ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಸೇರಿದಂತೆ ನಾಲ್ವರ ವಿರುದ್ಧ ಮುಡಾ ಹಗರಣಕ್ಕೆ #MUDA Scam ಸಂಬಂಧಿಸಿದಂತೆ ಮೈಸೂರಿನ ಲೋಕಾಯುಕ್ತದಲ್ಲಿ ಶುಕ್ರವಾರ ಎಫ್‌ಐಆರ್ ಪ್ರಕರಣ ದಾಖಲು ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಮೈಸೂರಿನ ಲೋಕಾಯುಕ್ತ ಎಸ್ಪಿ ಉದೇಶ್ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲು ಮಾಡಿದ್ದಾರೆ. ಇದರಲ್ಲಿ ಸಿದ್ದರಾಮಯ್ಯ ಎ-1 ಆರೋಪಿ. ಅವರ ಪತ್ನಿ ಪಾರ್ವತಿ ಎ-2 ಆರೋಪಿ ಮಾಡಲಾಗಿದೆ. ಸಿದ್ದರಾಮಯ್ಯ ಬಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ ಎ-3, ಜಮೀನು ಮಾರಾಟ ಮಾಡಿದ ದೇವರಾಜು ಎ-4 ನೇ ಆರೋಪಿಯಾಗಿದ್ದಾರೆ.
ಇದರೊಂದಿಗೆ ಮುಖ್ಯಮಂತ್ರಿಗೆ ಕಾನೂನಿನ ತೊಡಕು ಎದುರಾಗಿದೆ. ದಸರಾ #Dasara ಸಂದರ್ಭ ಕೆಲವು ಕಾರ್ಯಕ್ರಮದಲ್ಲಿ ಭಾಗಿ ಆಗಲು ಆಗಮಿಸಿರುವ ಸಿಎಂಗೆ ಶನಿವಾರದಿಂದಲೇ ಲೋಕಾಯುಕ್ತ ತನಿಖೆ ಚುರುಕುಗೊಳ್ಳುವ ಸಾಧ್ಯತೆ ಇದ್ದು ಸಂಕಷ್ಟ ಬಂದೊದಗಿದಂತಾಗಿದೆ.
Also read: ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ
ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ ಅಲ್ಲಿ ಕೇಂದ್ರ ಸರ್ಕಾರ ಇ.ಡಿ., ಸಿಬಿಐ ಹಾಗೂ ರಾಜಭವನದ ಕಚೇರಿ ದುರುಪಯೋಗ ಆಗುತ್ತಿದೆ ರಾಜ್ಯಪಾಲರು ಯಾವುದು ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ರಾಜ್ಯದ ಆಡಳಿತದಲ್ಲಿ ತಲೆ ಹಾಕುವುದು ಸರಿಯಲ್ಲ ಎಂದು ಕಿಡಿ ಕಾರಿದರು.
ಮುಡಾ ಪ್ರಕರಣದಲ್ಲಿ ಕಾನೂನು ಹೋರಾಟ ಮಾಡುವೆ. ರಾಜಿನಾಮೆ ನೀಡುವ ಅಗತ್ಯವಿಲ್ಲ . ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಲಾಗಿದೆ. ಕಾನೂನು ಮೂಲಕವೇ ಪ್ರಕರಣ ಎದುರಿಸುತ್ತೇನೆ ಎಂದು ವಿವರಿಸಿದರು. 5 ವರ್ಷದ ಅವಧಿಯಲ್ಲಿ ರಾಜ್ಯವನ್ನು ಪ್ರಗತಿಯ ಪಥದಲ್ಲಿ ಕೊಂಡೊಯುವೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಮೋದಿ ರಾಜೀನಾಮೆ ನೀಡಿದ್ರಾ ?
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗೆ ಇದ್ದಾರೆ . ಅವರು ಏನಾದರೂ ರಾಜೀನಾಮೆ ನೀಡಿದ್ದಾರಾ ? ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಗೋದ್ರಾ ಘಟನೆ ನಡೆದಾಗ ನರೇಂದ್ರ ಮೋದಿ #Modi ರಾಜೀನಾಮೆ ನೀಡಿದ್ದರೇ ?
ಎಂದು ಅವರು ಸುದ್ದಿಗಾರರಿಗೆ ಮರು ಪ್ರಶ್ನೆ ಮಾಡಿದರು.
ಹೊರ ನಡೆದ ಮರಿಗೌಡ
ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ವಿಮಾನ ನಿಲ್ದಾಣದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿದ್ದರು. ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಡಾ ಅಧ್ಯಕ್ಷ ಕೆ. ಮರಿಗೌಡಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಬೆಂಬಲಿಗರು ವಿರೋಧ ವ್ಯಕತಪಡಿಸಿ ಆಕ್ರೋಶ ಹೊರ ಹಾಕಿದರು. ಸಿಎಂಗೆ ನಿಮಿಂದಲೇ ಸಮಸ್ಯೆ ಬಂದೊದಗಿದಿದೆ . ನೀವು ಜಾಗ ಖಾಲಿ ಮಾಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಡೆಗೆ ಮರಿಗೌಡ ವಿಮಾನನಿಲ್ದಣ ಸ್ಥಳದಿಂದ ಹೊರ ನಡೆದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post