ಕಲ್ಪ ಮೀಡಿಯಾ ಹೌಸ್ | ಮೈಸೂರು |
ಬದುಕಿನುದ್ದಕ್ಕೂ ವಿದ್ಯಾರ್ಥಿಯಾಗಿದ್ದು, ಭಾರತೀಯ ಪುರಾತನ ಶಾಸ್ತ್ರಜ್ಞಾನ ಪಡೆಯುವ ಹಸಿವು ಇದ್ದರೆ ಜೀವನ ಸಾರ್ಥಕವಾಗುತ್ತದೆ ಎಂದು ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ಕೃಷ್ಣಮೂರ್ತಿಪುರಂನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಸೋಸಲೆ ಶ್ರೀ ವ್ಯಾಸರಾಜ ಮಠ ಹಮ್ಮಿಕೊಂಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದ 2ನೇ ದಿನದ ಕಲಾಪಕ್ಕೆ ಸೋಮವಾರ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.

ನಿರಂತರವಾಗಿ ಅಧ್ಯಯನ ಮಾಡಲು ಸಂಯಮ ಇರಬೇಕು. ಓದಿದ್ದನ್ನು ಚಿಂತನೆ ಮಾಡಬೇಕು. ಆಗ ಅದು ಜ್ಞಾನವಾಗಿ ನಮ್ಮಲ್ಲಿ ನೆಲೆಸಿ ಸಾರ್ಥಕತೆ ಪಡೆಯುತ್ತದೆ ಎಂದರು.
ನಾನು ಕಳೆದ ಒಂದು ದಶಕದಿಂದ ವಿದ್ಯಾರ್ಥಿಗಳಿಗೆ ಶಾಸ್ತ್ರಪಾಠ ಮಾಡಿದ್ದೇನೆ ಎಂದು ವಿದ್ವಾಂಸರು ಪ್ರಶಂಸೆ ನೀಡಿದ್ದಾರೆ. ನನ್ನೊಂದಿಗೆ ಪ್ರದ್ಯುಮ್ನ ಆಚಾರ್ಯ, ಶೇಷಗಿರಿ ಆಚಾರ್ಯರೂ ಸೇರಿ ಅನೇಕ ಪ್ರಾಧ್ಯಾಪಕರು ಮಕ್ಕಳಿಗೆ ಬೋಧನೆ ಮಾಡಿದ್ದಾರೆ. ಎಲ್ಲರ ಸಹಕಾರದಿಂದ ವಿದ್ಯಾಪೀಠ ಬೆಳೆಯುತ್ತಿದೆ ಎಂದರು.


ಪಂಡಿತ, ವಿದ್ವಾಂಸರ ಉಪಸ್ಥಿತಿ
ಮಂತ್ರಾಲಯದ ಹಿರಿಯ ವಿದ್ವಾಂಸ ರಾಜಾ ಎಸ್. ಗಿರಿ ಆಚಾರ್ಯ, ಹಿರಿಯ ಪಂಡಿತರಾದ ವಾದಿರಾಜ ಆಚಾರ್ಯ, ವಿದ್ವಾಂಸ ಶೇಷಗಿರಿ ಆಚಾರ್ಯ, ನಾಗಸಂಪಿಗೆ ಆಚಾರ್ಯ, ಶ್ರೀನಿವಾಸಮೂರ್ತಿ ಆಚಾರ್ಯ, ಮಾತರಿಶ್ವಾಚಾರ್ಯ, ವ್ಯಾಸತೀರ್ಥ ವಿದ್ಯಾಪೀಠದ ಪ್ರಾಂಶುಪಾಲ ಶ್ರೀನಿಧಿ ಆಚಾರ್ಯ ಪ್ಯಾಟಿ, ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ.ಡಿ.ಪಿ. ಮಧುಸೂದನಾಚಾರ್ಯ ಇದ್ದರು. ಸಂಜೆ ವಿದ್ವಾನ್ ಸಮೀರಾಚಾರ್ಯರ ದಾಸವಾಣಿ ಸಂಗೀತ ಕಚೇರಿ ರಂಜಿಸಿತು.

ಕೃಷ್ಣಮೂರ್ತಿ ಪುರಂನ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಜೂನ್ 4 ರಂದು ದ್ವಾದಶಿ ಪ್ರಯುಕ್ತ ಬೆಳಗಿನ ಅವಧಿಯಲ್ಲಿ ವಿವಿಧ ಪೀಠಾಧೀಶರಿಂದ ಸಂಸ್ಥಾನ ಪೂಜೆ, ಮಧ್ಯಾಹ್ನದ ಅವಧಿಯಲ್ಲಿ ವಿವಿಧ ವಿದ್ವಾಂಸರಿಂದ ಉಪನ್ಯಾಸವಿದೆ. ಸಂಜೆ ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post