ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮುಡಾ ಹಗರಣಕ್ಕೆ #MUDA Scam ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ #CM Siddaramaiah ಅವರು ಮೈಸೂರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ವಿಚಾರಣೆಗೆ ಎದುರಿಸುತ್ತಿದ್ದು, ಮತ್ತೊಂದೆಡೆ ವಿಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಬಿಜೆಪಿ ನಾಯಕರು, ಮಹಿಳಾ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ, ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
Also read: ದರ್ಶನ್ ಕುರಿತ ಬಿಗ್ ನ್ಯೂಸ್ | `ದಾಸ’ನ ಕಟ್ಟಿಹಾಕಲು ಸುಪ್ರೀಂ ಮೆಟ್ಟಿಲೇರುವ ಸಾಧ್ಯತೆ | ಕಾರಣವೇನು?

ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
 
	    	


 Loading ...
 Loading ... 
							



 
                
Discussion about this post