ಕಲ್ಪ ಮೀಡಿಯಾ ಹೌಸ್ | ಮೈಸೂರು |
ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 10 ಜನರು ಗಾಯಗೊಂಡಿರುವ ಘಟನೆ ಇಲ್ಲಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ನಡೆದಿದೆ.
ಬನ್ನಿಮಂಟಪದ ವಸತಿಗೃಹದ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಇತರ 6 ಮಂದಿಗೆ ಗಾಯವಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ 6 ಮಂದಿಯ ಸ್ಥಿತಿಯ ಚಿಂತಾಜನಕವಾಗಿದೆ ಎನ್ನಲಾಗಿದೆ.
ಎನ್ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Also read: ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಎಸ್ಪಿ ಮಿಥುನ್ ಕುಮಾರ್ ಸೂಚನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post