ಕಲ್ಪ ಮೀಡಿಯಾ ಹೌಸ್ | ಮೈಸೂರು |
ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಸೋಸಲೆ ಗ್ರಾಮದಲ್ಲಿ 8ನೇ ಚಾತುರ್ಮಾಸ್ಯ ವ್ರತ #Chathurmasya Vratha ನಡೆಸಲು ನಿರ್ಧರಿಸಿರುವುದಾಗಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀ ವ್ಯಾಸರಾಜರ ಮಠದ ಪೀಠಾಧಿಪತಿ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ #Shri Vidyashrisha Thirtha Swamiji ತಿಳಿಸಿದ್ದಾರೆ.
ನ್ಯಾಯ ಸುಧಾ ಮಂಗಳ ಮಹೋತ್ಸವದ ಯಶಸ್ಸಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಧನ್ಯತಾ ಸಮರ್ಪಣೆ ಸಭೆ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ವ್ಯಾಸರಾಜರ ಮಠದ ಪರಂಪರೆಯಲ್ಲಿ ಸೋಸಲೆಗೆ ಮಹತ್ವದ ಸ್ಥಾನವಿದೆ. ಚಾತುರ್ಮಾಸ್ಯದ ಅವಧಿಯಲ್ಲಿ ಎಲ್ಲ ಭಕ್ತರೂ ಕ್ಷೇತ್ರಕ್ಕೆ ಆಗಮಿಸಿ ಸತ್ಕಾರ್ಯಗಳಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.
ಆಗಸ್ಟ್ 2 ರಿಂದ ಸೆಪ್ಟೆಂಬರ್ 18ರ ವರೆಗೆ ಚಾತುರ್ಮಾಸ್ಯ ವ್ರತಾಚರಣೆ ನಡೆಯಲಿದೆ. ಈ ಸಂದರ್ಭದಲ್ಲಿ ನಾಗ ಚತುರ್ಥಿ, ಪಂಚಮಿ, ವರಮಹಾಲಕ್ಷ್ಮಿ ವ್ರತ, ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೋತ್ಸವ, ಕೃಷ್ಣ ಜಯಂತಿ, ಗಣೇಶ ಚೌತಿ, ಅನಂತ ವ್ರತ, ಸೀಮೋಲ್ಲಂಘನ ನೆರವೇರಲಿದೆ ಎಂದರು.
ಇದರೊಂದಿಗೆ ಮುದ್ರಾಧಾರಣೆ, ಭಕ್ತರಿಗೆ ಫಲ ಮಂತ್ರಾಕ್ಷತೆ ಅನುಗ್ರಹವೂ ಇರಲಿದೆ. ಚಾತುರ್ಮಾಸ್ಯ ಅವಧಿಯಲ್ಲಿ ಎಲ್ಲಾ ವ್ರತ, ನಿಯಮಗಳನ್ನು ಇದೇ ಕ್ಷೇತ್ರದಲ್ಲಿ ಆಚರಿಸಲು ಸಂಸ್ಥಾನ ನಿರ್ಧರಿಸಿದ್ದು, ಭಕ್ತರು ಸತ್ಕಾರ್ಯ ಸಾಧನೆಗೆ ಸಂಗಮಿಸಬೇಕು ಎಂದವರು ಹೇಳಿದರು.
Also read: ಕಳ್ಳಬಟ್ಟಿ ಸೇವಿಸಿ ದುರಂತ | 34 ಮಂದಿ ದಾರುಣ ಸಾವು | ಘಟನೆ ನಡೆದಿದ್ದು ಎಲ್ಲಿ?
ಶ್ರೀಮನ್ ನ್ಯಾಯ ಸುಧಾ ಮಂಗಳ ಯಶಃದೈವ ಕೃಪೆ ಮತ್ತು ಗುರು ಶ್ರೀ ವ್ಯಾಸತೀರ್ಥರ ಪರಮ ಅನುಗ್ರಹದಿಂದ ಶ್ರೀ ನ್ಯಾಯ ಸುಧಾ ಮಂಗಳ ಮಹೋತ್ಸವ ಯಶಗೊಂಡಿದೆ. 9 ದಿನಗಳ ಮಹೋತ್ಸವದ ಹಿನ್ನೆಲೆಯಲ್ಲಿ 25ಕ್ಕೂ ಹೆಚ್ಚು ವಿವಿಧ ಮಠಾಧಿಪತಿಗಳು, ರಾಜ್ಯ ಮತ್ತು ಹೊರ ರಾಜ್ಯಗಳ ಸಾವಿರಾರು ಭಕ್ತರು ಸಂಗಮಿಸಿದ್ದರು. ನಮ್ಮ ವಿದ್ಯಾಪೀಠ ದ 4 ಯುವಕರು ವಿದ್ವತ್ ಸಭೆಯಲ್ಲಿ ಶ್ರೀ ಮನ್ ನ್ಯಾಯ ಸುಧಾ ಮತ್ತು ವ್ಯಾಸತ್ರಯ ಗ್ರಂಥಗಳ ಪರೀಕ್ಷೆ ಎದುರಿಸಿ ಸುಧಾ ಪಂಡಿತ’ರೆಂದು ಮಾನ್ಯರಾಗಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳ ಹಿಂದೆ ನೂರಾರು ಕಾರ್ಯಕರ್ತರ ಶ್ರಮ ಸಮರ್ಪಣೆ ಆಗಿದೆ. ಅವರೆಲ್ಲರಿಗೂ ಮಂಗಳವಾಗಲಿ ಎಂದು ಶ್ರೀಗಳು ಆಶಿಸಿದರು.
ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಿ.ಪಿ. ಮಧುಸೂದನ ಆಚಾರ್ಯ, ಪ್ರಾಚಾರ್ಯ ಡಾ. ಶ್ರೀನಿಧಿ ಪ್ಯಾಟಿ, ಬೆಂಗಳೂರಿನ ಪೇಜಾವರ ವಿದ್ಯಾಪೀಠದ ಪ್ರಾಧ್ಯಾಪಕ ವಿದ್ವಾನ್ ಮಾತರಿಶ್ವ ಆಚಾರ್ಯ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಗೋ. ಮಧುಸೂದನ, ಜನ ಸೇವಾ ಕೇಂದ್ರದ ಮುಖ್ಯಸ್ಥ ಮಧುಸೂದನ ಮಾತನಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post