Monday, September 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಜೂನ್ 2-9 | ಸೋಸಲೆ ಶ್ರೀ ವ್ಯಾಸರಾಜ ಮಠದ ಸುಧಾಮಂಗಳ ಮಹೋತ್ಸವ | ಹಲವು ಮಠಾಧೀಶರು ಸಮಾಗಮ

ವಿದ್ವತ್ ಸಭೆಯಲ್ಲಿ 4 ಹಿರಿಯ ವಿದ್ಯಾರ್ಥಿಗಳ ಪರೀಕ್ಷೆ | ಕೃಷ್ಣಮೂರ್ತಿ ಪುರಂನ ವಿದ್ಯಾಪೀಠ - ಜೆಪಿನಗರದ ವಿಠಲ ಧಾಮದಲ್ಲಿ ಸಂಭ್ರಮ

June 1, 2024
in ಮೈಸೂರು
0 0
0
Share on facebookShare on TwitterWhatsapp
Read - 4 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಸೋಸಲೆ ಶ್ರೀ ವ್ಯಾಸರಾಜ ಮಠ #VyasarajaMatha ಮತ್ತು ಶ್ರೀ ವ್ಯಾಸತೀರ್ಥ ವಿದ್ಯಾಪೀಠ ಹಮ್ಮಿಕೊಂಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ಕಾರ್ಯಕ್ರಮ ಜೂನ್ 2 ರಿಂದ 9ರವರೆಗೆ ಮೈಸೂರಿನಲ್ಲಿ ವಿಜೃಂಭಣೆಯಿಂದ ನೆರವೇರಲಿದೆ.

ಸೋಸಲೆ #Sosale ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಡಿನ ಹಲವು ಮಠಾಧೀಶರು, ಸಂತರು, ವಿವಿಧ ರಂಗದ ಗಣ್ಯರು ಭಾಗವಹಿಸಲಿರುವುದು ವಿಶೇಷ. ಇದೇ ಸಂದರ್ಭ ಸೋಸಲೆ ಶ್ರೀಗಳ ಸಹಸ್ರ ಚಂದ್ರದರ್ಶನ ಶಾಂತಿ ಮಹೋತ್ಸವವೂ ಸಂಪನ್ನಗೊಳ್ಳಲಿದೆ.

4 ಜನ ಹಿರಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ – ಸುಧಾ ಪಂಡಿತ ಮನ್ನಣೆ ಪ್ರದಾನ
ಜೂನ್ 2ರಂದು ಸಂಜೆ 4ಕ್ಕೆ ಕೃಷ್ಣಮೂರ್ತಿಪುರಂನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ವ್ಯಾಸತ್ರಯ ಸಹಿತ ಶ್ರೀ ಜಯತೀರ್ಥ ವಿರಚಿತ ಮಹಾನ್ ಗ್ರಂಥ ಶ್ರೀ ನ್ಯಾಯಸುಧಾ ಗ್ರಂಥದ ಅಂತಿಮ ಹಂತದ ಪರೀಕ್ಷೆಗಳು ಆರಂಭವಾಗಲಿವೆ.
ಮಂತ್ರಾಲಯ #Mantralaya ಮಠದ ಶ್ರೀ ಸುಬುಧೇಂದ್ರ ತೀರ್ಥರು, ಮುಳಬಾಗಿಲು ಶ್ರೀಪಾದರಾಜರ ಮಠದ ಶ್ರೀ ಸುಜಯ ನಿಧಿ ತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ.

ಸೋಸಲೆ ಶ್ರೀಗಳಿಂದ 12 ವರ್ಷಗಳಿಂದ ಪಾಠ ಹೇಳಿಸಿಕೊಂಡ ಹಿರಿಯ ವಿದ್ಯಾರ್ಥಿಗಳಾದ ಸೌಮಿತ್ರಿ ಆಚಾರ್ಯ, ಸುಘೋಷ ಆಚಾರ್ಯ,  ಪ್ರಣವ ಆಚಾರ್ಯ ಮತ್ತು ಹೊನ್ನಾಳಿ ಆಯಾಚಿತ ಶ್ರೀಶ ಆಚಾರ್ಯ ಅವರು ನ್ಯಾಯ ಸುಧಾ ಗ್ರಂಥಕ್ಕೆ ವ್ಯಾಖ್ಯಾನ, ಅರ್ಥ, ವಿವರ ನೀಡಲಿದ್ದಾರೆ.

