No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಕೃಷಿ ವಿದ್ಯಾಲಯ ಕೇವಲ ಕೃಷಿ ಪದವೀಧರರನ್ನು ತಯಾರು ಮಾಡುವ ಸಂಸ್ಥೆಯಲ್ಲ: ಸಿಎಂ ಸಿದ್ದರಾಮಯ್ಯ

kalpa News by kalpa News
November 18, 2023
in ಮೈಸೂರು
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಮೈಸೂರು |

ಹಸಿರು ಕ್ರಾಂತಿ ನಿರಂತರವಾಗಿ ಆಗಬೇಕು. ಇದಾಗಬೇಕಾದರೆ ಹೊಸ ತಳಿಗಳು, ಹೊಸ ಔಷಧ, ಮಣ್ಣಿನ ಫಲವತ್ತತೆ, ತಂತ್ರಜ್ಞಾನ, ರೈತರಿಗೆ ನ್ಯಾಯಯುತ ಬೆಲೆ, ಆಹಾರ ಸಂಗ್ರಹಣೆಗೆ ಗೋದಾಮುಗಳು ಆಗಬೇಕು ಇದ್ದಾಗ ಮಾತ್ರ ಸುಸ್ಥಿರವಾದ ಕೃಷಿ ಬೆಳವಣಿಗೆ ಆಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.

ಜಿಕೆವಿಕೆ ಆವರಣದಲ್ಲಿ ಕೃಷಿ ಮೇಳ ಉದ್ಘಾಟಿಸಿ ಕೃಷಿ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ರಾಜ್ಯದಲ್ಲಿ ಸ್ಥಾಪನೆಗೊಂಡ ಮೊದಲ ಕೃಷಿ ವಿಶ್ವವಿದ್ಯಾಲಯ. 6 ದಶಕಗಳಿಂದ ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ರಾಜ್ಯದ ರೈತರಿಗೆ ಕೃಷಿಯಲ್ಲಿ ಆಗಿರುವ ಆವಿಷ್ಕಾರ ಹಾಗೂ ಬೆಳವಣಿಗೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಾ ಬಂದಿದೆ ಎಂದರು.

ಕೃಷಿಕರಿಗೆ ವಿಶ್ವವಿದ್ಯಾಲಯದಲ್ಲಿ ಆಗುವ ತಂತ್ರಜ್ಞಾನದ ಅಭಿವೃದ್ಧಿ, ಹೊಸ ತಳಿಗಳು, ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವುದು ಮುಂತಾದವನ್ನು ಜನರಿಗೆ ತಿಳಿಸುವ ಕೆಲಸವನ್ನು ಮಾಡಬೇಕು. ಕೃಷಿ ವಿದ್ಯಾಲಯ ಕೇವಲ ಕೃಷಿ ಪದವೀಧರರನ್ನು ತಯಾರು ಮಾಡುವ ಸಂಸ್ಥೆಯಲ್ಲ. ಕೃಷಿ ವಿದ್ಯಾರ್ಥಿಗಳನ್ನು ತಯಾರಿಸುವ ಜೊತೆಗೆ ಸಂಶೋಧನೆಗಳಿಗೆ ಒತ್ತು ನೀಡಬೇಕು ಎಂದರು.
ನಮ್ಮ ರಾಜ್ಯ ಇಡೀ ದೇಶದಲ್ಲಿ ರಾಜಸ್ತಾನವನ್ನು ಬಿಟ್ಟರೆ ಹೆಚ್ಚು ಒಣ ಭೂಮಿ ಇರುವ ರಾಜ್ಯ. ಹೆಚ್ಚು ರೈತರು ಕೃಷಿಯನ್ನು ಅವಲಂಬಿಸಿದ್ದಾರೆ. ನಾವು ಎಲ್ಲಾ ರೈತರೂ ಕೃಷಿಯನ್ನು ಬಿಡದಂತೆ ಮಾಡಬೇಕಾದರೆ, ಕೃಷಿ ಲಾಭದಾಯಕವಾಗಬೇಕು. ಕೃಷಿ ಲಾಭದಾಯಕವಾಗದೇ ಹೋದೆ ಬಹಳಷ್ಟು ಜನ ರೈತರು ಕೃಷಿಯನ್ನು ಬಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಬಹಳಷ್ಟು ಜನ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಮಾಡಿ ಬದುಕಬಹುದು ಎಂಬ ಪರಿಸ್ಥಿತಿ ನಿರ್ಮಿಸುವುದು ಕೃಷಿ ವಿವಿಗಳಲ್ಲಿ ಕೆಲಸ ಮಾಡುವ ವಿಜ್ಞಾನಿಗಳು, ಅಧ್ಯಾಪಕರು ಹೆಚ್ಚು ಒತ್ತು ನೀಡಬೇಕು ಎಂದರು.

