No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಧಾರ್ಮಿಕ ಆಕ್ರಮಣ ತಡೆಯಲು ಭಾರತೀಯರು ಜಾಗೃತರಾಗಿ: ಗೋ. ಮಧುಸೂದನ

ಅಧಿಕ ಜ್ಯೇಷ್ಠ ಮಾಸೋತ್ಸವ -33 ದಿನಗಳ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

kalpa News by kalpa News
May 18, 2026
in ಮೈಸೂರು
1
ಧಾರ್ಮಿಕ ಆಕ್ರಮಣ ತಡೆಯಲು ಭಾರತೀಯರು ಜಾಗೃತರಾಗಿ: ಗೋ. ಮಧುಸೂದನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಧಾರ್ಮಿಕ ಆಕ್ರಮಣಗಳನ್ನು ತಡೆಯಲು ಭಾರತೀಯರು ಜಾಗೃತರಾಗಬೇಕಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ. ಮಧುಸೂದನ ಹೇಳಿದರು.
ಅಧಿಕ ಜ್ಯೇಷ್ಠ ಮಾಸದ ಅಂಗವಾಗಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠ ಆಯೋಜನೆ ಮಾಡಿರುವ ಅಧಿಕ ಜ್ಯೇಷ್ಠ ಮಾಸೋತ್ಸವ -33 ದಿನಗಳ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಭಾನುವಾರ ಸಂಜೆ ಅಗ್ರಹಾರದ ಕಾಶಿ ವಿಶ್ವೇಶ್ವರ ದೇವಾಲಯದ ಆವರಣದ ಬೃಹತ್ ವೇದಿಕೆಯಲ್ಲಿ ಚಾಲನೆ ನೀಡಿದ ಸಂದರ್ಭ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರೃ ಬಂದು 80 ವರ್ಷ ಕಳೆದರೂ ನಾವಿನ್ನೂ ಗುಲಾಮಿ ಮನೋಭಾವದಲ್ಲೇ ಇದ್ದೇವೆ. ಭಾರತ ಮತ್ತು ಹಿಂದೂಗಳು ಸಾವಿರಾರು ವರ್ಷಗಳಿಂದ ಪರಕೀಯರ ಪ್ರಭುತ್ವದಲ್ಲೇ ನಲುಗಿದ್ದಾರೆ. ಇತ್ತೀಚೆಗೆ ಜಾಗೃತಿ ಮೂಡುತ್ತಿದೆ. ದೇವ ನಿರ್ಮಿತ ದೇಶದಲ್ಲಿ ಮಠ ಮಾನ್ಯಗಳು ಧರ್ಮದ ಪುನರುತ್ಥಾನಕ್ಕೆ ಬೆಂಬಲಿಸುತ್ತಿರುವುದು ಶ್ಲಾಘನೀಯ ಎಂದರು.
ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥರು ಅಧಿಕ ಮಾಸದ ಅಂಗವಾಗಿ 33 ದಿನ ಮೈಸೂರಿನಲ್ಲಿ ವಿಶೇಷ ಧಾರ್ಮಿಕ ಕಾರ್ಯಗಳಿಗೆ ಪ್ರೇರಣೆ ನೀಡಿದ್ದಾರೆ. ಗುರುಗಳ ಅನುಗ್ರಹದಿಂದ ಧಾರ್ಮಿಕ ಸೇವಾ ಕಾರ್ಯಗಳು ಸಂಪನ್ನಗೊಂಡು ಜನರಲ್ಲಿ ಭಕ್ತಿ , ಭಾವ ಹೆಚ್ಚಾಗಲಿ ಎಂದರು.
ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ಸನಾತನ ಧರ್ಮ ಎಂಬುದೇ ಇಲ್ಲ ಎಂಬ ಚರ್ಚೆ ಆರಂಭವಾಗಿರುವ ಕಾಲಘಟ್ಟದಲ್ಲಿ ಭಾರತೀಯರಲ್ಲಿ ಎಚ್ಚರ ಮೂಡಬೇಕಿದೆ ಎಂದರು. ಮನದ ಕೊಳೆ ತೊಳೆಯಲು ಜ್ಯೇಷ್ಠ ಅಧಿಕ ಮಾಸ ಉತ್ತಮ ಕಾಲಘಟ್ಟವಾಗಿದೆ. ಈ ಸಂದರ್ಭವನ್ನು ಸದ್ಬಳಕೆ ಮಾಡಿಕೊಂಡು ಸಾತ್ವಿಕ ಕಾರ್ಯಗಳನ್ನು ಹೆಚ್ಚಾಗಿ ಮಾಡಬೇಕು ಎಂದರು.