ವಿದ್ವತ್ ಸಭೆಯಲ್ಲಿ ವಿವಿಧ ಮಠಾಧೀಶರು, ಪಂಡಿತರು ಮತ್ತು ವೇದ ಪಾರಂಗತರು ಕೇಳುವ ಪ್ರಶ್ನೆಗೆ ಮೌಖಿಕ ಉತ್ತರ ನೀಡಿ ಪ್ರಶಂಸೆ ಗಳಿಸಲಿದ್ದಾರೆ. ಇವರಿಗೆ ಸಮಾರೋಪದಲ್ಲಿ ‘ಸುಧಾ ಮಂಗಳ ಮಾಡಿದ ಪಂಡಿತ’ ಎಂಬ ಮನ್ನಣೆ ನೀಡಿ, ಸನ್ಮಾನಪತ್ರ, ಗೌರವ ಸಂಭಾವನೆ ಸಹಿತ ಸನ್ಮಾನಿಸಲಾಗುತ್ತದೆ.
3ರಂದು ದಿನಪೂರ್ಣ ಸುಧಾ ಪರೀಕ್ಷೆ ನಡೆಯಲಿದೆ. ಸಂಜೆ 6ಕ್ಕೆ ವಿದ್ವಾನ್ ಸಮೀರಾಚಾರ್ಯರಿಂದ ದಾಸವಾಣಿ ಸಂಗೀತ ಕಚೇರಿ ನಡೆಯಲಿದೆ. ಜೂನ್ 4 ಮತ್ತು 5 ರಂದು ಬೆಳಗಿನ ಅವಧಿಯಲ್ಲಿ ವಿವಿಧ ಪೀಠಾಧೀಶರಿಂದ ಸಂಸ್ಥಾನ ಪೂಜೆ, ಮಧ್ಯಾಹ್ನದ ಅವಧಿಯಲ್ಲಿ ವಿವಿಧ ವಿದ್ವಾಂಸರಿಂದ ಉಪನ್ಯಾಸವಿದೆ. ಸಂಜೆ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರಿಂದ #SatyatmaThirtharu ಅನುಗ್ರಹ ಸಂದೇಶವಿದೆ.

6ರಂದು ಬೆಳಗ್ಗೆ 6ಕ್ಕೆ ವಿವಿಧ ಮಠಾಧಿಪತಿಗಳು ಸಂಸ್ಥಾನ ಪೂಜೆ ನೆರವೇರಿಸಲಿದ್ದಾರೆ. ಕೃಷ್ಣಮೂರ್ತಿಪುರಂನ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ದಿನಪೂರ್ಣ ನ್ಯಾಯಸುಧಾ ಪರೀಕ್ಷೆ ನಡೆಯಲಿದೆ.

ವಿಠಲ ಧಾಮದ ವ್ಯಾಸ ಮಂಟಪದಲ್ಲಿ ಸಾರ್ವಜನಿಕ ಕಾರ್ಯಕ್ರಮ – ಭವ್ಯ ಶೋಭಾಯತ್ರೆ
ಜೂ. 7ರಂದು ಜೆಪಿ ನಗರದಲ್ಲಿರುವ ವಿಠಲ ಧಾಮ ಆವರಣದ ವ್ಯಾಸ ಮಂಟಪದಲ್ಲಿ ಬೆಳಗ್ಗೆ 9ರಿಂದ 12ರ ವರೆಗೆ ನ್ಯಾಯಸುಧಾ ಪರೀಕ್ಷೆ ನಡೆಯಲಿದೆ.

ಪಲಿಮಾರು ಮಠದ #PalimaruMatha ಶ್ರೀ ವಿದ್ಯಾಧೀಶ ತೀರ್ಥರು, ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥರು, ಮುಳಬಾಗಿಲು ಶ್ರೀ ಸುಜಯನಿಧಿ ತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ. ಸಂಜೆ 4. 30ಕ್ಕೆ ನಾದಸ್ವರ, ವೇದಘೋಷ, ವಿವಿಧ ಕಲಾತಂಡಗಳ ಕಲಾ ಪ್ರದರ್ಶನದೊಂದಿಗೆ ಭವ್ಯ ಶೋಭಾಯತ್ರೆ ನೆರವೇರಲಿದೆ.

