ಕಲ್ಪ ಮೀಡಿಯಾ ಹೌಸ್ | ಮೈಸೂರು |
ಬೆಂಗಳೂರು–ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ Bengaluru-Shivamogga Janashatabdi Express Train ಟಿಟಿಇ TTE ಎಂದು ನಕಲಿ ಪರಿಚಯ ನೀಡಿ ಪ್ರಯಾಣಿಕರಿಂದ ಹಣ ವಸೂಲು ಮಾಡಲು ಯತ್ನಿಸಿದ ವ್ಯಕ್ತಿಯನ್ನು ರೈಲ್ವೆ ಸಿಬ್ಬಂದಿ ಬಂಧಿಸಿ, ಜಿಆರ್‌ಪಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಜೂನ್ 1ರಂದು ರೈಲು ಸಂಖ್ಯೆ 12089ರಲ್ಲಿ ಟಿಕೆಟ್ ಪರಿಶೀಲನಾ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, ಅರಸೀಕೆರೆ ನಿಲ್ದಾಣ ದಾಟಿದ ನಂತರ ಸಿ-1 ಬೋಗಿಯಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನು ತಾನು ಟಿಟಿಇ ಎಂದು ಹೇಳಿಕೊಂಡಿರುವುದು ಸಿಬ್ಬಂದಿಯ ಗಮನಕ್ಕೆ ಬಂದಿದೆ.
ಪರಿಶೀಲನೆ ವೇಳೆ ಆತ ತನ್ನ ಮೊಬೈಲ್‌ನಲ್ಲಿ ನಕಲಿ ಗುರುತಿನ ಚೀಟಿಯನ್ನು ತೋರಿಸಿದ್ದಾನೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಆತ ರೈಲ್ವೆ ಸಿಬ್ಬಂದಿಯಲ್ಲ ಎಂಬುದು ಬಹಿರಂಗಗೊಂಡಿದೆ.
Also read: ಭಾರತ ಕ್ರಿಕೆಟ್ ತಂಡಕ್ಕೆ ಆಘಾತ | ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ
ಬಂಧಿತನನ್ನು ರಕೀಬುದ್ದೀನ್ ಎಂ.ಕೆ. (26) ಎಂದು ಗುರುತಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಆತ ಪ್ರಯಾಣಿಕರಿಂದ ಹಣ ವಸೂಲು ಮಾಡುವ ಉದ್ದೇಶದಿಂದ ಟಿಟಿಇ ವೇಷಧಾರಿಯಾಗಿ ರೈಲಿನಲ್ಲಿ ಸಂಚರಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ.
ನಂತರ ಆರೋಪಿಯನ್ನು ಅರಸೀಕೆರೆ ಸರ್ಕಾರಿ ರೈಲ್ವೆ ಪೊಲೀಸ್ (GRP) ಅಧಿಕಾರಿಗಳಿಗೆ ಒಪ್ಪಿಸಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















