ಕಲ್ಪ ಮೀಡಿಯಾ ಹೌಸ್ | ಮೈಸೂರು |
40 ಪರ್ಸೆಂಟ್ ಸರ್ಕಾರ ಎಂದು ನಮ್ಮನ್ನು ಟೀಕಿಸುವ ಕಾಂಗ್ರೆಸ್’ಗೆ ತಾಕತ್ತಿದ್ದರೆ ನಮ್ಮ ಆಡಳಿತದಲ್ಲಿ ಒಂದು ಭ್ರಷ್ಟಾಚಾರ ಪ್ರಕರಣ ತೋರಿಸಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ Former Minister Eshwarappa ಸವಾಲು ಹಾಕಿದ್ದಾರೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಬಂದ ಹಿನ್ನೆಲೆಯಲ್ಲಿ ನಾಡ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಂಗ್ರೆಸ್’ನ ಭ್ರಷ್ಟಾಚಾರ ವಿಚಾರದಲ್ಲಿ ಅವರದೇ ಪಕ್ಷದ ರಮೇಶ್ ಕುಮಾರ್ ಅವರು ಸತ್ಯವನ್ನೇ ಹೇಳಿದ್ದಾರೆ. ನಮ್ಮ ವಿರುದ್ಧ 40 ಪರ್ಸೆಂಟ್ ಸರ್ಕಾರ ಎಂದು ಟೀಕಿಸುವ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ನಮ್ಮಲ್ಲಿ ಒಂದೇ ಒಂದು ಪ್ರಕರಣ ತೋರಿಸಲಿ. ಒಂದೇ ಒಂದು ತಪ್ಪು ನಮ್ಮಿಂದ ಆಗಿದ್ದರೆ ಬಹಿರಂಗಪಡಿಸಲಿ ಎಂದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ವಿರುದ್ದ ಆರೋಪ ಬಂತು. ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರವಾಗಬಾರದು ಎಂದು ರಾಜೀನಾಮೆ ನೀಡಿದ್ದೆ. ತಾಯಿ ಚಾಮುಂಡೇಶ್ವರಿ ದಯೆಯಿಂದ ಇಂದು ಆರೋಪ ಮುಕ್ತನಾಗಿ ಹೊರಬಂದಿದ್ದೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post