ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸಂತೋಷ್ ಪಾಟೀಲ್ ಯಾರೆಂದು ನನಗೆ ಗೊತ್ತಿಲ್ಲ. ಹಾಗೂ ಆತನ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ ಎಂದು ಸಚಿವ ಈಶ್ವರಪ್ಪ Minister Eshwarappa ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿ ಮಾತನಾಡಿದ ಅವರು, ತಮ್ಮ ಇಲಾಖೆಯ ಮೇಲೆ ಶೇ.40ರಷ್ಟು ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರ ಸಂತೋಷ ಮೇಲೆ ತಾನು ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದೇನೆ. ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಏನೂ ಇಲ್ಲ. ಆತ ಯಾರೆಂಬುದು ನನಗೆ ಗೊತ್ತೇ ಇಲ್ಲ ಎಂದು ಹೇಳಿದ್ದಾರೆ.
ನಮ್ಮ ಇಲಾಖೆಯ ಮೇಲೆ ಆರೋಪ ಮಾಡಿರುವ ವಿಚಾರದಲ್ಲಿ ಸಂತೋಷ ಹಾಗೂ ಒಂದು ಖಾಸಗಿ ಚಾನಲ್ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ. ಹೀಗಾಗಿ, ಆತ್ಮಹತ್ಯೆ ಮಾಡಿಕೊಂಡಿರಬಹುದು. ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ ಎಂದರು.
Also read: ಮಿಸೆಸ್ ಇಂಡಿಯಾ ಎಲಿಗೆಂಟ್ ಸ್ಪರ್ಧೆಯಲ್ಲಿ ಶಿವಮೊಗ್ಗದ ನಿತ್ಯಾ ರನ್ನರ್ ಅಪ್
ಕಾಂಗ್ರೆಸ್ ರಾಜೀನಾಮೆ ನೀಡುವಂತೆ ಆಗ್ರಹಿಸಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ರಾಜೀನಾಮೆ ನೀಡುವುದಿಲ್ಲ. ತನಿಖೆ ನಡೆಯಲಿ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post