ಕಲ್ಪ ಮೀಡಿಯಾ ಹೌಸ್ | ಮೈಸೂರು |
ಖಾಸಗಿ ಬಸ್ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಕೊಳ್ಳೆಗಾಲ ಹಾಗೂ ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅತಿ ವೇಗದಿಂದ ಸಂಚರಿಸುತ್ತಿದ್ದ ಖಾಸಗಿ ಬಸ್ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ ಕಾರಿನಲ್ಲಿದ್ದ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನೋವಾ ಕಾರು ಎಂದು ಗುರುತಿಸಲಾಗದಷ್ಟು ಹಾನಿಗೊಳಗಾಗಿದೆ. ಕಾರಿನ ಒಳಗೆ ಸಿಲುಕಿದ್ದವರನ್ನು ಸ್ಥಳೀಯರು ರಕ್ಷಿಸಿದ್ದು, ಇದರಲ್ಲಿ ಒಂದು ಮಗು ಸಹ ಇದೆ ಎಂದು ವರದಿಯಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರೆಲ್ಲರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