ಅಕ್ಕಮಾದೇವಿ ರಸ್ತೆ ಟ್ರಾಫಿಕ್ ಸಿಗ್ನಲ್ನಿಂದ – ಜೆಪಿ ನಗರದ ವಿಠಲ ಧಾಮದವರೆಗೆ ಮೆರವಣಿಗೆ ನಡೆಯಲಿದೆ. ಸಂಜೆ 6ಕ್ಕೆ  ರಜತ ಸಿಂಹಾಸನದಲ್ಲಿ ಶ್ರೀ ವ್ಯಾಸರಾಜ ಗುರುಸಾರ್ವಭೌಮರಿಗೆ ಸಾಂಪ್ರದಾಯಿಕ ದರ್ಬಾರ್ ಸಂಪನ್ನಗೊಳ್ಳಲಿದೆ. ವಿವಿಧ ಮಠಾಧೀಶರು ವ್ಯಾಸರಾಜರಿಗೆ ರತ್ನಾಭಿಷೇಕ ಸಮರ್ಪಣೆ ಮಾಡಲಿದ್ದಾರೆ. ನಿವೃತ್ತ ಮುಖ್ಯ ನ್ಯಾಯಾಧೀಶ ಪಿ.ಎಸ್. ದಿನೇಶ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ದಾಸವಾಣಿ
ರಾತ್ರಿ 8ಕ್ಕೆ ವಿದ್ವಾನ್ ಮೈಸೂರು ರಾಮಚಂದ್ರಾಚಾರ್ #MysoreRamachandraAchaya ಮತ್ತು ಸಂಗಡಿಗರಿಂದ ದಾಸವಾಣಿ ರಂಜಿಸಲಿದೆ.

ಜೂ. 8ರಂದು ಬೆಳಗ್ಗೆ 6ಕ್ಕೆ ವಿಠಲ ಧಾಮ ಆವರಣದ ಯಜ್ಞ ವರಾಹ ಮಂಟಪದಲ್ಲಿ ಅರಣಿ ಮಥನ, ಗಣಹೋಮ, ನವಗ್ರಹ ಹೋಮ ಚಾಲನೆ ಪಡೆಯಲಿದೆ. ಬೆಳಗ್ಗೆ 9ಕ್ಕೆ ಸೋಸಲೆ ಶ್ರೀ ವಿದ್ಯಾಶ್ರೀಶರಿಂದ ಸುಧಾ ಅನುವಾದ, ಶ್ರೀ ವೇದವ್ಯಾಸ ಪೂಜೆ ನೆರವೇರಲಿದೆ.

ಭಂಡಾರಕೇರಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ, ಕುಕ್ಕೆ ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥರು, ಭೀಮನಕಟ್ಟೆ ಶ್ರೀ ರಘುವರೇಂದ್ರ ತೀರ್ಥರು ಸೇರಿ ಹಲವು ಮಠಾಧೀಶರು ಸಮಾಗಮಗೊಳ್ಳಲಿದ್ದಾರೆ. ಮಧ್ಯಾಹ್ನ 3.30 ರಿಂದ ವಾಕ್ಯಾರ್ಥ ಗೋಷ್ಠಿ ನಡೆಯಲಿದೆ. ಮಂತ್ರಾಲಯದ ವಿದ್ವಾನ್ ರಾಜ ಎಸ್. ಗಿರಿ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

8 ರಂದು ಸಂತರ ಸಮಾಗಮ
8ರಂದು ಸಂಜೆ ವಿಠಲ ಧಾಮದಲ್ಲಿ 5:30ಕ್ಕೆ ಭವ್ಯ ರಜತ ಸಿಂಹಾಸನದಲ್ಲಿ ಶ್ರೀ ವ್ಯಾಸರಾಜರಿಗೆ ಸಾಂಪ್ರದಾಯಿಕ ದರ್ಬಾರ್ ನಡೆಯಲಿದೆ. ನಂತರ ನಡೆಯುವ ಸಂತರ ಸಮಾಗಮದಲ್ಲಿ ಮಂತ್ರಾಲಯ ಶ್ರೀಗಳು, ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥರು, ಮುಳಬಾಗಿಲು ಶ್ರೀ ಸುಜಯನಿಧಿ ತೀರ್ಥರು, ಸೋದೆ ಶ್ರೀ ವಿಶ್ವವಲ್ಲಭ ತೀರ್ಥರು, ಬಾಳಗಾರು ಶ್ರೀ ರಾಮಪ್ರಿಯ ತೀರ್ಥರು, ಭೀಮನ ಕಟ್ಟೆ ಶ್ರೀ ರಘುವರೇಂದ್ರ ತೀರ್ಥರು, ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ.

http://kalpa.news/wp-content/uploads/2024/04/VID-20240426-WA0008.mp4

ಸುತ್ತೂರು ಶ್ರೀ ಶಿವರಾತ್ರಿ ದೇಶಕೇಂದ್ರ ಸ್ವಾಮೀಜಿ, ಪರಕಾಲ ಮಠದ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಸ್ವಾಮೀಜಿ, ಕಾಗಿನೆಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಅವಧೂತ ದತ್ತಪೀಠದ ಕಿರಿಯ ಶ್ರೀ ದತ್ತ ವಿಜಯಾನಂದ ತೀರ್ಥರು ಉಪಸ್ಥಿತರಿರಲಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನಂ ಇಒ ಧರ್ಮಾ ರೆಡ್ಡಿ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿ. ಶ್ರೀಶಾನಂದ, ನಿವೃತ್ತ ಐಎಎಸ್ ಅಧಿಕಾರಿ ಕೆ. ಜಯರಾಜ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಭಾಗವಹಿಸಲಿದ್ದಾರೆ.

ಸುಧಾಮಂಗಳ ಎಂದರೆ ಘಟಿಕೋತ್ಸವ ಇದ್ದಂತೆ. ಬಹು ವರ್ಷದ ನಂತರ ನಮ್ಮ ಮಠದಲ್ಲಿ ಈ ಕಾರ್ಯಕ್ರಮ ವಿಜೃಂಭಿಸಲಿದೆ. 4 ಜನ ವಿದ್ಯಾರ್ಥಿಗಳು ಸತತ ಅಧ್ಯಯನದಿಂದ ಸುಧಾ ಪರೀಕ್ಷೆಗೆ ತಯಾರಾಗಿದ್ದಾರೆ. ಇವರಿಗೆ ಅಕ್ಷರಾಭ್ಯಾಸದಿಂದ ಆರಂಭಿಸಿ 12 ವರ್ಷಗಳ ಕಾಲ ಪಾಠ ಮಾಡಿ, ವಿದ್ವತ್ ಪ್ರಪಂಚಕ್ಕೆ ಕೊಡುಗೆಯಾಗಿ ನೀಡುತ್ತಿರುವ ಕೀರ್ತಿ ಸೋಸಲೆ ಶ್ರೀಗಳಿಗೆ ಸಲ್ಲುತ್ತಿದೆ. ಶ್ರೀ ವ್ಯಾಸತೀರ್ಥ ವಿದ್ಯಾಪೀಠದ  ಈ ವೈಭವಕ್ಕೆ ನಾಡಿನ ವಿವಿಧ ಪ್ರಖ್ಯಾತ ಮಠಾಧೀಶರು ಸಾಕ್ಷಿ ಆಗಲಿದ್ದಾರೆ ಎಂಬುದೇ ಹೆಮ್ಮೆ.
-ಡಿ.ಪಿ. ಮಧುಸೂದನಾಚಾರ್ಯ, ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ, ಮೈಸೂರು

