ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದು ನಿಶ್ಚಿತವಾಗಿದೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ Pramod Muthalik ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಇದಕ್ಕಾಗಿ ಜಮಖಂಡಿ, ಬಾಗಲಕೋಟೆ, ಧಾರವಾಡ ನಗರ, ಶೃಂಗೇರಿ, ಕಾರ್ಕಳ ಸೇರಿ ವಿಧಾನಸಭಾ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಈ ತಿಂಗಳ ಅಂತ್ಯಕ್ಕೆ ಒಂದು ಕ್ಷೇತ್ರವನ್ನು ಅಂತಿಮ ಮಾಡಿಕೊಂಡು ಘೋಷಣೆ ಮಾಡುತ್ತೇನೆ ಎಂದಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಕೇಳಿದ್ದು, ಒಂದು ವೇಳೆ ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಹಿಂದುತ್ವ ಅಜೆಂಡಾದ ಮೂಲಕವೇ ನಾನು ಗೆದ್ದು ಬರುತ್ತೇನೆ ಎಂದರು.
Also read: ಶಾಲಾ ಬಸ್ ಪಲ್ಟಿ: ಐವರು ವಿದ್ಯಾರ್ಥಿಗಳ ದಾರುಣ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post