ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮಾಜಿ ಸಂಸದ ಕಾಂಗ್ರೆಸ್ ಉಪಾಧ್ಯಕ್ಷರೂ ಆಗಿದ್ದ ಆರ್. ಧ್ರುವನಾರಾಯಣ (61) R Dhruvanarayan ಹೃದಯಾಘಾತದಿಂದ ನಿಧನರಾಗಿದ್ದಾರೆ
ಆರ್. ಧ್ರುವನಾ,ರಾಯಣ ಅವರಿಗೆ ಶನಿವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಧ್ರುವನಾರಾಯಣ ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಧ್ರುನಾರಾಯಣ ಅವರಿಗೆ ಪತ್ನಿ ಇಬ್ಬರು ಪುತ್ರರು, ಇದ್ದಾರೆ. 1983ರಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಇವರು 1986ರಲ್ಲಿ ಎನ್ ಎಸ್ ಯುಐ ಬೆಂಗಳೂರು ಘಟಕದ ಅಧ್ಯಕ್ಷರಾಗಿದ್ದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೂ ಕೊಳ್ಳೇಗಾಲ ಕ್ಷೇತ್ರದಿಂದ 1 ಬಾರಿ, ಸಂತೇಮರಹಳ್ಳಿ ಕ್ಷೇತ್ರದಿಂದ 1 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು, ವಿ. ಶ್ರೀನಿವಾಸ್ ಪ್ರಸಾದ್ ಎದುರು ಸೋಲು ಅನುಭವಿಸಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















