ಕಲ್ಪ ಮೀಡಿಯಾ ಹೌಸ್ | ಮೈಸೂರು |
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ Yoga Dasara ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ “ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ”ಯನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ Minister S T Somashekar ಹಾಗೂ ಸಂಸದ ಪ್ರತಾಪ್ ಸಿಂಹ MP Prathap Simha ಅವರು ಉದ್ಘಾಟಿಸಿದರು.
ಬಳಿಕ ಪ್ರತಾಪ್ ಸಿಂಹ ಅವರು ಮಾತನಾಡಿ, ನಾಡಹಬ್ಬ ದಸರಾ ಹಬ್ಬದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಬಹಳ ಆಸಕ್ತಿ ಹೊಂದಿದ್ದು, ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಒತ್ತು ನೀಡುತ್ತಿದ್ದಾರೆ ಎಂದರು.

ಸಿಟಿ ಆಫ್ ಯೋಗ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಬೇಕು ಎಂಬ ಆಸೆಯು ಅಂತಾರಾಷ್ಟ್ರೀಯ ಯೋಗಾದಿನದಂದು ನೆರವೇರಿತು. ಮುಂದಿನ ದಿನಗಳಲ್ಲಿ ಯೋಗಕ್ಕೆ ಮೈಸೂರಿನಲ್ಲಿ ಮತ್ತಷ್ಟು ಒತ್ತು ನೀಡುವ ಮೂಲಕ ಯೋಗವನ್ನು ಗಟ್ಟಿಗೊಳಿಸುವ ಕಾರ್ಯವಾಗಬೇಕಿದೆ.ಆರೋಗ್ಯಯುತ ಜೀವನಕ್ಕೆ ಯೋಗವು ಸಹಕಾರಿಯಾಗಿದ್ದು, ಪೋಷಕರು ಮಕ್ಕಳಿಗೆ ಯೋಗ ಕಲಿಸಲು ಹೆಚ್ಚಿನ ಆಸಕ್ತಿ ತೋರಿಸುವಂತೆ ತಿಳಿಸಿದರು.
ವೇದಿಕೆ ಆರಂಭದಲ್ಲಿ ನಾಲ್ಕು ಯೋಗಾಪಟುಗಳು ಯೋಗಾಪ್ರದರ್ಶನ ಮಾಡಿದರು.

Also read: ಬ್ಯಾನ್ ಬೆನ್ನಲ್ಲೇ ಪಿಎಫ್’ಐಗೆ ಕೇಂದ್ರ ನೀಡಿದ ಮತ್ತೊಂದು ಶಾಕ್ ಏನು?
ಈ ಸಂದರ್ಭ ದಸರಾ ಯೋಗಾ ಉಪಸಮಿತಿ ಅಧ್ಯಕ್ಷರಾದ ಬಾಲಕೃಷ್ಣ, ಜಂಗಲ್ ರೆಸಾರ್ಟ್ ಮಾಜಿ ಅಧ್ಯಕ್ಷ ಅಪ್ಪಣ್ಣ, ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಮಿರ್ಲೆ ಶ್ರೀನಿವಾಸ, ಯೋಗದಸರಾ ಉಪವಿಶೇಷಾಧಿಕಾರಿ ಸೀಮಂತಿನಿ, ಯೋಗಾ ಫೌಂಡೇಶನ್ ಕಾರ್ಯದರ್ಶಿ ಶಶಿಕುಮಾರ್ ಇತರರು ಉಪಸ್ಥಿತರಿದ್ದರು.























Discussion about this post