No Result
View All Result
Record Budget: Chief Minister Must Fulfill Hometown Demands, Urges Dr. Shushrutha Gowda
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Monday, March 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಹೆಚ್.ಡಿ. ಕುಮಾರಸ್ವಾಮಿ ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 26, 2023
in ಮೈಸೂರು, ರಾಜಕೀಯ
0
ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ರಾಜಕೀಯದಲ್ಲಿ ಯಾರಾದರೂ ಖಳನಾಯಕ ಇದ್ದರೆ ಅದು ಹೆಚ್.ಡಿ. ಕುಮಾರಸ್ವಾಮಿ ಅವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವವರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ಸರಣಿ ಟ್ವೀಟ್ ಮಾಡಿ ಮುಖ್ಯಮಂತ್ರಿಗಳನ್ನು ಮಹಾಭಾರತದ ಎಲ್ಲಾ ಖಳನಾಯಕರಿಗೆ ಹೋಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕ್ರಿಕೆಟ್ ನೋಡಲು ಹೋಗಿದ್ದರು ಎನ್ನುವ ಅವರು ಸರ್ಕಾರ ಬಿದ್ದುಹೋಗುವಾಗ ಅಮೆರಿಕದಲ್ಲಿ ಒಂದು ವಾರ ಕೂತಿದ್ದರು. ಒಂದು ವರ್ಷ 2 ತಿಂಗಳು ತಾಜ್ ವೆಸ್ಟ್ ಎಂಡ್ ನಲ್ಲಿ ಕಾಲಕಳೆಯುತ್ತಿದ್ದರು. ಇವರು ನಮಗೆ ಹೇಳಿಕೊಡಬೇಕೆ ಎಂದರು.
ತಪ್ಪುದಾರಿಗೆ ಎಳೆಯುತ್ತಿದ್ದಾರೆ
ಕುಮಾರಸ್ವಾಮಿ ಅವರ ಸರ್ಕಾರವನ್ನು ಸಿದ್ದರಾಮಯ್ಯ ಅವರೇ ಬೀಳಿಸಿದ್ದು, ಅದನ್ನು ಅವರು ಒಪ್ಪಿಕೊಳ್ಳಲಿ ಎಂದಿರುವ ಬಗ್ಗೆ ಮಾತನಾಡಿ ಅದನ್ನು ಅವರು ವಿಧಾನಮಂಡಲದ ವಿಶ್ವಾಸ ಮತಯಾಚನೆಯಾದ ಸಂದರ್ಭದಲ್ಲಿ ಉತ್ತರ ನೀಡಿದಾಗ ಈ ಸರ್ಕಾರವನ್ನು ಬೀಳಿಸಿದ್ದು ಬಿಜೆಪಿಯವರು ಎಂದಿರುವುದು ವಿಧಾನಮಂಡಲದ ರೆಕಾರ್ಡ್ ನಲ್ಲಿದೆ. ಅದನ್ನು ಬಿಡುಗಡೆ ಮಾಡುತ್ತೇನೆ. ಈಗ ಬೇರೆ ತರ ಹೇಳುತ್ತಿದ್ದಾರೆ. ಹಾಗಾದರೆ ವಿಧಾನಮಂಡಲವನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಶಾಸಕರು, ಸಚಿವರನ್ನು ಭೇಟಿ ಮಾಡದೆ ಹೋಟೆಲಿನಲ್ಲಿ ಕುಳಿತಿದ್ದರು ಎಂದರು.

ಬಿಜೆಪಿ ಅವರಿಗಿಂತ ಹೆಚ್.ಡಿ. ಕುಮಾರಸ್ವಾಮಿ ಹೆಚ್ಚು ಹತಾಶರಾಗಿದ್ದಾರೆ
ಬಿಜೆಪಿಗಿಂತಲೂ ಕುಮಾರಸ್ವಾಮಿ ಅವರು ಹೆಚ್ಚು ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ರಾಜಕೀಯವಾಗಿ ಹತಾಶರಾದವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹೆಚ್.ಡಿ. ಕುಮಾರಸ್ವಾಮಿ ಅವರು ಹತಾಶರಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಿಜೆಪಿಗಿಂತ ಜಾಸ್ತಿ ಹತಾಶರಾಗಿರುವುದು ಕುಮಾರಸ್ವಾಮಿ. ಬಿಜೆಪಿ ಜೊತೆ ಸೇರದೇ ಹೋಗಿದ್ದಾರೆ ಒಂದು ಸ್ಥಾನವನ್ನೂ ಗೆಲ್ಲಲು ಆಗುತ್ತಿರಲಿಲ್ಲ. ಕುರುಡರು, ಹೆಳವರ ರೀತಿ ಒಬ್ಬರಿಗೊಬ್ಬರು ಅವಲಂಬಿತರಾಗಿದ್ದಾರೆ ಎಂದರು.
ಚುನಾವಣೆ ಪ್ರಯುಕ್ತ ಯಾವ ರಾಜ್ಯಗಳಿಗೂ ಹಣ ಕೊಟ್ಟಿಲ್ಲ
ಹೈ ಕಮಾಂಡಿಗೆ ದೂರು ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಂಚ ರಾಜ್ಯಗಳ ಚುನಾವಣೆ ಬಂದಿರುವುದರಿಂದ ನೆಪಮಾಡಿಕೊಂಡು ಸುಳ್ಳು ಹೇಳುತ್ತಾರೆ. ಇಂದಿನವರೆಗೆ ನಾವು ಯಾವ ರಾಜ್ಯಗಳಿಗೂ ಹಣ ಕೊಟ್ಟಿಲ್ಲ. ಅದಕ್ಕಾಗಿ ಯಾರ ಬಳಿಯೂ ಹಣ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ವಿದ್ಯುತ್ ಕ್ಷಾಮ: ಕೃತಕ ಅಭಾವವಲ್ಲ
ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುವುದು, ಎಲ್ಲಾ ಸಕ್ಕರೆ ಕಾರ್ಖಾನೆ ಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ಆಗುತ್ತದೆ. ಅದರಿಂದ ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ ಎಂದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳುವಂತೆ ಇದು ಕೃತಕವಾಗಿ ಆಗಿರುವ ಅಭಾವವಲ್ಲ. 2 ಬಾರಿ ಮುಖ್ಯಮಂತ್ರಿಯಾದವರು ಸತ್ಯ ಮರೆಮಾಚಿ ಸುಳ್ಳು ಹೇಳುತ್ತಿದ್ದಾರೆ.
ಬೆಂಗಳೂರಿಗೆ ರಾಮನಗರ ಸೇರ್ಪಡೆ ಹೇಳಿಕೆ: ಡಿಸಿಎಂ ಜೊತೆ ಚರ್ಚೆ
ರಾಮನಗರವನ್ನು ಬೆಂಗಳೂರಿಗೆ ಸೇ ರ್ಪಡೆ ಮಾಡುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮುಖ್ಯಮಂತ್ರಿಗಳು ಈ ಪ್ರಶ್ನೆಯನ್ನು ಅವರನ್ನೇ ಕೇಳಿ ಎಂದರು.ಈ ಬಗ್ಗೆ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದರು.

Also read: ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ: ಹೆಚ್‌ಡಿಕೆ

ಬಿಜೆಪಿಗೆ ಮಾನ , ಮರ್ಯಾದೆ ಇದೆಯೇ
ಬಿಜೆಪಿ ಎಟಿಎಂ ಸರ್ಕಾರ ಎಂದು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ಸುಳ್ಳು ಆರೋಪ. ಆಪರೇಷನ್ ಕಮಲ ಕೈಗೊಂಡು 25 ಕೋಟಿ ಹಣ ನೀಡಿ, 25.ಕೋಟಿ ಚುನಾವಣೆ ಗೆ ಖರ್ಚು ಮಾಡಲು ಹಣ ಎಲ್ಲಿಂದ ಬಂತು. ಇವರಿಗೆ ಏನಾದರೂ ಮಾನ , ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದರು. ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿರುವುದಕ್ಕೆ ಯಾರು ಜವಾಬ್ದಾರರು. 5 ವರ್ಷಗಳಿಂದ ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. . ಬರದ ಸಂದರ್ಭದಲ್ಲಿ ವಿದ್ಯುತ್ ತೊಂದರೆಯಾಗಿರುವುದಕ್ಕೆ ಬಿಜೆಪಿ ಕಾರಣ. 16000 ಮೆಗಾ ವ್ಯಾಟ್ ಸೌರ ವಿದ್ಯುತ್ ನಾವು ಉತ್ಪಾದನೆ ಮಾಡಿದ್ದೆವು. ಬಿಜೆಪಿ ಯವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ಯಾವ ನೈತಿಕತೆಯೂ ಇಲ್ಲ. ಏನೂ ಮಾಡಿದ್ದಾರೆ 3 ವರ್ಷ 10 ತಿಂಗಳಲ್ಲಿ ಎಂದು ಪ್ರಶ್ನಿಸಿದರು.

http://kalpa.news/wp-content/uploads/2023/05/VID-20230516-WA0005.mp4

30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳು
ಹಣವಿಲ್ಲದಿದ್ದರೂ ಕೆಲಸ ಮಂಜೂರು ಮಾಡಿ, ಟೆಂಡರ್ ಕರೆದು ಬಿಲ್ಲುಗಳನ್ನು ಬಾಕಿ ಇಟ್ಟು ಹೋಗಿದ್ದಾರೆ. 30,000 ಕೋಟಿ ರೂ.ಗಳಷ್ಟು ಬಾಕಿ ಬಿಲ್ಲುಗಳಿವೆ. ಇದಕ್ಕೆ ಯಾರು ಹೊಣೆ. ನಮ್ಮ ಕಾಲದ ಹಾಗೂ ಬಿಜೆಪಿ ಕಾಲದ ಆರ್ಥಿಕಸ್ಥಿತಿ ಕುರಿತು ಶ್ವೇತಪತ್ರವನ್ನು ವಿಧಾನಮಂಡಲದಲ್ಲಿ ಮಂಡಿಸುತ್ತೇನೆ. ರಾಜ್ಯ ಹಾಳು ಮಾಡಿದ್ದಕ್ಕೆ ಜನ ತಿರಸ್ಕಾರ ಮಾಡಿದ್ದಾರೆ. ಈಗ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಾರೆ ಹೊರತು ಅದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದರು.

ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ
ಸಂಪುಟ ಪುನರ್ ರಚನೆ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಸಚಿವರಾಗಬೇಕೆಂದು ಬಯಸುವುದರಲ್ಲಿ ತಪ್ಪಿಲ್ಲ.ಮಂತ್ರಿಮಂಡಲ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.
ಖಾಲಿ ಡಬ್ಬಗಳು ಹೆಚ್ಚು ಶಬ್ದ ಮಾಡುತ್ತವೆ
ಜಾತಿಜನಗಣತಿ ವರದಿ ಬಿಡುಗಡೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಹೇಳಿಕೆಯ ನಂತರ ಅವರ ಮೇಲಿನ ವಿಪಕ್ಷಗಳ ಆರೋಪಗಳು ಹೆಚ್ಚಾಗಿದೆ ಎಂಬ ಬಗ್ಗೆ ಉತ್ತರಿಸಿ ರಾಜಕೀಯ ವಾಗಿ ಹತಾಶರಾಗಿಮಾತನಾಡುತ್ತಾರೆ. ಖಾಲಿ ಡಬ್ಬಗಳು ಹೆಚ್ಚು ಶಬ್ದ ಮಾಡುತ್ತವೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share199Tweet123Send
Previous Post

ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ: ಹೆಚ್‌ಡಿಕೆ

Next Post

ಬೆಂಗಳೂರಿನಲ್ಲಿ ಅ.27ರಿಂದ ಮೂರು ದಿನಗಳ “ತಿಂಡಿಪೋತರ ಹಬ್ಬ”

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರಿನಲ್ಲಿ ಅ.27ರಿಂದ ಮೂರು ದಿನಗಳ “ತಿಂಡಿಪೋತರ ಹಬ್ಬ”

ಬೆಂಗಳೂರಿನಲ್ಲಿ ಅ.27ರಿಂದ ಮೂರು ದಿನಗಳ “ತಿಂಡಿಪೋತರ ಹಬ್ಬ”

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
Record Budget: Chief Minister Must Fulfill Hometown Demands, Urges Dr. Shushrutha Gowda

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

ಸಿಎಂ ಸಿದ್ಧರಾಮಯ್ಯ ದಾಖಲೆಯ ಬಜೆಟ್ | ತವರು ಜಿಲ್ಲೆಯ ಬೇಡಿಕೆ ಈಡೇರಿಸಲಿ: ಡಾ. ಸುಶ್ರುತಗೌಡ ಆಗ್ರಹ

March 2, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

March 2, 2026
ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

ಮಾರಿಹಬ್ಬದ ಪ್ರಯುಕ್ತ ವಿಶೇಷ ರೈಲು ಸಂಚಾರ | ಸಂಸದ ರಾಘವೇಂದ್ರರವರಿಗೆ ಅಭಿನಂದನೆ

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL