ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮೈಸೂರು: ಪ್ರೀ ವೆಡ್ಡಿಂಗ್ ಶೂಟ್ ವೇಳೆ ನೀರಿನಲ್ಲಿ ಮುಳುಗಿ ಯುವ ಜೋಡಿ ದುರ್ಮರಣಕ್ಕೀಡಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾಗಿದ್ದ ಚಂದ್ರು ಹಾಗೂ ಶಶಿಕಲಾ ದುರ್ಮರಣಕ್ಕೀಡಾದ ದುರ್ದೈವಿಗಳು.
ಈ ಜೋಡಿ ನವೆಂಬರ್ 22ರಂದು ಹಸೆಮಣೆ ಏರಬೇಕಿತ್ತು. ಆದರೆ, ಇಂದುತಲಕಾಡಿನ ಕಾವೇರಿ ನದಿಯಲ್ಲಿ ತೆಪ್ಪದ ಮೇಲೆ ಕುಳಿತು ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡುವ ವೇಳೆ ತೆಪ್ಪ ಮಗುಚಿಕೊಂಡು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post