ಕಲ್ಪ ಮೀಡಿಯಾ ಹೌಸ್ | ಮೈಸೂರು |
ವಕ್ಫ್ ಮಂಡಳಿಯು ಬಡ ಜನರ ಭೂಮಿ ಕಬಳಿಸುತ್ತಿರುವುದರಿಂದ ಕಾನೂನು ಸುವ್ಯವಸ್ಥೆ #Law and Order ಹಾಳಾಗುತ್ತಿದೆ. ಇದಕ್ಕೆ ಸರ್ಕಾರವೇ ನೇರ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ #R Ashok ಆಕ್ರೋಶ ವ್ಯಕ್ತಪಡಿಸಿದರು.
ವಕ್ಫ್ ಮಂಡಳಿಯಿಂದ #Wakf Board ನೋಟಿಸ್ ನೀಡಲಾದ ಸ್ಥಳಗಳಿಗೆ ಭೇಟಿ ನೀಡಿದ ಆರ್.ಅಶೋಕ ಅವರು, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಮಂಡಳಿ ಮೈಸೂರಿನಲ್ಲಿ ಅನೇಕರಿಗೆ ನೋಟಿಸ್ ನೀಡಿದೆ. ಭೂಮಿಯನ್ನು ಕಬಳಿಸುವುದರ ಜೊತೆಗೆ, ಈ ಜಾಗವನ್ನು ಲೀಸ್‌ಗೆ ಪಡೆಯಿರಿ ಎಂದು ವಕ್ಫ್ ಮಂಡಳಿಯ ಅಧಿಕಾರಿಗಳು ಹೇಳುತ್ತಿದ್ದಾರೆ. ಕೆಲವು ಕಡೆ ಬಡಜನರ ಭೂಮಿಗೆ ಬೇಲಿ ಹಾಕಿಕೊಂಡಿದ್ದಾರೆ. ಮುಸಲ್ಮಾನರೇ ಇಲ್ಲದ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಕ್ಫ್ ಮಂಡಳಿಯದ್ದು ಸಮಸ್ಯೆಯೇ ಅಲ್ಲವೆಂದರೆ, ರೈತರು ಹಾಗೂ ಮಠಗಳ ಸ್ವಾಮೀಜಿಗಳು ಪ್ರತಿಭಟನೆ ಏಕೆ ಮಾಡುತ್ತಿದ್ದಾರೆ? ಬಿಜೆಪಿ ಸಚಿವರು ಎಂದಿಗೂ ಪ್ರತಿ ಜಿಲ್ಲೆಗೆ ಹೋಗಿ ನೋಟಿಸ್ ಕೊಡಲು ಸೂಚನೆ ನೀಡಿರಲಿಲ್ಲ. ಆದರೆ ಈಗಿನ ಸಚಿವ ಜಮೀರ್ ಅಹ್ಮದ್ ಪ್ರತಿ ಜಿಲ್ಲೆಗೆ ಹೋಗಿ ಅಧಿಕಾರಿಗಳನ್ನು ಬೆದರಿಸಿ ನೋಟಿಸ್ ಕೊಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು #PM NarendraModi ಕಾನೂನಿನಲ್ಲಿ ತಿದ್ದುಪಡಿ ತಂದು ಈ ತಪ್ಪು ಕೆಲಸವನ್ನು ಸರಿ ಪಡಿಸಲಿದ್ದಾರೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post