ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramiah ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ MPPrathapSimha ವಿರುದ್ಧ ಎಫ್’ಐಆರ್ ದಾಖಲಾಗಿದೆ.
ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504 ಹಾಗೂ 153ರ ಅಡಿಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಎಫ್’ಐಆರ್ ದಾಖಲಾಗಿದೆ.

ಹನುಮ ಜಯಂತಿ ಅಂಗವಾಗಿ ಹುಣಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರತಾಪ್ ಸಿಂಹ, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.
Also read: ಕಾರು ಚಾಲಕನ ನಿರ್ಲಕ್ಷಕ್ಕೆ ಬಲಿಯಾಯ್ತು 2 ವರ್ಷದ ಕಂದಮ್ಮ | ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಟೀಕಿಸುವ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಸೋಮಾರಿ ಸಿದ್ದ ಎಂದಿದ್ದರು. ಇದು ಅವಹೇಳನಕಾರಿಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಇದರ ಅನ್ವಯ ಎಫ್’ಐಆರ್ ದಾಖಲಾಗಿದೆ.

ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆ ಎಂದು ದೂರಿದ್ದಾರೆ. ಪ್ರತಾಪ್ ಸಿಂಹರಿಂದ ಹಿಂದೂ ಮತ್ತು ಮುಸ್ಲಿಂ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


 
	    	


 Loading ...
 Loading ... 
							



 
                
Discussion about this post