ಕಲ್ಪ ಮೀಡಿಯಾ ಹೌಸ್ | ಮೈಸೂರು |
ಹೊಸ ವರ್ಷದಂದು ಕಟ್ ಮಾಡಿ ಉಳಿದಿದ್ದ ಕೇಕ್ #Cake ತಿಂದು 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಹುಣಸೂರಿನ ಬೋಳನಹಳ್ಳಿ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ನಡೆದಿದೆ.
ಅಸ್ವಸ್ಥಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲ ಮಕ್ಕಳೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
Also Read>> ಮೂಲಸೌಕರ್ಯವಿಲ್ಲದೇ ನರಳುತ್ತಿದೆ ಸೋಮಿನಕೊಪ್ಪ ಭೋವಿ ಕಾಲೋನಿ ಸ್ಮಶಾನ
ಹೊಸ ವರ್ಷದ ದಿನದಂದು ಕೇಕ್ ಕಟ್ ಮಾಡಿ ಉಳಿದಿದ್ದ ಕೇಕ್ ಅನ್ನು ಎರಡು ದಿನದ ನಂತರ ಮಕ್ಕಳು ತಿಂದಿದ್ದಾರೆ ಎಂದು ಹೇಳಲಾಗಿದೆ.
ಕೇಕ್ #Cake ಸೇವಿಸಿದ ಕೆಲವೇ ಕ್ಷಣಗಳಲ್ಲಿ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಬೋಳನಹಳ್ಳಿಯ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಮಕ್ಕಳನ್ನು ದಾಖಲಿಸಲಾಗಿದೆ.
ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್, ನಿರ್ಲಕ್ಷ್ಯತೆ ವಹಿಸಿದ ಶಾಲಾ ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post