ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಗರದ ವಿವಿಧ ಸಂಚಾರ ಪೊಲೀಸ್ ಠಾಣೆಗಳಲ್ಲಿ ಒಂದೇ ದಿನ ಬರೋಬ್ಬರಿ 7,336 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಮೈಸೂರು ಪೊಲೀಸರು, ಪೊಲೀಸ್ ಆಯುಕ್ತ ಬಿ.ರಮೇಶ್ ಬಾನೋತ್ ನಿರ್ದೇಶನದ ಮೇರೆಗೆ ನಗರದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಗಿದೆ.
ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ನಡೆದ ವಾಹನಗಳ ತಪಾಸಣೆ ವೇಳೆ ತ್ರಿಬಲ್ ರೈಡಿಂಗ್ ಸಂಬಂಧ 169, ಹೆಲ್ಮೆಟ್ ಧರಿಸದ ಸಂಬಂಧ 6,680, ನಂಬರ್ ಪ್ಲೇಟ್ ಇಲ್ಲದ ವಾಹನ 113 ಕೇಸ್ ಹಾಗೂ ಸರಕು ಸಾಗಣೆ ವಾಹನದಲ್ಲಿ ಪ್ರಯಾಣಿಕರನ್ನ ಕರೆದೊಯ್ಯುವುದು 22 ಪ್ರಕರಣಗಳನ್ನ ದಾಖಲಿಸಲಾಗಿದೆ.
ಜೊತೆಗೆ ಡ್ರಂಕ್ ಅಂಡ್ ಡ್ರೈವ್ 33 ಪ್ರಕರಣಗಳು ಸೇರಿ ಒಟ್ಟು 7,336 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳನ್ನ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