9ರಂದು 72 ಕುಂಡಗಳಲ್ಲಿ ಹೋಮ
ಜೂ. 9ರಂದು ಬೆಳಗ್ಗೆ 6ಕ್ಕೆ ವಿಠಲ ಧಾಮದಲ್ಲಿ ವಿವಿಧ ಪೀಠಾಧೀಶರಿಂದ ಸಂಸ್ಥಾನ ಪೂಜೆ, 72 ಪ್ರತ್ಯೇಕ ಕುಂಡಗಳಲ್ಲಿ  ತಂತ್ರ ಸಾರೋಕ್ತ  ಮಂತ್ರಗಳಿಂದ ಹೋಮ, ಸಹಸ್ರ ಚಂದ್ರ ದರ್ಶನ ಶಾಂತಿ ಹೋಮದ ಪೂರ್ಣಾಹುತಿ ನೆರವೇರಲಿದೆ. ಸಂಜೆ 5 ನಾದಸ್ವರ, ವಿವಿಧ ವಾದ್ಯಗಳ ಮೇಳ, ವೇದಘೋಷ, ಭಜನೆ ಸಹಿತ ಶ್ರೀ ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥರಿಗೆ ದರ್ಬಾರ್ ನೆರವೇರಲಿದೆ.
ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ವಿಜಯನಗರ ರಾಜವಂಶಸ್ಥ ಕೃಷ್ಣದೇವರಾಯ, ಶಾಸಕರಾದ ಶ್ರೀವತ್ಸ, ಜಿ.ಟಿ. ದೇವೇಗೌಡ, ಹರೀಶ ಗೌಡ, ರಾಜ್ಯ ವಸತಿ ಯೋಜನಾ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಪ್ರಕಾಶ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ಇತರರು ಭಾಗವಹಿಸಲಿದ್ದಾರೆ. ವಿವಿಧ ರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ.ಡಿ.ಪಿ. ಮಧುಸೂದನಾಚಾರ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadamysoreNyayasudha MangalaSatyatama ThirtharuSosalesri subhudendra theertharuVyasaraja Muttಉತ್ತರಾದಿ ಮಠಮಂತ್ರಾಲಯಮುಳಬಾಗಿಲುಮೈಸೂರುಶ್ರೀ ವ್ಯಾಸತೀರ್ಥ ವಿದ್ಯಾಪೀಠಶ್ರೀಮನ್ ನ್ಯಾಯ ಸುಧಾ ಮಂಗಳಸೋಸಲೆ ಶ್ರೀ ವ್ಯಾಸರಾಜ ಮಠ
Previous Post

ಬಾಲ ಕಾರ್ಮಿಕರನ್ನು ಹೊಂದಿದ ಮಾಲಿಕರ ವಿರುದ್ಧ ಸೂಕ್ತ ಕ್ರಮ: ಡಿಸಿ ಗುರುದತ್ತ ಹೆಗಡೆ ಸೂಚನೆ

Next Post

ಸೊರಬ ಪೊಲೀಸರ ಭರ್ಜರಿ ಕಾರ್ಯಾಚರಣೆ | ನಗದು, ವಾಹನ ಸಹಿತ ಅಡಿಕೆ ಕಳ್ಳ ಅಂದರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬ ಪೊಲೀಸರ ಭರ್ಜರಿ ಕಾರ್ಯಾಚರಣೆ | ನಗದು, ವಾಹನ ಸಹಿತ ಅಡಿಕೆ ಕಳ್ಳ ಅಂದರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಸ್ವಯಂ ಪ್ರಶಂಸೆಗಿಂತ ನಮ್ಮ ಗುಣಗಳನ್ನು ಪ್ರಪಂಚ ಗುರುತಿಸಬೇಕು

August 31, 2025
Image Courtesy: Internet

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

August 31, 2025

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

August 31, 2025

ಸೆ.1ರಿಂದ ನಿಮ್ಮ ಜೀ ವಾಹಿನಿಯಲ್ಲಿ ಬರಲಿದ್ದಾರೆ ಕಲಿಯುಗ ಕಾಮಧೇನು ಗುರುಸಾರ್ವಭೌಮರು

August 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಸ್ವಯಂ ಪ್ರಶಂಸೆಗಿಂತ ನಮ್ಮ ಗುಣಗಳನ್ನು ಪ್ರಪಂಚ ಗುರುತಿಸಬೇಕು

August 31, 2025
Image Courtesy: Internet

ತಿರುಪತಿ, ಚಿಕ್ಕಜಾಜೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ತುರ್ತು ಬಿಗ್ ಅಪ್ಡೇಟ್

August 31, 2025

ರಾಜ್ಯದಲ್ಲಿ ಸನಾತನ ಧರ್ಮವನ್ನು ಘಾಸಿಗೊಳಿಸುವ ಶಕ್ತಿಗಳು ಹೆಚ್ಚುತ್ತಿವೆ | ಸಂಸದ ಕಾಗೇರಿ ಆತಂಕ

August 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!