ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ತಾವೇ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ #H D Kumaraswamy ಹೇಳಿದ್ದಾರೆ.
ನಗರದಲ್ಲಿ ಈಬಗ್ಗ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಸರನ್ನು ಬಹಿರಂಗಪಡಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ ಹಿನ್ನೆಲೆ ಶಾಸಕ ಜಿ.ಟಿ. ದೇವೇಗೌಡ ಅವರ ಬದಲಿಗೆ ತಾವೇ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದು ಬೇಡ ಎಂದಿದ್ದೇನೆ. ನಾನು, ಅವರು ಈ ಬಗ್ಗೆ ಚರ್ಚೆ ಮಾಡಿದ್ದು, ಕುಟುಂಬ ರಾಜಕಾರಣದ ಹೆಸರಿನಲ್ಲಿ ನಮ್ಮ ಮೇಲೆ ಅಪಪ್ರಚಾರ ನಡೆಯುತ್ತಿದೆ. ಈ ಅಪಪ್ರಚಾರದಿಂದ ದೂರವಾಗಲು ಇಂತಹ ಚರ್ಚೆಯನ್ನು ತಾನು ಮತ್ತು ಅನಿತಾ ಕುಮಾರಸ್ವಾಮಿ ಮಾಡಿದ್ದೇವೆ. ಈ ಬಗ್ಗೆ ಅಂತಿಮ ತೀರ್ಮಾನ ಚುನಾವಣೆ ಘೋಷಣೆ ನಂತರ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನಿಖಿಲ್‌ನನ್ನು ರಾಜಕೀಯ ಕ್ಷೇತ್ರಕ್ಕೆ ತರುವುದು ತಮಗೆ ಇಷ್ಟವಿರಲಿಲ್ಲ. ಮುಖಂಡರ ಒತ್ತಡದ ಮೇರೆಗೆ ಅವರನ್ನು ರಾಜಕಾರಣಕ್ಕೆ ತರಬೇಕಾಯಿತು. ಚುನಾವಣೆಯ ಸಂದರ್ಭದಲ್ಲಿ ಅಂದಿನ ಪರಿಸ್ಥಿತಿ ಮೇ ಸ್ಪರ್ಧಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post