Also read: ಮಳೆಯಿಂದ ಹಾನಿಯಾದ ಮನೆಗಳ ದುರಸ್ತಿ ಪರಿಹಾರ ಗೊಂದಲ ನಿವಾರಿಸಿ: ಶಾಸಕ ಅರುಣ್ ಮನವಿ

ಕಡಿಮೆ ನೀರಿನಲ್ಲಿಯೂ ಬೆಳೆಯುವಂಥ ತಳಿಗಳು ಅಗತ್ಯ
ಕೃಷಿ ವಿವಿ 5 ಹೊಸ ತಳಿಗಳನ್ನು ಬಿಡುಗಡೆ ಮಾಡಿರುವುದು ಸಂತೋಷ. ತಳಿಗಳು ನೀರು ಕಡಿಮೆಯಿದ್ದಾಗಲೂ ಬೆಳೆಯುವುದು ಸಾಧ್ಯವಿರಬೇಕು. ರೋಗ ನಿರೋಧಕಕ ಶಕ್ತಿ ಇರುವಂತೆ ಆಗಬೇಕು ಬಹಳಷ್ಟು ರೈತರು ಅನೇಕಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಳೆ, ಬೆಳೆ ಇಲ್ಲದೇ, ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಕಷ್ಟದಲ್ಲಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಬರಗಾಲಕ್ಕೆ ತುತ್ತಾಗು ಸ್ಥಿತಿ ಇದೆ ಎಂದರು.
ಕೃಷಿ ಇದ್ದಲೆಲ್ಲಾ ಬರಗಾಲ ಉಂಟಾಗಿದೆ. ಮೊದಲು 4-5 ವರ್ಷಗಳಿಗೊಮ್ಮೆ ಬರಗಾಲ ಬರುತ್ತಿತ್ತು. ಕೆಲವೊಮ್ಮೆ ಭೀಕರ ಬರಗಾಲ ಬರುತ್ತದೆ. ಈ ಬಾರಿ 223 ತಾಲೂಕುಗಳಲ್ಲಿ ಬರಗಾಲ ಘೋಷಣೆ ಮಾಡಲಾಗಿದೆ. ಹೆಚ್ಚು ಕಡಿಮೆ ಶೇ. 90 ರಷ್ಟು ಬರಗಾಲ ಉಂಟಾಗಿದೆ. ಸರ್ಕಾರ ಸಹಾಯಧನ ಕೊಟ್ಟರೂ, ನೀರಿ ಕೊಡಬಹುದು. ಆದರೆ ಬೆಳೆಯ ನಷ್ಟವನ್ನು ತುಂಬಿಕೊಡಲು ಸಾಧ್ಯವಾಗುವುದಿಲ್ಲ. ನಷ್ಟ ಭರಿಸುತ್ತೇವೆ ಎಂದರೆ ಅದು ರೈತರನ್ನು ತಪ್ಪು ದಾರಿಗೆ ಎಳೆದಂತಗುತ್ತದೆ ಎಂದರು.

ಸುಮಾರು 33 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ. ಎನ್’ಡಿಆರ್’ಎಫ್ ಮಾರ್ಗಸೂಚಿಯ ಪ್ರಕಾರ ಸರ್ಕಾರ 17900 ಕೋಟಿ ರೂ.ಗಳ ಪರಿಹಾರ ಕೇಳಿದೆ. 16 ಸಾವಿರ ಕೋಟಿಯಷ್ಟು ರೈತರಿಗೆ ನಷ್ಟವಾಗುತ್ತದೆ. ಬೆಳೆವಿಮೆ ಮಾಡಿದ್ದರೂ ಪೂರ್ಣ ನಷ್ಟ ಭರಿಸಲು ಸಾಧ್ಯವಿಲ್ಲ. ಇಂಥ ಪರಿಸ್ಥಿತಿಯಲ್ಲಿ ರೈತರನ್ನು ಕಾಪಾಡುವುದು ಸರ್ಕಾರದ ಹಾಗೂ ವಿವಿಗಳ ಜವಾಬ್ದಾರಿ. ಕೃಷಿ ವಿವಿಗಳ ಪಾತ್ರ ಮಹತ್ವದ್ದು. ದೇಶದಲ್ಲಿ ಕೃಷಿ ಕ್ಷೇತ್ರದ ಮೇಲೆ ಆಹಾರಕ್ಕಾಗಿ ಅವಲಂಬನೆಯಾಗಿರುತ್ತಾರೆ. ಅವರಿಗೆ ಆಹಾರದ ಉತ್ಪಾದನೆಯಾಗಬೇಕು ಎಂದರು.
ರೈತರು ಬಹುಬೆಳೆಗಳನ್ನು ಬೆಳೆಯಬೇಕು
ಕೃಷಿಯ ಹಿನ್ನೆಲೆಯಿಂದ ಬಂದ ನನಗೆ ರೈತರ ಕಷ್ಟ ತಿಳಿದಿದೆ. ರೈತರು ವರ್ಷಪೂರ್ತಿ ಜಮೀನಿನಲ್ಲಿ ದುಡಿಯುತ್ತಾರೆ. ಈ ಶ್ರಮಜೀವಿಗಳ ಜೀವನವನ್ನು ಹಸನುಗೊಳಿಸಲು, ಕೃಷಿ ವಿವಿಗಳು ಹೆಚ್ಚಿನ ಸಂಶೋಧನೆಯನ್ನು ಕೈಗೊಳ್ಳಬೇಕು. ವಿಶ್ವವಿದ್ಯಾಲಯದಲ್ಲಿ ಪದವೀಧರರನ್ನು ತಯಾರು ಮಾಡುವ ಜೊತೆಗೆ ಸಂಶೋಧನೆಗೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದರು.

ಸಿರಿಧಾನ್ಯಗಳು, ಸೂರ್ಯಕಾಂತಿ ಸೇರಿದಂತೆ ವಿವಿಧ ಬೆಳೆಗಳಿಗೆ ಆರೋಗ್ಯದೃಷ್ಟಿಯಿಂದ ಹೆಚ್ಚಿನ ಬೇಡಿಕೆ ಉಂಟಾಗಿದೆ. ಹೆಚ್ಚಿನ ಬೇಡಿಕೆ ಇರುವ ಸಿರಿಧಾನ್ಯಗಳನ್ನು ಬೆಳೆಸಲು ರೈತರಲ್ಲಿ ಜಾಗೃತಿ ಮೂಡಿಸಬೇಕು. ರೈತರ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ವ್ಯವಸ್ಥೆಯನ್ನು ಪೂರೈಸಬೇಕು. ನಮ್ಮ ಸರ್ಕಾರ ರೈತರಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತದೆ. ಕೃಷಿ ವಿವಿಗಳು ಹೊಸ ತಳಿಗಳು, ಹೊಸ ಸಂಶೋಧನೆಗಳನ್ನು ನಡೆಸಲು ಹೆಚ್ಚಿನ ಹಣವನ್ನೂ ಸರ್ಕಾರ ನೀಡಲು ಸಿದ್ಧವಿದೆ. ನಮ್ಮ ಸರ್ಕಾರ ಕೃಷಿ ಭಾಗ್ಯ ಯೋಜನೆ ಪುನಃ ಜಾರಿ ಮಾಡಿದೆ. ಹೊಸ ತಳಿಗಳನ್ನು ಬೆಳೆಯುವ ಮೂಲಕ ರೈತರಿಗೆ ಹೆಚ್ಚಿನ ಫಸಲು ದೊರೆಯುತ್ತದೆ. ಬಹುಬೆಳೆಗಳನ್ನು ಬೆಳೆಯುವ ಪ್ರವೃತ್ತಿಯನ್ನು ರೈತರು ಬೆಳೆಸಿಕೊಳ್ಳಬೇಕು. ಇಂದು ಪುರಸ್ಕೃತರಾಗಿರುವ ರೈತ ಸಾಧಕರ ಸಾಧನೆಗಳು ರೈತರಿಗೆ ಮಾದರಿಯಾಗಬೇಕು ಎಂದರು.

(ವರದಿ: ಡಿ.ಎಲ್. ಹರೀಶ್)

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited  

 

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಳೆಯಿಂದ ಹಾನಿಯಾದ ಮನೆಗಳ ದುರಸ್ತಿ ಪರಿಹಾರ ಗೊಂದಲ ನಿವಾರಿಸಿ: ಶಾಸಕ ಅರುಣ್ ಮನವಿ

Next Post

ಡಿವಿಎಸ್ ಕಾಲೇಜಿನಲ್ಲಿ ಇಂಧನರಹಿತ ಅಡುಗೆ ಸ್ಪರ್ಧೆ | ವಿದ್ಯಾರ್ಥಿಗಳು ಏನೆಲ್ಲಾ ತಯಾರಿಸಿದ್ದರು?

kalpa News

kalpa News

Next Post
ಡಿವಿಎಸ್ ಕಾಲೇಜಿನಲ್ಲಿ ಇಂಧನರಹಿತ ಅಡುಗೆ ಸ್ಪರ್ಧೆ | ವಿದ್ಯಾರ್ಥಿಗಳು ಏನೆಲ್ಲಾ ತಯಾರಿಸಿದ್ದರು?

ಡಿವಿಎಸ್ ಕಾಲೇಜಿನಲ್ಲಿ ಇಂಧನರಹಿತ ಅಡುಗೆ ಸ್ಪರ್ಧೆ | ವಿದ್ಯಾರ್ಥಿಗಳು ಏನೆಲ್ಲಾ ತಯಾರಿಸಿದ್ದರು?

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL