ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮೈಸೂರು – ಬೆಂಗಳೂರು ಎಕ್ಸ್ಪ್ರೆಸ್ ವೇ ಟೋಲ್ ಬೆಲೆ ಹೆಚ್ಚಳವನ್ನು ತಡೆಹಿಡಿಯಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಮೈಸೂರು ಸಂಸದ ಪ್ರತಾಪ್ ಸಿಂಹ ಈ ಕುರಿತು ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದು, ಮಾರ್ಚ್ 14ನೇ ತಾರೀಖು ಟೋಲ್ ದರ ಹೆಚ್ಚಳ ಮಾಡಿದಾಗ ಬೆಂಗಳೂರಿನಿಂದ ನಿಡಘಟ್ಟ 135 ರೂಪಾಯಿ ಟೋಲ್ ದರ ನಿಗದಿಪಡಿಸಿದ್ದು. ಅದನ್ನು ಇಂದಿನಿಂದ ಅನ್ವಯವಾಗುವ ರೀತಿಯಲ್ಲಿ 165 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಇಡೀ ದೇಶಾದ್ಯಂತ ಇರುವ ಎಲ್ಲ ಟೋಲ್ ರಸ್ತೆಗಳಲ್ಲಿ ಶೇಕಡಾ 7ರಿಂದ ಒಂದಷ್ಟು ನಿಖರ ಬೆಲೆಯವರೆಗೆ ಹೆಚ್ಚಳ ಮಾಡಲಾಗಿದೆ. ಇದು ಕೇವಲ ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಗೆ ಮಾತ್ರ ಅನ್ವಯವಾಗಿಲ್ಲ ಎಂದು ಹೇಳಿದ್ದಾರೆ.

Also read: ಅಕ್ರಮ ಪ್ರವೇಶಕ್ಕೆ ಯತ್ನಿಸಿದ 8 ಜನ ಶವವಾಗಿ ಪತ್ತೆ! ಘಟನೆ ನಡೆದಿದ್ದೆಲ್ಲಿ?












Discussion about this post