರೆಯದಿರಲು ಪರಿಹಾರವೇನು? ಸೋಸಲೆ ಶ್ರೀಗಳು ಅದ್ಬುತವಾಗಿ ವಿವರಿಸಿದ್ದಾರೆ ಓದಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL