ಕಲ್ಪ ಮೀಡಿಯಾ ಹೌಸ್ | ಮೈಸೂರು |
ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ರಾಜೇಂದ್ರ ತೀರ್ಥರ ಪೂರ್ವಾದಿ ಮಠ, ಸೋಸಲೆ ಶ್ರೀ ವ್ಯಾಸರಾಜರ ಮಹಾ ಸಂಸ್ಥಾನದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರ ಎಂಟನೇ ಚಾತುರ್ಮಾಸ್ಯ ವ್ರತವು ಮೈಸೂರು ಜಿಲ್ಲೆ ತಿ. ನರಸೀಪುರ ಸಮೀಪದ ಸೋಸಲೆ ಗ್ರಾಮದಲ್ಲಿ ಆಗಸ್ಟ್ 2 ರಿಂದ ಚಾಲನೆಗೊಳ್ಳಲಿದೆ.
ಇದರ ಅಂಗವಾಗಿ ಆಗಸ್ಟ್ 1ರ ಇಂದು ಸಂಜೆ 4:30ಕ್ಕೆ ಬನ್ನೂರು ವೃತದಿಂದ ಸೋಸಲೆ ಗ್ರಾಮದ ಶ್ರೀ ವ್ಯಾಸರಾಜರ ಮಹಾಮಠದ ವರೆಗೆ ವೈಭವಯುತ ಮೆರವಣಿಗೆ ಮತ್ತು ಶ್ರೀಗಳ ಪುರ ಪ್ರವೇಶ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮೆರವಣಿಗೆಯಲ್ಲಿ ವಿವಿಧ ಭಜನಾ ಮಂಡಳಿಗಳಿಂದ ದಾಸ ಪದ ಸಂಕೀರ್ತನೆ, ಕೋಲಾಟ ವಿದ್ವಾಂಸರಿಂದ ವೇದ ಘೋಷ, ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಮಂತ್ರಘೋಷ, ಜಾನಪದ ಕಲಾತಂಡಗಳ ಪ್ರದರ್ಶನ ಇತ್ಯಾದಿಗಳನ್ನು ಆಯೋಜಿಸಲಾಗಿದೆ.

ಸೋಸಲೆ ಗ್ರಾಮ ಕುಗ್ರಾಮವಾದರೂ ಅದು ಧಾರ್ಮಿಕ ಪರಂಪರೆಯಲ್ಲಿ ಮಹತ್ವದ ಕ್ಷೇತ್ರವಾಗಿದೆ. ನಮ್ಮ ಪರಂಪರೆಯ ಅನೇಕ ಹಿರಿಯ ಯತಿಗಳು ಇಲ್ಲಿ ಬೃಂದಾವನಸ್ಥರಾಗಿದ್ದಾರೆ. ಇಂತಹ ಕ್ಷೇತ್ರದಲ್ಲಿ ಎಂಟನೇ ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳಲು ನಮಗೆ ಅತೀವ ಸಂತೋಷ ಎನಿಸಿದೆ. ಭಗವದ್ಭಕ್ತರು ಚಾತುರ್ಮಾಸ್ಯ ಸಂದರ್ಭದಲ್ಲಿ ಬಹುವಿಧವಾದ ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಭಾರತೀಯ ಸನಾತನ ಪರಂಪರೆಗೆ ಮತ್ತು ನಮ್ಮ ಸಂಸ್ಕೃತಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕು.
-ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ, ಸೋಸಲೆ ವ್ಯಾಸರಾಜರ ಮಹಾಸಂಸ್ಥಾನದ ಪೀಠಾಧಿಪತಿಗಳು
ಪ್ರತಿನಿತ್ಯದ ಕಾರ್ಯಕ್ರಮಗಳು
ಸೋಸಲೆ ಶ್ರೀಗಳ ಚಾತುರ್ಮಾಸ್ಯ ವ್ರತದ ಅಂಗವಾಗಿ ಆಗಸ್ಟ್ ಎರಡರಿಂದ ಸೆಪ್ಟೆಂಬರ್ 17ರವರೆಗೆ ಪ್ರತಿನಿತ್ಯವೂ ಶ್ರೀಮಠದಲ್ಲಿ ನಿತ್ಯ ಜ್ಞಾನಯಜ್ಞ ಕಾರ್ಯಕ್ರಮವನ್ನು ನಡೆಯಲಿದೆ.
ಇನ್ನು, ಶ್ರೀಕೃಷ್ಣ ಜನ್ಮಾಷ್ಟಮಿಯಂದು ಸಂಸ್ಥಾನ ಪ್ರತಿಮಾ ಶ್ರೀಗೋಪಾಲಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆ ಹಾಗೂ ಭವ್ಯ ಮೆರವಣಿಗೆ, ಉತ್ಸವ ನಡೆಯಲಿದೆ.
ಚಾತುರ್ಮಾಸ್ಯ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ, ಶ್ರೀ ಲಕ್ಷ್ಮೀಕಾಂತ ತೀರ್ಥರ ಆರಾಧನೆ, ಶ್ರೀ ಲಕ್ಷ್ಮೀನಾಥ ತೀರ್ಥರ ಆರಾಧನೆ, ಶ್ರೀ ವಿದ್ಯಾ ಪೂರ್ಣತೀರ್ಥರ ಆರಾಧನೆ ಸಂಪನ್ನಗೊಳ್ಳಲಿದೆ.
ಇವುಗಳೊಂದಿಗೆ ಪ್ರತಿನಿತ್ಯವೂ ಶಾಸ್ತ್ರ ಅರ್ಥ ಗೋಷ್ಠಿ, ವ್ಯಾಸತ್ರಯ ವಿಷಯಗಳಲ್ಲಿ ವಿದ್ವದ್ಗೋಷ್ಠಿ ಹಾಗೂ ಯುವ ಜನರಿಗಾಗಿ ವಿಶೇಷ ಕಾರ್ಯಾಗಾರ ಆಯೋಜನೆಗೊಂಡಿದೆ.

ಗೋ ಸೇವೆ
ಶ್ರೀಮಠದಲ್ಲಿರುವ ಗೋಶಾಲೆಗೆ ಭಕ್ತರು ಗೋಗ್ರಾಸ ಮತ್ತು ಗೋದಾನಗಳನ್ನು ನೀಡುವ ಮೂಲಕ ಸಂಸ್ಥಾನ ಪ್ರತಿಮಾ ಶ್ರೀ ಗೋಪಾಲಕೃಷ್ಣನ ಸೇವೆಯನ್ನು ಮಾಡಬಹುದು ಎಂದು ಚಾತುರ್ಮಾಸ ಮುಖ್ಯ ಆಯೋಜಕರಾದ ಡಾ. ಮಧುಸೂದನ ಆಚಾರ್ಯ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
ಇದರ ಅಂಗವಾಗಿ ಪ್ರತಿದಿನವೂ ಬೆಳಗ್ಗೆ ಏಳಕ್ಕೆ ಸ್ವಾಮೀಜಿ ಅವರಿಂದ ಅಣು ಭಾಷ್ಯ ಶಾಸ್ತ್ರ ಪಾಠ, ವಿದ್ವಾಂಸರಿಂದ ಗೃಹಸ್ಥರಿಗೆ ಸೂತ್ರ ದೀಪಿಕಾ ಗ್ರಂಥದ ಪಾಠ, ಮಾತೆಯರಿಗೆ ಶ್ರೀ ವ್ಯಾಸರಾಜರ ಕೃತಿಗಳ ವಿಶೇಷ ಅಧ್ಯಯನ ಕಾರ್ಯಕ್ರಮಗಳು ನಡೆಯಲಿದೆ.

Discussion about this post