ಕಲ್ಪ ಮೀಡಿಯಾ ಹೌಸ್
ಮೈಸೂರು : ಕನ್ನಡ ಚಲನಚಿತ್ರನಟ ದರ್ಶನ್ ಒಡೆತನದ ಫಾರ್ಮ್ ಹೌಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಕುಟುಂಬದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಜಿಲ್ಲೆಯ ಟಿ. ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆಯ ಮೇಲೆ ಸೆ.13ರ ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡುತ್ತಿದ್ದ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ನಾಲ್ಕು ದಿನಗಳ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಬಾಲಕಿ ವಿಷಯವನ್ನು ತಿಳಿಸುತ್ತಿದ್ದಂತೆಯೇ ಪೋಷಕರು ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post