ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾಕ್ಕೆ #Mysore Dasara ಸಂಭ್ರಮ ಆರಂಭಗೊಂಡಿದ್ದು, ನಾಡದೇವಿ ಚಾಮುಂಡೇಶ್ವರಿಗೆ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ #Hampa Nagarajaiah ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿದರು.
ಇದಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ #Chamundeshwari ದೇವಿ ದರ್ಶನ ಪಡೆದು, ಸಾಹಿತಿ ಹಂಪ ನಾಗರಾಜಯ್ಯ ಸೇರಿ ಹಲವರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ 9:15 ರಿಂದ 9:40ರ ಶುಭ ವೃಶ್ಚಿಕ ಲಗ್ನದಲ್ಲಿ ಸಂಭ್ರಮದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
Also read: ಶಿವಮೊಗ್ಗ | ವಿದ್ಯುತ್ ತಗುಲಿ ಯುವಕ ಸಾವು
ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, #CM Siddaramaiah ಡಿಸಿಎಂ ಡಿ ಕೆ ಶಿವಕುಮಾರ್, #DCM D K Shivakumar ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದರು. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post