ಕಲ್ಪ ಮೀಡಿಯಾ ಹೌಸ್ | ಮೈಸೂರು |
ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ #Pratap Simha ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ‘ದೇಶ ಇಬ್ಭಾಗವಾದಾಗಲೇ ಮುಸ್ಲಿಮರು ಈ ದೇಶ ಬಿಟ್ಟು ತೊಲಗಿಬಿಡಬೇಕಿತ್ತು. ಇಲ್ಲಿ ಉಳಿದಕೊಂಡವರು ಮಕ್ಕಳನ್ನು ಹುಟ್ಟಿಸುವುದು ಬಿಟ್ಟು ಬೇರೇನು ಮಾಡುತ್ತಿದ್ದಾರೆ ಹೇಳಿ? ಎಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದರು.
Also read: ಐಸಿಸಿ ಚಾಂಪಿಯನ್ಸ್ ಟ್ರೋಫಿ | ನಾಳೆ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ
ಈ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರತಾಪ್ ಸಿಂಹ ವಿರುದ್ಧ ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸೋಷಿಯಲ್ ಮಿಡೀಯಾದಲ್ಲಿ ವ್ಯಕ್ತಿಯೊಬ್ಬ ಮಾಡಿದ್ದ ಪೋಸ್ಟ್ ವೊಂದು ಒಂದು ಸಮುದಾಯವನ್ನು ಕೆರಳಿಸಿತ್ತು. ಬಳಿಕ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದರು. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post