ಧ್ಯಾನ, ಪೂಜೆ, ಹೋಮ ಮತ್ತು ಅನ್ನದಾನಗಳು ಪುಣ್ಯ ಹೆಚ್ಚಿಸಲಿವೆ ಎಂದರು. ಧರ್ಮ ಪೀಠಗಳ ಸೇವಾ ಕಾರ್ಯಗಳಿಂದ ವೇದಾಧ್ಯಯನ ಮಾಡ ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದು ನಮ್ಮ ಪರಂಪರೆ ಪಾಲನೆಗೆ ಸಹಕಾರಿ ಎಂದರು.
ಸ್ವಾಮೀಜಿ ಸಂದೇಶ

33 ದಿನಗಳ ಕಾರ್ಯಕ್ರಮ ಉದ್ಘಾಟಿಸಿ ಸಂದೇಶ ನೀಡಿದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ, ಭಕ್ತಿ ದೃಢವಾಗಲು ಸತ್ಕರ್ಮ ಮಾಡುವುದು ಬಹಳ ಮುಖ್ಯ ಎಂದರು. ನಮ್ಮ ಪ್ರಾಚೀನ ದೇಗುಲಗಳು, ಮಠಗಳು, ಧಾರ್ಮಿಕ ಕ್ಷೇತ್ರಗಳು ದೇಶದ ಸಂಸ್ಕೃತಿಯನ್ನು ಅನಾದಿ ಕಾಲದ ವರೆಗೆ ಉಳಿಸುವ ತಾಣಗಳಾಗಿವೆ. ಅಲ್ಲಿಂದ ಪ್ರೇರಣೆ ಪಡೆದು ಧರ್ಮ ಮಾರ್ಗದಲ್ಲಿ ಸಾಗಬೇಕು ಎಂದರು.

ಭಕ್ತಿ, ಜ್ಞಾನ ಮತ್ತು ವಿರಕ್ತಿ ಮೂರ್ತಿಗಳ ಅನುಗ್ರಹದಿಂದ ಅಧಿಕ ಜ್ಯೇಷ್ಠ ಮಾಸ ಎಲ್ಲರಿಗೂ ಉತ್ತಮ ಫಲಗಳನ್ನೇ ನೀಡಲಿ ಎಂದವರು ಆಶಿಸಿದರು. ಮಠದ ದಿವಾನರಾದ ಶಶಿ ಆಚಾರ್ಯ, ವ್ಯವಸ್ಥಾಪಕ ಪಂಡಿತ ಅನಿರುದ್ಧಾಚಾರ್ಯ ಇತರರು ಇದ್ದರು.

ಬೆಳಗ್ಗೆ ಧನ್ವಂತರಿ ಸನ್ನಿಧಿಯಲ್ಲಿ ಶ್ರೀಗಳಿಂದ ಸಂಸ್ಥಾನ ಪೂಜೆ, ಭಕ್ತರಿಗೆ ಮುದ್ರಾ ಧಾರಣೆ ನಡೆಯಿತು. ನಂತರ ಧನ್ವಂತರಿ ಹೋಮಕ್ಕೆ ಮತ್ತು ಅಖಂಡ ಪಾರಾಯಣಕ್ಕೆ ಚಾಲನೆ ನೀಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮೈಸೂರು
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಯೋಗಿಗಳಿಗೂ ದೊರಕದ ಫಲವನ್ನು ಸಾಮಾನ್ಯ ಭಕ್ತರು ಗಳಿಸಬಹುದು | ಸತ್ಯಾತ್ಮ ಶ್ರೀ

Next Post

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್’ಎಸ್’ಜಿ ಯೋಧರಿಂದ ಮಾಕ್ ಡ್ರಿಲ್ | ಏನೆಲ್ಲಾ ನಡೆಯಿತು?

kalpa News

kalpa News

Next Post
ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್’ಎಸ್’ಜಿ ಯೋಧರಿಂದ ಮಾಕ್ ಡ್ರಿಲ್ | ಏನೆಲ್ಲಾ ನಡೆಯಿತು?

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್'ಎಸ್'ಜಿ ಯೋಧರಿಂದ ಮಾಕ್ ಡ್ರಿಲ್ | ಏನೆಲ್ಲಾ ನಡೆಯಿತು?

Comments 1

  1. Pingback: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್'ಎಸ್'ಜಿ ಯೋಧರಿಂದ ಮಾಕ್ ಡ್ರಿಲ್ | ಏನೆಲ್ಲಾ ನಡೆಯಿತು? » kalpa.news

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL