ಕಲ್ಪ ಮೀಡಿಯಾ ಹೌಸ್ | ಮೈಸೂರು |
ಇತಿಹಾಸದ ಚರ್ಚೆ ಅವಶ್ಯಕತೆ ಇದ್ದರೆ ಆಹ್ವಾನ ಕೊಡುತ್ತೇನೆ, ವೇದಿಕೆ ಸಿದ್ದಪಡಿಸಲಿ ಸ್ನೇಹಿತರನ್ನು ಬಿಟ್ಟು ಜೆಡಿಎಸ್ ಪಕ್ಷ ಈಗ ಕುಟುಂಬದ ಪಕ್ಷವಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ #H D Kumaraswamy ಸಚಿವ ಚಲುವರಾಯಸ್ವಾಮಿ #Minister Cheluvarayaswamy ಸವಾಲು ಹಾಕಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಮೀರ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದರು.
ಬಾಯಿಗೆ ಬಂದಂತೆ ಮಾತನಾಡಿದರೆ ಕೇಳಿಸಿಕೊಳ್ಳೇಕೆ ನಾವು ಸಿದ್ಧರಿಲ್ಲ, ನನಗೆ ಕುಮಾರಸ್ವಾಮಿಯಂತೆ ಮಾಧ್ಯಮದವರ ಮುಂದೆ ನಾಲಿಗೆ ಹರಿಬಿಡಲು ಸಾಧ್ಯವಿಲ್ಲ. ಅವರು ಚರ್ಚೆಗೆ ಬರುವುದಾದರೆ ಒಂದು ವೇದಿಕೆ ಸಿದ್ಧಮಾಡಿ. ಯಾರು ಹೊಲಸು, ಕಚಡ ಎಂದು ಚರ್ಚೆ ಮಾಡೋಣ ಎಂದರು.
Also read: ಪಡಿತರ ಚೀಟಿ ಕಡಿತ, ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಸೂಚನೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ
20 ವರ್ಷ ಅವರ ಜತೆ ಇದ್ದೆವು, ಯಾರು ಸ್ನೇಹ ಬಿಟ್ಟರು ಎಂದು ಚರ್ಚಿಸೋಣ. ಸ್ನೇಹಿತರಿಂದಲೇ ಸಿಎಂ ಆದೇ ಎಂದು ಹೆಚ್?.ಡಿ. ಕುಮಾರಸ್ವಾಮಿ ಹೇಳಿದ್ದರು. ಆಗ ಅದು ಕರಾಳದಿನ ಆಗಿರಲಿಲ್ಲವಾ? ಅಷ್ಟು ದಿನ ಏಕೆ ಕೊಳಚೆ ವಾಸನೆ ಕುಡಿದಿದ್ದರು? ಎಂದು ಪ್ರಶ್ನಿಸಿದರು.
ಹೆಚ್.ಡಿ. ಕುಮಾರಸ್ವಾಮಿ ಆ ರೀತಿ ಮಾತನಾಡಿದ್ದು ಎಷ್ಟು ಸರಿ? ಉತ್ತರ ಕೊಡುವುದು ಸೂಕ್ತ ಎಂದರೆ ಕೊಡುತ್ತೇನೆ. ಮಾತಿನಿಂದ ಯಾರೂ ದೊಡ್ಡವರು ಆಗುವುದಿಲ್ಲ, ನಡವಳಿಕೆಯಿಂದ ದೊಡ್ಡವರಾಗಬೇಕು. ಕೇಂದ್ರ ಸಚಿವ ಕುಮಾರಸ್ವಾಮಿಗೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ. ಇತಿಹಾಸ ಚರ್ಚೆ ಮಾಡಬೇಕು ಅಂದರೆ ಸದನದಲ್ಲೇ ಚರ್ಚೆ ಮಾಡೋಣ ಎಂದು ಪಂಥಾಹ್ವಾನ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post